More

    ಹಾಸನ ಭೀಕರ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

    ಹಾಸನ: ತಡರಾತ್ರಿ ಅರಸೀಕೆರೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 9 ಮಂದಿ ದುರಂತ ಸಾವಿಗೀಡಾಗಿದ್ದು, ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

    ಮಂಡ್ಯದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕುಂಭ ಸ್ಥಾನದಲ್ಲಿ ಭಾಗಿಯಾದ ಬಳಿಕ ಸಿಎಂ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಘಟನೆ ನಡೆದಿದ್ದು ತುಂಬಾ ದುರಾದೃಷ್ಟಕರ. ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಉಸ್ತುವಾರಿ ಸಚಿವರು ಕುಂಭಮೇಳ ಸಮಾರೋಪ ಮುಗಿಸಿ ಹಾಸನಕ್ಕೆ ತೆರಳಿ ಪರಿಸ್ಥಿತಿ ನಿರ್ವಹಣೆ ಮಾಡಲಿದ್ದಾರೆ ಎಂದರು.

    ಚಾಲಕನ ಬಂಧನ
    ಭೀಕರ ಅಪಘಾತಕ್ಕೆ ಕಾರಣವಾದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಚಾಲಕ ನವೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಲಿನ ಟ್ಯಾಂಕರ್​ ಚಲಾಯಿಸುತ್ತಿದ್ದ ಈತ ರಸ್ತೆ ನಿಯಮವನ್ನು ಉಲ್ಲಂಘಿಸಿ ಎಡಬದಿಯಿಂದ ಬಂದಿದ್ದೇ ಭೀಕರ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

    ಶನಿವಾರ ತಡರಾತ್ರಿ ಕೆಎಸ್​ಆರ್​ಟಿಸಿ ಬಸ್​, ಟೆಂಪೋ ಟ್ರಾವೆಲರ್​ ಹಾಗೂ ಹಾಲಿನ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅರಸೀಕೆರೆ ತಾಲೂಕಿನ ಬಾಣವಾರ ಹೋಬಳಿಯಲ್ಲಿರುವ ಅರಸೀಕೆರೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ದುರಂತ ಸಾವಿಗೀಡಾಗಿದ್ದಾರೆ. ಮೃತರನ್ನು ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60) ಹಾಗೂ ಭಾರತಿ (50) ಎಂದು ಗುರುತಿಸಲಾಗಿದೆ.

    ಪೊಲೀಸ್​ ಮೂಲಗಳ ಪ್ರಕಾರ ಎಡ ಬದಿಯಿಂದ ಬರಬೇಕಿದ್ದ ಹಾಲಿನ ಟ್ಯಾಂಕರ್ ಬಲ ಬದಿಯಿಂದ ಬಂದಿರುವುದೇ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಕಾರಣ ಡಿವಿಯೇಷನ್ ಪಡೆಯದೆ ಹಾಲಿನ ಟ್ಯಾಂಕರ್ ಆಗಮಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

    ಟಿಟಿ ವಾಹನದಲ್ಲಿದ್ದವರು ಅರಸೀಕೆರೆ ತಾಲೂಕಿನ, ಬಾಣವಾರ ಹೋಬಳಿಯ ಹಳ್ಳಿಕೆರೆ ಗ್ರಾಮದವರು. ಧರ್ಮಸ್ಥಳದಿಂದ ಹಾಸನಕ್ಕೆ ತೆರಳಿ, ಅಲ್ಲಿ ಹಾಸನಾಂಬೆಯ ದರ್ಶನ ಪಡೆದು ತಮ್ಮ ಊರಾದ ಹಳ್ಳಿಕೆರೆಗೆ ತೆರಳುತ್ತಿದ್ದರು. ಇನ್ನೇನು ಹಳ್ಳಿಕೆರೆಗೆ ಹೋಗಿ ಮನೆ ಸೇರುವ ತವಕದಲ್ಲಿದ್ದವರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 10 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮತ್ತು ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

    ಘಟನಾ ಸ್ಥಳಕ್ಕೆ ಬಾಣಾವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಹಾಸನದಲ್ಲಿ ತಡರಾತ್ರಿ 9 ಮಂದಿಯನ್ನು ಬಲಿ ಪಡೆದ ಭೀಕರ ರಸ್ತೆ ಅಪಘಾತಕ್ಕೆ ಕಾರಣ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

    ಭಾರಿ ಮಳೆಯಿಂದ ರಸ್ತೆಗೆ ಹಾನಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರ ಸ್ಥಗಿತ

    ಬಳ್ಳಾರಿಯಲ್ಲಿ ಭಾರತ್​ ಜೋಡೋ ಯಾತ್ರೆ ವೇಳೆ ವಿದ್ಯುತ್​ ಅವಘಡ: ಐವರಿಗೆ ಗಾಯ, ಪರಿಹಾರ ಘೋಷಿಸಿದ ರಾಹುಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts