More

    ಜನಾಕ್ರೋಶಕ್ಕೆ ಮಣಿದ ಸರ್ಕಾರ: ಸರ್ಕಾರಿ ಕಚೇರಿಗಳಲ್ಲಿ ಫೋಟೋ-ವಿಡಿಯೋ ಶೂಟಿಂಗ್​ ಬ್ಯಾನ್​ ಆದೇಶ ವಾಪಸ್​

    ಬೆಂಗಳೂರು: ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಸರ್ಕಾರಿ ಇಲಾಖೆಗಳ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂಬದ ಆದೇಶವನ್ನು ವಾಪಸ್ ಪಡೆದುಕೊಂಡಿದೆ.

    ನಿನ್ನೆ (ಜುಲೈ 15) ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಆದೇಶ ಹೊರಡಿಸಿತ್ತು. ಸರ್ಕಾರ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಮತ್ತು ವಿಡಿಯೋ ಚಿತ್ರೀಕರಣವನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಇದರ ಬೆನ್ನಲ್ಲೇ ಸರ್ಕಾರದ ಆದೇಶ ಪ್ರತಿ ಎಲ್ಲ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತು. ಸಾರ್ವಜನಿಕರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

    ಇದೀಗ ಜನಾಕ್ರೋಶವನ್ನು ಗಮನಿಸಿರುವ ಸರ್ಕಾರ ತಡರಾತ್ರಿಯೇ ಆದೇಶವನ್ನು ವಾಪಸ್​ ಪಡೆದುಕೊಂಡಿದ್ದು, ಈ ಸಂಬಂಧ ಹೊಸ ಆದೇಶವನ್ನು ಹೊರಡಿಸಿದೆ.

    ಮನವಿ ಮಾಡಿದ್ದ ನೌಕರರ ಸಂಘ
    ಸರ್ಕಾರಿ ನೌಕರರ ಪ್ರಾತಿನಿಧಿಕ ಸಂಸ್ಥೆಯಾಗಿರುವ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿಯೊಂದನ್ನು ಸಲ್ಲಿಸಿ, ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಮಾಡದಂತೆ ನಿಷೇಧಿಸುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಿತ್ತು. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೆಸಾಮಾನ್ಯ. ಕೆಲವು ಖಾಸಗಿ ವ್ಯಕ್ತಿಗಳು ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ವಿಡಿಯೋ, ಫೋಟೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದರಿಂದ ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿತ್ತು. ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟುಮಾಡುತ್ತಿರುವುದರಿಂದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧ ಮಾಡಬೇಕು ಎಂದು ಕೋರಿತ್ತು.

    ತರಾಟೆಗೆ ತೆಗೆದುಕೊಂಡಿದ್ದ ಕೆಆರ್​ಎಸ್ ಪಕ್ಷದ ರವಿಕೃಷ್ಣಾ ರೆಡ್ಡಿ 
    ಕೆಆರ್​ಎಸ್ ಪಕ್ಷದ ರವಿಕೃಷ್ಣಾ ರೆಡ್ಡಿ ಮತ್ತು ಅವರ ತಂಡದವರು ಜಾಲತಾಣದಲ್ಲಿ ಲೈವ್ ಮಾಡಿ ಅಧಿಕಾರಿಗಳನ್ನು ಛೇಡಿಸಿದ ಉದಾಹರಣೆಗಳು ಸಾಕಷ್ಟಿದ್ದವು. ಠಾಣೆ ಮುಂಭಾಗವೇ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದು ಇರುಸುಮುರುಸು ಉಂಟು ಮಾಡಿತ್ತು. ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿದ್ದವು. ಈ ಆದೇಶದ ವಿರುದ್ಧ ಪ್ರತಿಕ್ರಿಯೆ ನೀಡಿದ್ದ ರವಿಕೃಷ್ಣಾ ರೆಡ್ಡಿ, ನೌಕರರ ದುರ್ನಡತೆ, ಭ್ರಷ್ಟಾಚಾರವನ್ನು ಬಯಲಿಗೆಳೆಯಲು ನಮ್ಮ ಪ್ರಯತ್ನವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಈ ಆದೇಶ ಬ್ರಿಟಿಷರ ಕಾನೂನಿನ ರೀತಿ ಇದೆ. ಇದು ಜನ ವಿರೋಧಿ, ಜನರ ಹಕ್ಕು ದಮನ ಮಾಡಿ, ಭ್ರಷ್ಟ ಸರ್ಕಾರಿ ನೌಕರರನ್ನು ರಕ್ಷಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಪ್ರಬಲ ಲೋಕಾಯುಕ್ತವನ್ನು ಕಾಂಗ್ರೆಸ್ ದುರ್ಬಲ ಮಾಡಿತ್ತು, ಬಿಜೆಪಿ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಜನರ ಹಕ್ಕುಗಳನ್ನು ದಮನ ಮಾಡುತ್ತಿದೆ ಎಂದು ಕಿಡಿಕಾರಿದ್ದರು.

    ಜನಾಕ್ರೋಶಕ್ಕೆ ಮಣಿದ ಸರ್ಕಾರ: ಸರ್ಕಾರಿ ಕಚೇರಿಗಳಲ್ಲಿ ಫೋಟೋ-ವಿಡಿಯೋ ಶೂಟಿಂಗ್​ ಬ್ಯಾನ್​ ಆದೇಶ ವಾಪಸ್​

    ನಟ ರಾಘವ ಲಾರೆನ್ಸ್​ ತಲೈವಾ​​ ರಜಿನಿಕಾಂತ್​ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದು ಇದೇ ಕಾರಣಕ್ಕೆ…

    ಎಲೆಕ್ಷನ್ ದೃಷ್ಟಿ, ವರ್ಚಸ್ಸಿಗೆ ಪುಷ್ಟಿ: ಬಿಜೆಪಿ ಚಿಂತನ ಸಭೆ; ಮಿಷನ್ 150 ಗುರಿ ಸಾಧಿಸುವ ಸಂಕಲ್ಪ..

    ಕಾರುಗಳ ಕಳ್ಳಸಂಚಾರ, ಅಪಘಾತ ವಿಮೆ ಕ್ಲೇಮ್​​ಗೂ ಅಡ್ಡದಾರಿ: ವೈಟ್​ಬೋರ್ಡ್ ವಾಹನ ಟ್ಯಾಕ್ಸಿಯಾಗಿ ಬಳಕೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts