More

    545 PSI ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಕೇಸ್​: ಬಿಜೆಪಿ ನಾಯಕಿಯ ಮನೆಗೆ ಸಿಐಡಿ ತಂಡ ಭೇಟಿ

    ಕಲಬುರಗಿ: ರಾಜ್ಯದಲ್ಲಿ 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ಸಂಬಂಧ ಕಲಬುರಗಿಯ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಮನೆಗೆ ಸಿಐಡಿ ತಂಡ ಭೇಟಿ ನೀಡಿದೆ.

    ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯಾ ಹಾಗರಗಿ ಅವರ ಮನೆಯನ್ನು ಶೋಧಿಸಲು ಸಿಐಡಿ ಡಿವೈಎಸ್ಪಿ ಶಂಕರಗೌಡ ನೇತೃತ್ವದ ತಂಡ ಆಗಮಿಸಿದೆ.

    ದಿವ್ಯಾ ಅವರಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಕೊಠಡಿ ಮೇಲ್ವಿಚಾರಕರು ಹಾಗೂ ಇದೇ ಶಾಲಾಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳನ್ನು ಸಿಐಡಿ ತಂಡ ಬಂಧಿಸಿದೆ. ಈ ಪ್ರಕರಣದಲ್ಲಿ ಇಲ್ಲಿವರಗೆ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ.

    ದಿವ್ಯಾ ಹಾಗರಗಿ ಅವರು ಬಿಜೆಪಿ ಮುಖಂಡೆ ಹಾಗೂ ಹಿಂದುಪರ ಕಾರ್ಯಕರ್ತೆ. ಕಳೆದ ಮೂರ್ನಾಲ್ಕು ದಿನಗಳಿಂದ ದಿವ್ಯಾ ಅವರು ನಾಪತ್ತೆಯಾಗಿದ್ದಾರೆ. ಹೀಗಾಗಿ ದಿವ್ಯಾ ಪತಿ ರಾಜೇಶ್​ರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದಿವ್ಯಾ ಅವರು ವಿಜಯಪುರಕ್ಕೆ ಹೋಗಿರುವುದಾಗಿ ವಿಚಾರಣೆ ವೇಳೆ ರಾಜೇಶ್ ಹಾಗರಗಿ ಮಾಹಿತಿ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ನೇಮಕಾತಿ ಅಕ್ರಮಕ್ಕಿಲ್ಲ ತಡೆಬೇಲಿ; ಮುಗಿಯದ ಪೊಲೀಸ್ ಹುದ್ದೆ ಗೋಲ್ಮಾಲ್: ಆರು ಆರೋಪಿಗಳ ಬಂಧನ

    ಎರಡನೇ ಮದುವೆಗೆ ರೆಡಿಯಾದ ನಾಗಚೈತನ್ಯ! ಹುಡುಗಿ ಯಾರು? ಯಾವಾಗ ಮದುವೆ? ಇಲ್ಲಿದೆ ಮಾಹಿತಿ

    ಕಟ್ಟಡದಿಂದ ಜಿಗಿದು ಪ್ರಾಣ ಬಿಟ್ಟ ವಕೀಲೆ: ಸಾವಿನ ಸುದ್ದಿ ತಿಳಿದು ಪೊಲೀಸ್​ ಠಾಣೆಗೆ ತೆರಳಿ ಶರಣಾದ ಪತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts