More

    ಹಾಸ್ಟೆಲ್​ನಲ್ಲಿ ಸಹಪಾಠಿಗಳ ಬೆತ್ತಲೆ ವಿಡಿಯೋ ಚಿತ್ರೀಕರಿಸಿ ಜಾಲತಾಣದಲ್ಲಿ ಹರಿಬಿಟ್ಟ ವಿದ್ಯಾರ್ಥಿನಿ! ಭಾರಿ ಪ್ರತಿಭಟನೆ, ಆರೋಪಿ ಅರೆಸ್ಟ್​

    ಚಂಡೀಗಢ: ಖಾಸಗಿ ವಿಶ್ವವಿದ್ಯಾಲಯದ ಸಹಪಾಠಿಗಳ ಅಶ್ಲೀಲ ವಿಡಿಯೋವನ್ನು ಸೋರಿಕೆ ಮಾಡಿದ ಆರೋಪದ ಅಡಿಯಲ್ಲಿ ಮೊಹಾಲಿ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಚಂಡೀಗಢ ಪೊಲೀಸರು ಭಾನುವಾರ (ಸೆ. 18) ಬಂಧಿಸಿದ್ದಾರೆ.

    ವಿಡಿಯೋ ಸೋರಿಕೆಯಾದ ಬೆನ್ನಲ್ಲೇ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿವಿ ಕ್ಯಾಂಪಸ್​ಗೆ ಜಮಾಯಿಸಿ, ಘಟನೆಯ ವಿರುದ್ಧ ಪ್ರತಿಭಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಓರ್ವ ವಿದ್ಯಾರ್ಥಿನಿ ಕುಸಿದುಬೀಳಲು, ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಎಫ್​ಐಆರ್​ ದಾಖಲಾಗಿದ್ದು, ಈ ಬಗ್ಗೆ ಮಾತನಾಡಿರುವ ಡಿಎಸ್​ಪಿ ರೂಪಿಂದರ್​ ಕೌರ್​, ಆರೋಪಿ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಘಟನೆಯ ಕುರಿತು ಪ್ರತಿಕ್ರಿಯಿಸಿದ ಪಂಜಾಬ್​ನ ಶಿಕ್ಷಣ ಸಚಿವ ಎಚ್‌.ಎಸ್.ಬೈನ್ಸ್, ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಶಾಂತವಾಗಿರುವಂತೆ ಮನವಿ ಮಾಡಿದರು ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

    ವಿಶ್ವವಿದ್ಯಾನಿಲಯದಲ್ಲಿ ಶನಿವಾರ ತಡರಾತ್ರಿ ಗಲಾಟೆ ನಡೆದಿದ್ದು, ಮಹಿಳಾ ವಿದ್ಯಾರ್ಥಿಯು ಹಾಸ್ಟೆಲ್​ನಲ್ಲಿ ತನ್ನೊಂದಿಗೆ ಇದ್ದ ಸಹಪಾಠಿಗಳ ಎಂಎಂಎಸ್ ಕ್ಲಿಪ್‌ಗಳನ್ನು ರಹಸ್ಯವಾಗಿ ಚಿತ್ರೀಕರಿಸಿದ್ದು, ಆ ವಿಡಿಯೋಗಳು ಜಾಲತಾಣದಲ್ಲಿ ಕಾಣಿಸಿಕೊಂಡಿವೆ. ಅವುಗಳನ್ನು ನೋಡಿ ವಿದ್ಯಾರ್ಥಿನಿಯರು ಶಾಕ್​ ಆಗಿದ್ದು, ಪ್ರತಿಭಟನೆಯನ್ನು ನಡೆಸಿದ್ದಾರೆ.

    ವರದಿಗಳ ಪ್ರಕಾರ, ಆರೋಪಿ ವಿದ್ಯಾರ್ಥಿನಿಯು ಹಾಸ್ಟೆಲ್​ಮೇಟ್‌ಗಳ ವೀಡಿಯೊಗಳನ್ನು ಚಿತ್ರೀಕರಿಸಿ, ಅವುಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾದ ವ್ಯಕ್ತಿಯೊಬ್ಬನಿಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಆರೋಪಿ ಕಳುಹಿಸುತ್ತಿದ್ದ ಎಂಎಂಎಸ್ ಕ್ಲಿಪ್‌ಗಳನ್ನು ಪಡೆದ ವ್ಯಕ್ತಿ ಅಂತರ್ಜಾಲದಲ್ಲಿ ಅಪ್‌ಲೋಡ್ ಮಾಡಿರುವುದಾಗಿ ತಿಳಿದುಬಂದಿದೆ.

    ವಿದ್ಯಾರ್ಥಿನಿಯೊಬ್ಬಳು ಸ್ನಾನ ಮಾಡುತ್ತಿರುವ ದೃಶ್ಯಾವಳಿಗಳು ವೈರಲ್ ಆದ ಬಳಿಕ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಆದರೆ, ಪೊಲೀಸರು ಆ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಈ ಘಟನೆ ಸಂಬಂಧ ವಿದ್ಯಾರ್ಥಿಗಳು ಪ್ರತಿಭಟಿಸಿದ್ದು, ಕಾಲೇಜು ಆಡಳಿತ ಮಂಡಳಿಯು ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

    ಆತ್ಮಹತ್ಯೆಗೆ ಯತ್ನದ ವಿಚಾರವನ್ನು ಚಂಡೀಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಪ್ರಕಾರ ತಳ್ಳಿಹಾಕಿದ್ದಾರೆ. ಯಾರೊಬ್ಬರು ಆತ್ಮಹತ್ಯೆಗೆ ಯತ್ನಿಸಿಲ್ಲ. ಒಬ್ಬ ಹುಡುಗಿ ಮಾತ್ರ ಪ್ರಜ್ಞೆ ತಪ್ಪಿದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿದ್ದಾರೆ. ಈ ವಿಷಯವನ್ನು ಸೈಬರ್ ಕ್ರೈಂ ಬ್ರಾಂಚ್‌ಗೆ ವರದಿ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಅಂತಹ ಯಾವುದೇ ವೀಡಿಯೊ ಸೋರಿಕೆಯಾಗಿಲ್ಲ ಎಂದು ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ.ಅರವಿಂದರ್ ಸಿಂಗ್ ಕಾಂಗ್ ಹೇಳಿದ್ದಾರೆ. ಆದರೆ ವಿದ್ಯಾರ್ಥಿಗಳು ತೃಪ್ತರಾಗದ ಕಾರಣ ನಾವು ಪೊಲೀಸರಿಗೆ ಕರೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ, ಚಂಡೀಗಢ ವಿಶ್ವವಿದ್ಯಾಲಯದ ಆತ್ಮಹತ್ಯೆ ಪ್ರಕರಣವು ಸಾಮಾಜಿಕ ಮಾಧ್ಯಮದ ವದಂತಿ ಎಂದು ಪಂಜಾಬ್ ಪೊಲೀಸರು ಹೇಳಿದ್ದಾರೆ. ಸದ್ಯ ತನಿಖೆ ಪ್ರಗತಿಯಲ್ಲಿದೆ. (ಏಜೆನ್ಸೀಸ್​)

    ಬಿಗ್​ಬಾಸ್​ ಕನ್ನಡದ 9ನೇ ಆವೃತ್ತಿಯಲ್ಲಿರಲಿದೆ ಹಲವು ಸರ್ಪ್ರೈಸ್​: ಏನೇನು ಬದಲಾಗಬಹುದು? ಇಲ್ಲಿದೆ ಮಾಹಿತಿ

    VIDEO| ನಮೀಬಿಯಾದಿಂದ ಭಾರತಕ್ಕೆ ಚೀತಾಗಳನ್ನು ಕರೆತಂದ ವಿಮಾನದ ಒಳಗಿನ ದೃಶ್ಯ ಹೀಗಿದೆ ನೋಡಿ…

    ಶಾಲೆಯ ಲಿಫ್ಟ್​ ಬಾಗಿಲುಗಳ​ ಮಧ್ಯೆ ಸಿಲುಕಿ ಶಿಕ್ಷಕಿ ಸಾವು: ಮಟ ಮಟ ಮಧ್ಯಾಹ್ನವೇ ನಡೆಯಿತು ಭಯಾನಕ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts