ನವದೆಹಲಿ: ಅಕ್ಟೋಬರ್ 17 ರಿಂದ ಆರಂಭವಾಗುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾವನ್ನು ಬಿಸಿಸಿಐ ಬುಧವಾರ (ಸೆ.8) ಪ್ರಕಟಿಸಿದೆ.
ಭಾರತ ತಂಡಕ್ಕೆ ಆಯ್ಕೆಯಾಗಿರುವ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮದ್ ಶಮಿ.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್.
ವಿಶ್ವಕಪ್ ತಂಡಕ್ಕೆ ಧೋನಿ ಮೆಂಟರ್
ಮಾಜಿ ನಾಯಕ ಎಂಎಸ್ ಧೋನಿ ಟಿ20 ವಿಶ್ವಕಪ್ ವೇಳೆ ಭಾರತ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. 2007ರ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಭಾರತ ಪ್ರಶಸ್ತಿ ಗೆದ್ದುಕೊಟ್ಟಿದ್ದ ನಾಯಕ ಧೋನಿ, ಚೆನ್ನೈ ಸೂಪರ್ಕಿಂಗ್ಸ್ ತಂಡಕ್ಕೆ ಐಪಿಎಲ್ ಮತ್ತು ಚಾಂಪಿಯನ್ಸ್ ಲೀಗ್ ಪ್ರಶಸ್ತಿಗಳನ್ನು ಗೆದ್ದುಕೊಟ್ಟ ಅನುಭವ ಹೊಂದಿದ್ದಾರೆ. ಹಿಂದಿನ ಆರೂ ಟಿ20 ವಿಶ್ವಕಪ್ಗಳಲ್ಲಿ ಅವರೇ ಭಾರತ ತಂಡದ ನಾಯಕರಾಗಿದ್ದರು. 2020ರ ಆಗಸ್ಟ್ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದ 40 ವರ್ಷದ ಧೋನಿಗೆ ಇದು ಹೊಸ ಜವಾಬ್ದಾರಿಯಾಗಿದೆ.
ಈ ಮೊದಲು ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕರೊನಾ ಮಹಾಮಾರಿಯಿಂದಾಗಿ ಅರಬ್ ಮತ್ತು ಒಮನ್ಗೆ ಸ್ಥಳಾಂತರವಾಗಿದ್ದು, ಅಕ್ಟೋಬರ್ 17 ರಿಂದ ನವೆಂಬರ್ 14ರವರೆಗೆ ಟಿ20 ವಿಶ್ವಕಪ್ ನಡೆಯಲಿದೆ. ಸಾಂಪ್ರದಾಯಿಕ ಎದುರಾಳಿ ಭಾರತ ಮತ್ತು ಪಾಕಿಸ್ತಾನ ಅಕ್ಟೋಬರ್ 24ರಂದು ಟಿ20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಎದುರಾಳಿ ಆಗಲಿದ್ದು, ಮತ್ತೊಂದು ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗುತ್ತಿದೆ. ನವೆಂಬರ್ 10 ಮತ್ತು 11 ಸೆಮಿಫೈನಲ್ 1 ಮತ್ತು 2 ನಡೆಯಲಿದ್ದು, ನವೆಂಬರ್ 14ಕ್ಕೆ ಫೈನಲ್ ಪಂದ್ಯ ನಡೆಯಲಿದೆ. (ಏಜೆನ್ಸೀಸ್)
ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 24ಕ್ಕೆ ಇಂಡೋ-ಪಾಕ್ ಕ್ರಿಕೆಟ್ ಕದನ
ಮೊದಲ ಬಾರಿಗೆ ಸಾರ್ವಜನಿಕವಾಗಿ ಮಗುವಿನ ತಂದೆ ಬಗ್ಗೆ ಮಾತನಾಡಿದ ಸಂಸದೆ ನುಸ್ರತ್ ಜಹಾನ್..!