More

    ಹೈಕೋರ್ಟ್​ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ವಿದ್ಯಾರ್ಥಿನಿಯರು

    ನವದೆಹಲಿ: ರಾಜ್ಯದಲ್ಲಿ ಎಬ್ಬಿರುವ ಹಿಜಾಬ್​ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಹೈಕೋರ್ಟ್​ ಏಕ ಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ಹಿಜಾಬ್​ ಪ್ರಕರಣ ವರ್ಗಾವಣೆ ಆಗಿದೆ. ಫೆ. 14ಕ್ಕೆ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ತಕ್ಷಣ ಶಾಲಾ-ಕಾಲೇಜು ತೆರೆಯುವಂತೆ ಮತ್ತು ಆದೇಶ ಬರುವವರೆಗೂ ಯಾವುದೇ ಧಾರ್ಮಿಕ ಉಡುಪು ಧರಿಸದಂತೆ ಹೈಕೋರ್ಟ್​ ವಿಸ್ತೃತ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

    ಇದೀಗ ಹೈಕೋರ್ಟ್​ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಉಲ್ಲೇಖಿಸಲಿದ್ದಾರೆ. ಗುರುವಾರ ಸಂಜೆಯಷ್ಟೇ ಶಾಲಾ-ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಕುರಿತು ಕರ್ನಾಟಕ ಸರ್ಕಾರದ ನಿಯಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅದನ್ನು ಮೊದಲು ಹೈಕೋರ್ಟ್ ಆಲಿಸಲಿ ಎಂದು ಹೇಳಿದೆ.

    ಇನ್ನೊಂದೆಡೆ ಪರಿಸ್ಥಿತಿಯನ್ನು ನೋಡಿಕೊಂಡು ಎರಡು ಹಂತದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಪ್ರೌಢಶಾಲೆಯನ್ನು ಆರಂಭಿಸಲಾಗುವುದು. ಇದಾದ ಬಳಿಕ ಎರಡನೇ ಹಂತದಲ್ಲಿ ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಲಿದೆ. ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ನಂತರ ಕಾಲೇಜು ಆರಂಭಿಸಲು ಸರ್ಕಾರ ಮುಂದಾಗಿದೆ. (ಏಜೆನ್ಸೀಸ್​)

    ಹೊರಗಡೆ ಹೋಗಿ ಮನೆಗೆ ಬಂದಾಗ ಕಾದಿತ್ತು ಶಾಕ್​: ಮಗಳ ಸ್ಥಿತಿಯನ್ನು ಕಂಡು ಕುಸಿದುಬಿದ್ದ ಪಾಲಕರು

    ಹೊರ ಆವರಣದಲ್ಲಿ ಅರೆಬೆತ್ತಲೆ ಸ್ನಾನ: ವಿಡಿಯೋ ಶೇರ್​ ಮಾಡಿದ ನಟಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ

    ಸಾರಿಗೆ ನೌಕರರಿಗೆ ಸಿಹಿ ಸುದ್ದಿ; ವಜಾ ಆಗಿದ್ದವರ ಮರು ನೇಮಕ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts