More

    ಭಾರಿ ಮಳೆಯಿಂದ ರಸ್ತೆಗೆ ಹಾನಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರ ಸ್ಥಗಿತ

    ಚಾಮರಾಜನಗರ: ಭಾರಿ ಮಳೆಯಿಂದ ರಸ್ತೆಗೆ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

    ಹಿಮವದ್​ ಗೋಪಾಲಸ್ವಾಮಿ ಬೆಟ್ಟ, ಕರ್ನಾಟಕದ ಕಾಶ್ಮೀರ ಎಂದೇ ಕರೆಯಲ್ಪಟ್ಟಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ಕೊರಕಲು ಉಂಟಾಗಿ ಸಂಚಾರಕ್ಕೆ ತೊಂದರೆ ಉಂಟಾಗಿದೆ.

    ಮಳೆ ಇದೇ ರೀತಿ ಹೆಚ್ಚಾದರೆ ರಸ್ತೆ ಕುಸಿಯುವ ಭೀತಿ ಇರುವುದರಿಂದ ಸ್ಥಳೀಯ ಆಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರವನ್ನು ನಿಷೇಧ ಮಾಡಿದೆ. ರಸ್ತೆ ದುರಸ್ತಿ ಆಗುವವರೆಗೂ ಯಾವುದೇ ವಾಹನಕ್ಕೂ ಬೆಟ್ಟದ ಮೇಲೆ ಪ್ರವೇಶವನ್ನು ನಿರಾಕರಿಸಲಾಗಿದೆ.

    ಮೈಸೂರಿನ ದಕ್ಷಿಣಕ್ಕೆ ಸುಮಾರು 80 ಕಿ.ಮೀ. ದೂರದಲ್ಲಿ ಊಟಿ ಹೆದ್ದಾರಿಯ ಅಂಚಿನಲ್ಲಿರುವ ಈ ಬೆಟ್ಟವು ಅದ್ಭುತ ಪ್ರಕೃತಿ ಸೌಂದರ್ಯದ ತಾಣ. ಸಮುದ್ರಮಟ್ಟದಿಂದ ಸುಮಾರು 1440 ಮೀ. ಎತ್ತರದಲ್ಲಿ ಮಲೆಯ ಮೇಲೆ ಶ್ರೀಕೃಷ್ಣನ ದೇವಾಲಯವಿದೆ. ವರ್ಷದ ಎಲ್ಲಾ ಕಾಲದಲ್ಲೂ ತಂಪಾದ ಹವಾಗುಣವಿರುವ ಈ ಪ್ರದೇಶದಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಸದಾ ಮಂಜು ಮುಸುಕಿದ ವಾತಾವರಣ ಇರುತ್ತದೆ. ಮಂಜಿನ ಜೊತೆಗೆ ಮಳೆಯ ತುಂತುರು ಹನಿಗಳ ಮಧ್ಯೆ ಹಾಗೂ ವಾಸ್ತವವಾಗಿ ಮೋಡಗಳ ನಡುವೆಯೇ ನಡೆದಾಡಬೇಕಾದ ಸನ್ನಿವೇಶ ಇಲ್ಲಿ ಸಾಮಾನ್ಯ. ದೇವಾಲಯದ ಗರ್ಭಗುಡಿಯ ಬಾಗಿಲಿನ ಮೇಲ್ಭಾಗದಿಂದ ನಿರಂತರವಾಗಿ ಹಿಮದನೀರು ಜಿನುಗುತ್ತಿರುತ್ತದೆ. ಹೀಗಾಗಿ ಇದನ್ನು ಕರ್ನಾಟಕದ ಕಾಶ್ಮೀರ ಎಂದೇ ಕರೆಯಲಾಗುತ್ತದೆ. (ದಿಗ್ವಿಜಯ ನ್ಯೂಸ್​)

    ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್​: ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಕಿರಿಕ್​ ಬ್ಯೂಟಿಯ ಹಾಟ್ ಅವತಾರಗಳು

    ಬಳ್ಳಾರಿಯಲ್ಲಿ ಭಾರತ್​ ಜೋಡೋ ಯಾತ್ರೆ ವೇಳೆ ವಿದ್ಯುತ್​ ಅವಘಡ: ಐವರಿಗೆ ಗಾಯ, ಪರಿಹಾರ ಘೋಷಿಸಿದ ರಾಹುಲ್

    ಕೇರಳ ನರಬಲಿ ಪ್ರಕರಣ: ಆರೋಪಿಗಳು ಶವದ ಮಾಂಸ ತಿಂದಿದ್ದಾರೆ ಎನ್ನುವುದಕ್ಕೆ ಪೊಲೀಸರಿಗೆ ಸಿಕ್ತು ಮಹತ್ವದ ಸಾಕ್ಷಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts