More

  ಜಮ್ಮು ಕಾಶ್ಮೀರದಲ್ಲಿ ಉಗ್ರರಿಬ್ಬರಿಂದ ಆತ್ಮಾಹುತಿ ಬಾಂಬ್​ ದಾಳಿ: ಹುತಾತ್ಮರಾದ ಮೂವರು ಯೋಧರು, ಐವರಿಗೆ ಗಾಯ

  ಶ್ರೀನಗರ: ಭಾರತೀಯ ಸೇನಾ ನೆಲೆ ಮೇಲೆ ಉಗ್ರರಿಬ್ಬರು ನಡೆಸಿದ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ಉಗ್ರರಿಬ್ಬರು ಹತರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ದರ್ಹಾಲ್​ ಏರಿಯಾದಲ್ಲಿರುವ ಪರ್ಗಾಲ್​ನಲ್ಲಿ ಗುರುವಾರ ನಡೆದಿದೆ.

  ಈ ಬಗ್ಗೆ ಸೇನಾಧಿಕಾರಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ರಜೌರಿಯಿಂದ 25 ಕಿ.ಮೀ ದೂರದಲ್ಲಿ ಉಗ್ರರು ಈ ದಾಳಿ ನಡೆಸಿದ್ದಾರೆ. ಸೇನಾ ಕಂಪನಿ ಆಪರೇಟಿಂಗ್​ ಬೇಸ್​ ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆಸಿದ್ದು, ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ದಾಳಿಯಲ್ಲಿ ನಮ್ಮ ಮೂವರು ಯೋಧರು ಹುತಾತ್ಮರಾಗಿದ್ದು, ಸ್ಥಳದಲ್ಲಿ ಸೇನಾ ಕಾರ್ಯಾಚರಣೆ ನಡೆಯುತ್ತಿದೆ.

  ಇಂದು ಬೆಳಗ್ಗೆ ದರ್ಹಾಲ್​ ಏರಿಯಾದ ಬುದ್ಧ ಕನಾದಿ ಸಮೀಪ ಇರುವ ಪರ್ಗಾಲ್​ನ ಸೇನಾ ಶಿಬಿರದ ಬೇಲಿಯನ್ನು ದಾಟಿ ಬರಲು ಉಗ್ರರು ಯತ್ನಿಸಿದಾಗ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಉಗ್ರರು ಆತ್ಮಾಹುತಿ ದಾಳಿ ಮಾಡಿದ್ದಾರೆ. ಕಾವಲು ಕರ್ತವ್ಯದಲ್ಲಿ ಯೋಧರ ಮುಂಜಾಗ್ರತ ಕ್ರಮದಿಂದಾಗಿ ದೊಡ್ಡ ಅನಾಹುತ ತಪ್ಪಿದೆ.

  ಘಟನೆಯಲ್ಲಿ ಐವರು ಯೋಧರಿಗೆ ಗಾಯಗಳಾಗಿದ್ದು, ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಬುದ್ಗಾಮ್‌ನಲ್ಲಿ ಮೂವರು ಎಲ್‌ಇಟಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಒಂದು ದಿನದ ನಂತರ ಈ ದಾಳಿ ನಡೆದಿದೆ. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಓರ್ವ, ನಾಗರಿಕರಾದ ರಾಹುಲ್ ಭಟ್ ಮತ್ತು ಅಮರೀನ್ ಭಟ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. (ಏಜೆನ್ಸೀಸ್​)

  VIDEO| ಟಾಲಿವುಡ್​ ಐಟಂ ಸಾಂಗ್​​ಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ ಚಾಹಲ್​ ಪತ್ನಿ ಧನಶ್ರೀ: ವಿಡಿಯೋ ವೈರಲ್​

  ಹುಡುಗಿಯರು ಲೈಂಗಿಕ ಸುಖ ಬಯಸಿದರೆ… ಶಕ್ತಿಮಾನ್​ ಖ್ಯಾತಿಯ ಮುಕೇಶ್​ ಖನ್ನಾ ಹೇಳಿಕೆಗೆ ಭಾರಿ ಆಕ್ರೋಶ!

  ಶೋಕಿಗಾಗಿ ಬೈಕ್​ಗಳನ್ನು ಕದಿಯುತ್ತಿದ್ದ ಇಬ್ಬರು ಬಿ.ಟೆಕ್ ಸ್ಟೂಡೆಂಟ್ಸ್ ಅಂದರ್: 12 ಬುಲೆಟ್, 2 ಡ್ಯೂಕ್ ವಶಕ್ಕೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts