ಭವ್ಯ ಭಾರತ ನಿರ್ಮಾಣದ ಸಂಕಲ್ಪ: ಸಿಎಂ ಬಸವರಾಜ ಬೊಮ್ಮಾಯಿ‌ ಸಲಹೆ

Bommai
Published on

ಬೆಂಗಳೂರು: ಭವಿಷ್ಯದ ಭಾರತ ಉಜ್ವಲ, ಭವ್ಯವಾಗಿ ನಿರ್ಮಾಣವಾಗಬೇಕು ಎಂದು ಸಂಕಲ್ಪಿಸುವ ದಿನವಿದು. ಜಾತಿ, ಮತ-ಪಂಥ ಬೇಧ ಮರೆತು ಭಾರತೀಯರೆಲ್ಲ ಒಂದೇ ಎಂದು ಸಾರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಲಹೆ ನೀಡಿದರು.

ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು 75ವರ್ಷಗಳು ಮಹತ್ವಪೂರ್ಣ ಸಾಧನೆಗೆ ಪ್ರೇರಣಾದಾಯಕವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಮುಂದಿನ 25 ವರ್ಷಗಳು ಅಮೃತ ಕಾಲವಾಗಿದ್ದು, ಸಮೃದ್ಧ, ಸಂದ್ಭರಿತ ಹಾಗೂ ವಿಶ್ವ ಮಾನ್ಯ ರಾಷ್ಟ್ರವಾಗಿಸಲು ಎಲ್ಲರೂ ಶ್ರಮಿಸೋಣ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಅಬಕಾರಿ ಸಚಿವ ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ, ರಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅಪ್ಪರ್ ಮುಖ್ಯ ಕಾರ್ಯದರ್ಶಿ ಡಾಕ್ಟರ್ ರಜನೀಶ್ ಗೋಯಲ್, ಡಾ. ಶಾಲಿನಿ ರಜನೀಶ ಮತ್ತು ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net