More

    ಅವಿಶ್ವಾಸ ನಿರ್ಣಯದಿಂದ ಪಾಕ್​ ಪಿಎಂ ಇಮ್ರಾನ್​ ಖಾನ್ ಸದ್ಯಕ್ಕೆ ಸೇಫ್:​ ಸುಪ್ರೀಂ ಮೆಟ್ಟಿಲೇರುತ್ತೇವೆಂದ ಪ್ರತಿಪಕ್ಷಗಳು

    ನವದೆಹಲಿ: ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯದಿಂದ ಸದ್ಯಕ್ಕೆ ಪ್ರಧಾನಿ ಇಮ್ರಾನ್​ ಖಾನ್​, ಸದ್ಯಕ್ಕೆ ಸೇಫ್​ ಆಗಿದ್ದಾರೆ. ಅವಿಶ್ವಾಸ ನಿರ್ಣಯ ವಜಾಗೊಳಿಸಿ ಏಪ್ರಿಲ್ 25ರವರೆಗೆ ಪಾಕಿಸ್ತಾನದ ಸಂಸತ್ ಕಲಾಪವನ್ನು ಮುಂದೂಡಲಾಗಿದೆ.

    ಬಹುಮತ ಸಾಬೀತು ಮಾಡಲು ಇಮ್ರಾನ್​ ಖಾನ್​ ಅವರಿಗೆ ಏಪ್ರಿಲ್​ 25ರವರೆಗೂ ಸಮಯವಿದೆ. ಅವಿಶ್ವಾಸ ನಿರ್ಣಯದ ಹಿಂದೆ ವಿದೇಶದ ಪಿತೂರಿ ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸದ್ಯಕ್ಕೆ ಅವಿಶ್ವಾಸ ನಿರ್ಣಯವನ್ನು ಸದ್ಯಕ್ಕೆ ವಜಾಗೊಳಿಸಲಾಗಿದೆ. ಕಲಾಪ ಆರಂಭಕ್ಕೂ ಮುನ್ನ ಪಾಕ್​ ಸಂಸತ್ತಿನ ಮುಂದೆ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಕಲಾಪಕ್ಕೆ ಆಗಮಿಸಿದ ಇಮ್ರಾನ್​ ಖಾನ್​ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ಮಾಡಿದ್ದರು.

    ಅವಿಶ್ವಾಸ ನಿರ್ಣಯ ವಜಾಗೊಳಿಸಿದ ಬೆನ್ನಲ್ಲೇ ಮಾತನಾಡಿದ ಇಮ್ರಾನ್​ ಖಾನ್​, ವಿದೇಶಿ ಶಕ್ತಿಗಳ ಸಂಚಿನಿಂದ ನನ್ನ ವಿರುದ್ಧ ಅವಿಶ್ವಾಸ ಮಂಡನೆಯಾಗಿತ್ತು. ಹೀಗಾಗಿ ಕಲಾಪ ಮುಂದೂಡುವ ಮೂಲಕ ಸ್ಪೀಕರ್ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದರು. ಆದರೆ, ಇದು ಸಂವಿಧಾನ ವಿರೋಧಿ ನಡೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿದ್ದು, ಇದರ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರುತ್ತೇವೆ ಎಂದು ಹೇಳಿದ್ದಾರೆ.

    ಇನ್ನು ಹೊಸದಾಗಿ ಚುನಾವಣೆ ಎದುರಿಸಲು ಇಮ್ರಾನ್​ ಖಾನ್​ ಕರೆ ನೀಡಿದ್ದಾರೆ. ಮತ್ತೊಮ್ಮೆ ಜನಾದೇಶ ಪಡೆದುಕೊಳ್ಳುತ್ತೇವೆ. ತಮ್ಮನ್ನ ಯಾರು ಆಳಬೇಕು ಎಂಬುದನ್ನು ಪಾಕಿಸ್ತಾನವೇ ನಿರ್ಧರಿಸಬೇಕು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಸಂಸತ್ತು ವಿಸರ್ಜಿಸುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇನೆ. ಪ್ರಜಾಸತ್ತಾತ್ಮಕ ರೀತಿಯಲ್ಲಿ ಚುನಾವಣೆ ನಡೆಯಬೇಕು. ಚುನಾವಣೆಗೆ ಸಿದ್ಧರಾಗುವಂತೆ ಪಾಕಿಸ್ತಾನಕ್ಕೆ ನಾನು ಜನರಿಗೆ ಕರೆ ನೀಡುತ್ತೇನೆ ಎಂದಿದ್ದಾರೆ ಖಾನ್.

    ಇಲ್ಲಿಯವರೆಗೆ ಏನೇನು ನಡೆದಿದೆ?
    ಮಾರ್ಚ್​ 8: ರಾಷ್ಟ್ರದ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ಹೆಚ್ಚಳಕ್ಕೆ ಪ್ರಧಾನಿ ಇಮ್ರಾನ್​ ಖಾನ್​ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷವೇ ಕಾರಣ ಎಂದು ಆರೋಪಿಸಿ, ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯ ಸೆಕ್ರೆಟರಿಯೇಟ್​ಗೆ ಮಾರ್ಚ್​ 8ರಂದು ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿವೆ.

    ಮಾರ್ಚ್ 25: ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯ ನಿರ್ಣಾಯಕ ಅಧಿವೇಶನವು ಪ್ರತಿಪಕ್ಷದ ಶಾಸಕರ ಗದ್ದಲದ ಪ್ರತಿಭಟನೆಯ ನಡುವೆ ನಿರ್ಣಯವನ್ನು ಮಂಡಿಸದೆ ಮುಂದೂಡಲ್ಪಟ್ಟಿತು.

    ಮಾರ್ಚ್​ 27: ಇಸ್ಲಾಮಾಬಾದ್‌ನ ಪರೇಡ್ ಮೈದಾನದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಶಕ್ತಿ ಪ್ರದರ್ಶನ ನಡೆಸಿದರು.

    ಮಾರ್ಚ್​ 28: ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಅಂತಿಮವಾಗಿ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಂಡಿಸಲಾಯಿತು. ಅವಿಶ್ವಾಸ ಮತ ಮಂಡನೆಯಾದ ತಕ್ಷಣ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

    ಮಾರ್ಚ್​ 30: ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರದ ಪ್ರಮುಖ ಮೈತ್ರಿ ಪಕ್ಷ ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (ಎಂಕ್ಯೂಎಂ-ಪಿ) ಪ್ರತಿಪಕ್ಷಕ್ಕೆ ಬೆಂಬಲ ನೀಡಿದ ನಂತರ ಇಮ್ರಾನ್ ಖಾನ್ ಅವರ ಪಕ್ಷವು ಸಂಸತ್ತಿನ ಕೆಳಮನೆಯಲ್ಲಿ ಬಹುಮತವನ್ನು ಕಳೆದುಕೊಂಡಿತು.

    ಏಪ್ರಿಲ್​ 2: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ನಿರ್ಣಯವನ್ನು ಎದುರಿಸುತ್ತಿರುವ ಕಾರಣ ಭಾನುವಾರ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದರು.

    ಪಾಕ್​ ರಾಷ್ಟ್ರೀಯ ಅಸೆಂಬ್ಲಿ 342 ಸದಸ್ಯರ ಬಲವನ್ನು ಹೊಂದಿದೆ. ಇಮ್ರಾನ್​​ ಖಾನ್​ ಸರ್ಕಾರ ಕೆಡವಲು ಪ್ರತಿಪಕ್ಷಗಳಿಗೆ 172 ಮತಗಳ ಅವಶ್ಯಕತೆ ಇದೆ. ಆದರೆ, ನಮಗೆ 175 ಶಾಸಕರ ಬೆಂಬಲ ಇದೆ ಎಂದು ಹೇಳಿದರೆ, ನಮ್ಮ ಬಳಿ ಒಂದಕ್ಕಿಂತ ಹೆಚ್ಚು ಯೋಜನೆ ಇದೆ ಎಂದು ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಹೇಳಿಕೊಂಡಿದ್ದರು. ಇದೀಗ ಅವಿಶ್ವಾಸ ನಿರ್ಣಯ ವಜಾಗೊಳಿಸಲಾಗಿದ್ದು, ಮುಂದೆ ಪಾಕ್​ ರಾಜಕೀಯದಲ್ಲಿ ಏನು ನಡೆಯಲಿದೆ ಎಂಬ ಕುತೂಹಲ ಮತ್ತಷ್ಟು ಗರಿಗೆದರಿದೆ. (ಏಜೆನ್ಸೀಸ್​)

    ಕೆನಡಾದಲ್ಲಿ ಭಾರತೀಯ ಮೂಲದ ನರ್ಸ್​ ದುರಂತ ಸಾವು

    ಅವಿಶ್ವಾಸ ನಿರ್ಣಯದಲ್ಲಿ ಇಮ್ರಾನ್​ ಖಾನ್ ಸೋತರೆ ಏನಾಗಬಹುದು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪಾಕ್​ ಸಚಿವ​

    ಪಾಕ್​ ಮಾಜಿ ಪ್ರಧಾನಿ ನವಾಜ್​ ಷರೀಫ್​ ಮೇಲೆ ಹಾಲಿ ಪ್ರಧಾನಿ ಇಮ್ರಾನ್​ ಖಾನ್​ ಬೆಂಬಲಿಗರಿಂದ ಹಲ್ಲೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts