

ಬೆಂಗಳೂರೂ: ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಆಯೋಜಕರಿಗೆ ಪೊಲೀಸ್ ಇಲಾಖೆ ಮಾರ್ಗಸೂಚಿ ಬಿಡುಗಡೆಯಾಗಿದೆ. ಗೌರಿ-ಗಣೇಶ ಹಬ್ಬವನ್ನು ನಮ್ಮ ನಾಡಿನ ಸಂಸ್ಕೃತಿ, ಭಾವೈಕ್ಯತೆಯ ಪ್ರತೀಕವಾಗಿ ಆಚರಿಸಲಾಗುತ್ತಿದ್ದು, ಕೋಮು ಸೌಹಾರ್ದದಿಂದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ವಿನಂತಿ ಮಾಡಿಕೊಂಡಿದೆ.
ಆ. 30 ರಿಂದ ನಗರದಾದ್ಯಂತ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಹಲವಾರು ಸಂಘ ಸಂಸ್ಥೆಗಳು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಗಳಲ್ಲಿ ಮೆರವಣಿಗೆ ಮೂಲಕ ಗಣೇಶ ಮೂರ್ತಿಗಳನ್ನು ನಿಮಜ್ಜನ ಮಾಡಲಾಗಿದ್ದು, ಹಬ್ಬವನ್ನು ಆಚರಿಸುವಾಗ ಆಯೋಜಕರು/ಸಮಿತಿಯವರು ಈ ಕೆಳಕಂಡ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು, ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.