More

    ಮಾಡೆಲ್​ಗಳಿಬ್ಬರ ದುರಂತ ಸಾವು: ಕ್ರೈಂ ಬ್ರಾಂಚ್​ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಬಯಲಾಯ್ತು ಸಾವಿನ ರಹಸ್ಯ

    ಕೊಚ್ಚಿ: ಕೇರಳದ ಮಾಡೆಲ್​ಗಳಿಬ್ಬರ ಜೀವ ಕಸಿದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಕೇರಳದ ಅಪರಾಧ ವಿಭಾಗದ ಪೊಲೀಸರು ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ನಂ.18 ಹೋಟೆಲ್​ ಮಾಲೀಕ ರಾಯ್​ ಜೆ ವಯಲತ್​, ಶೈಜು ಥಾಂಕಚೆನ್​, ಕಾರು ಚಾಲಕ ಅಬ್ದು ರೆಹಮಾನ್ ಮತ್ತು ಇತರೆ 8 ಮಂದಿಯನ್ನು ಆರೋಪಿಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

    ಆರೋಪಿ ಸೈಜು ಹಿಂಬಾಲಿಸಿದ್ದರಿಂದ ಮಾಡೆಲ್​ಗಳಿದ್ದ ಕಾರು ಅಪಘಾತಕ್ಕೀಡಾಯಿತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಾಡೆಲ್ಸ್​ ಕಾರು ಚಾಲನೆ ಮಾಡುತ್ತಿದ್ದ ಅಬ್ದು ರೆಹಮಾನ್​ ಮದ್ಯ ಸೇವಿಸಿ ಕಾರು ಚಾಲನೆ ಮಾಡಿದ್ದು, ಅಪಘಾತಕ್ಕೆ ಕಾರಣ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

    ಆರೋಪಿ ಸೈಜು ಥಾಕಂಚೆನ್​ ದುರುದ್ದೇಶದಿಂದಲೇ ಮಾಡೆಲ್​ಗಳನ್ನು ಹಿಂಬಾಲಿಸಿದ ಎಂದು ಅಪರಾಧ ವಿಭಾಗ ತಿಳಿಸಿದೆ. ಪಾರ್ಟಿಯನ್ನು ಮುಗಿಸಿ ಹೊರಡುವ ಮುನ್ನ ಕೊಚ್ಚಿ ಹೋಟೆಲ್​ ನಂ 18ರಲ್ಲೇ ಉಳಿಯುವಂತೆ ಮಾಲೀಕ ರಾಯ್​ ಜೆ ವಲಯತ್​ ಮತ್ತು ಸೈಜು,​ ಮಾಡೆಲ್​ಗಳನ್ನು ಒತ್ತಾಯಿಸಿದ್ದರು. ಇಬ್ಬರ ದುರುದ್ದೇಶವನ್ನು ಹೊಂದಿದ್ದರು ಎಂದು ಚಾರ್ಜ್​ಶೀಟ್​ನಲ್ಲಿ ಕ್ರೈಂ ಬ್ರಾಂಚ್​ ಹೇಳಿದೆ.

    ಹೋಟೆಲ್ ನಂ 18ರ ಎಲ್ಲಾ ಐವರು ಉದ್ಯೋಗಿಗಳ ಮೇಲೆ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ರಾಯ್ ಜೆ ವಯಲತ್ ಅವರ ಮೇಲೂ ಇದೇ ರೀತಿಯ ಆರೋಪ ಹೊರಿಸಲಾಗಿದೆ.

    ಮಾಡೆಲ್​ಗಳಿಬ್ಬರ ಸಾವಿನ ಪ್ರಕರಣವೇನು?
    2021ರ ನವೆಂಬರ್​ 1ರಂದು ಫೋರ್ಟ್​ ಕೊಚ್ಚಿಯಲ್ಲಿ ನಡೆದ ಡಿಜೆ ಪಾರ್ಟಿ ಮುಗಿಸಿಕೊಂಡು ಹಿಂದಿರುಗುವಾಗ ಕೇರಳದ ವ್ಯಟ್ಟಿಲ-ಪಲರಿವಟ್ಟಮ್​ ರಾಷ್ಟ್ರೀಯ ಹೆದ್ದಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಭರವಸೆಯ ಮಾಡೆಲ್​ಗಳು ದುರ್ಮರಣಕ್ಕೀಡಾಗಿದರು. ಘಟನೆಯಲ್ಲಿ 2019ರ ಮಿಸ್​ ಕೇರಳ ವಿಜೇತೆ ಅಟ್ಟಿಂಗಲ್​ ಮೂಲದ ಅನ್ಸಿ ಕಬೀರ್​ (25), ತ್ರಿಸ್ಸೂರ್​ ಮೂಲದ ರನ್ನರ್​ ಅಪ್​ ಅಂಜನಾ ಶಾಜನ್​ (24) ಮತ್ತು ಕೆ.ಎ. ಮಹಮ್ಮದ್​ ಆಶಿಕ್​ (25) ದಾರುಣವಾಗಿ ಮೃತಪಟ್ಟಿದ್ದರು. ಕಾರು ಚಲಾಯಿಸುತ್ತಿದ್ದ ಚಾಲಕ ಅಬ್ದುಲ್​ ರೆಹಮಾನ್​ನನ್ನು ಅತಿವೇಗದ ಚಾಲನೆ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

    ಅಪಘಾತಕ್ಕೀಡಾದ ಕಾರನ್ನು ಹಿಂಬಾಲಿಸಿದ್ದ ಆಡಿ ಕಾರಿನಲ್ಲಿದ್ದ ಸೈಜು ಎಂಬಾತನಿಗೂ ಹೋಟೆಲ್​ ನಂಬರ್​ 18 ಮಾಲೀಕ ರಾಯ್​ಗೂ ಸಂಬಂಧವಿದೆ. ಅದಕ್ಕೆ ಪುಷ್ಟಿ ನೀಡುವಂತೆ ಅಪಘಾತವಾದ ಕೆಲವೇ ಸಮಯದಲ್ಲಿ ಸೈಜು, ರಾಯ್​ರನ್ನು ಸಂಪರ್ಕಿಸಿದ್ದ. ಅಪಘಾತದ ಬೆನ್ನಲ್ಲೇ ಸೈಜು, ರಾಯ್​ ಮತ್ತು ಹೋಟೆಲ್​ ಸಿಬ್ಬಂದಿಗಳಿಗೆ ಕರೆ ಮಾಡಿರುವುದು ತಿಳಿದುಬಂದಿದೆ.

    ಇನ್ನೊಂದೆಡೆ ಪಾರ್ಟಿ ನಡೆದ ಹಾಲ್​ಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳನ್ನು ಆರೋಪಿ ರಾಯ್​, ಪೊಲೀಸರಿಗೆ ಸಲ್ಲಿಸಿದ್ದ. ಆದರೆ, ಡಿಜೆ ಪಾರ್ಟಿಯ ದೃಶ್ಯಗಳು ಇರಲಿಲ್ಲ. ಇದಾದ ಬಳಿಕ ಪೊಲೀಸರು ಹೋಟೆಲ್​ ಮೇಲೆ ದಾಳಿ ಮಾಡಿದರು. ಆದರೆ, ಸಿಸಿಟಿವಿ ಡಿವಿಆರ್​ ಪತ್ತೆ ಆಗಿರಲಿಲ್ಲ. ಹೋಟೆಲ್​ ಸಿಬ್ಬಂದಿಯ ಹೇಳಿಕೆ ಪ್ರಕಾರ ರಾಯ್​, ಡಿವಿಆರ್​ ಅನ್ನು ನಾಶಪಡಿಸಿ ಕೆರೆಯೊಂದರ ಒಳಗೆ ಎಸೆದಿರುವುದಾಗಿ ತಿಳಿಸಿದ್ದ. ಹೀಗಾಗಿ ಹಾರ್ಡ್​ ಡಿಸ್ಕ್​ ಪತ್ತೆ ಹಚ್ಚಲು ಸಿಬ್ಬಂದಿಯನ್ನು ಕೆರೆಯ ಸಮೀಪ ಪೊಲೀಸರು ಕರೆದೊಯ್ದಿದ್ದರು. ಆದರೆ, ಡಿವಿಆರ್​ ಪತ್ತೆಯಾಗಿಲ್ಲ.

    ಈ ನಿಗೂಢ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಇದೀಗ ರಾಯ್​ ವಿರುದ್ಧ ಅಪ್ರಾಪ್ತ ಮೇಲಿನ ಲೈಂಗಿಕ ದೌರ್ಜನ್ಯ ಆರೋಪವೂ ಕೇಳಿಬಂದಿದ್ದು, ಮಾಡೆಲ್​ಗಳಿಬ್ಬರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬರುವ ಸಾಧ್ಯತೆ ಇದೆ. (ಏಜೆನ್ಸೀಸ್)

    ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್​: ರಾಜ್ಯಾದ್ಯಂತ ಏಕಕಾಲದಲ್ಲಿ 78 ಕಡೆ ಎಸಿಬಿ ದಾಳಿ

    ಟ್ರಾಕ್ಸ್​ನ ಆಕ್ಸಲ್ ಕಟ್ ಆಗಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು, ರಾಮೇಶ್ವರಕ್ಕೆ ತೆರಳುವಾಗ ದುರ್ಘಟನೆ

    ಬಿಗ್​ಬಾಸ್​ ನಿರೂಪಕರ ವಿರುದ್ಧವೇ ನಾಲಿಗೆ ಹರಿಬಿಟ್ಟ ಸ್ಪರ್ಧಿ: ಸಿಂಬುಗೆ ಅವಮಾನ, ಅಭಿಮಾನಿಗಳ ಆಕ್ರೊಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts