More

    ಲಕ್ಷದ್ವೀಪ ನಟಿ ಆಯಿಷಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ ಬಿಜೆಪಿಗೆ ಆಘಾತ!

    ನವದೆಹಲಿ: ಲಕ್ಷದ್ವೀಪ ಮೂಲದ ನಟಿ-ಮಾಡೆಲ್​ ಆಯಿಷಾ ಸುಲ್ತಾನರ ವಿರುದ್ಧ ದೇಶದ್ರೋಹ ಪ್ರಕರಣದಡಿಯಲ್ಲಿ ದೂರು ದಾಖಲಿಸಿರುವುದು “ತಪ್ಪು” ಮತ್ತು “ನ್ಯಾಯಸಮ್ಮತವಲ್ಲ” ಎಂದು ಟೀಕಿಸಿರುವ ಬಿಜೆಪಿ ನಾಯಕರು ತಮ್ಮ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸುವ ಮೂಲಕ ನಟಿಯ ಬೆನ್ನಿಗೆ ನಿಂತಿದ್ದಾರೆ.

    ಲಕ್ಷದ್ವೀಪದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಬ್ದುಲ್​ ಹಮೀದ್​ ಮುಲಿಪುಳಾ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಲಕ್ಷದ್ವೀಪ ಘಟಕದ ಬಿಜೆಪಿ ಅಧ್ಯಕ್ಷ ಅಬ್ದುಲ್​ ಖಾದರ್ ಅವರಿಗೆ ರಾಜೀನಾಮೆಯನ್ನು ನೀಡಿದ್ದಾರೆ.

    ಆಯಿಷಾ ವಿರುದ್ಧ ಬಿಜೆಪಿ ಅಧ್ಯಕ್ಷ ಅಬ್ದುಲ್​ ಖಾದರ್​ ದೂರು ದಾಖಲಿಸಿದ್ದಾರೆ. ಕವರತ್ತಿ ಪೊಲೀಸ್​ ಠಾಣೆಯಲ್ಲಿ ಬುಧವಾರ ಸಲ್ಲಿಕೆಯಾಗಿರುವ ದೂರಿನ ಪ್ರಕಾರ ಮಲಯಾಳಂ ಟಿವಿ ಚಾನೆಲ್​ನಲ್ಲಿ ಚರ್ಚಾ ಕಾರ್ಯಕ್ರಮದ ವೇಳೆ, ಲಕ್ಷದ್ವೀಪದಲ್ಲಿ ಕರೊನಾ ಹರಡಿಸಲು ಕೇಂದ್ರ ಸರ್ಕಾರ ಜೈವಿಕ ಅಸ್ತ್ರ ಬಳಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ ಎಂದು ಉಲ್ಲೇಖವಾಗಿದೆ.

    ಲಕ್ಷದ್ವೀಪದಲ್ಲಿ ಕರೊನಾ ಶೂನ್ಯ ಪ್ರಕರಣಗಳಿದ್ದವು. ಇಂದು ದಿನವೊಂದಕ್ಕೆ 100 ಪ್ರಕರಣಗಳು ವರದಿಯಾಗುತ್ತಿವೆ. ಇದು ಕೇಂದ್ರ ಸರ್ಕಾರ ಜೈವಿಕ ಅಸ್ತ್ರದ ಪರಿಣಾಮ ಎಂದು ಸ್ಪಷ್ಟವಾಗಿ ಹೇಳುತ್ತೇನೆಂದು ಡಿಬೇಟ್​ ಕಾರ್ಯಕ್ರಮದಲ್ಲಿ ಆಯಿಷಾ ಸುಲ್ತಾನ ಆರೋಪಿಸಿದ್ದರು.

    ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿರುವ ಬಿಜೆಪಿ ಅಧ್ಯಕ್ಷ ಆಯಿಷಾ ಅವರ ಹೇಳಿಕೆ ದೇಶದ್ರೋಹದ್ದಾಗಿದೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

    ಕವರತ್ತಿ ಪೊಲೀಸರು ದಾಖಲಿಸಿರುವ ಎಫ್​ಐಆರ್​ ಪ್ರಕಾರ ಭಾರತೀಯ ದಂಡ ಸಂಹಿತೆಯ 124 ಎ (ದೇಶದ್ರೋಹ) ಮತ್ತು 153 ಬಿ (ದ್ವೇಷ ಭಾಷಣ) ಸೆಕ್ಷನ್​ ಅಡಿಯಲ್ಲಿ ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಐಶಾ ಸುಲ್ತಾನ ಅವರು ಲಕ್ಷದ್ವೀಪದ ಚೆತಿಯಾತ್ ದ್ವೀಪದ ನಿವಾಸಿ. ಲಕ್ಷದ್ವೀಪ ಮೂಲದ ಮಾಡೆಲ್​ ಮತ್ತು ನಟಿ ಆಗಿರುವ ಆಯಿಷಾ ಸುಲ್ತಾನ ಮಲಯಾಳಂ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

    ಕೇಂದ್ರಾಡಳಿ ಪ್ರದೇಶದ ಆಡಳಿತಾಧಿಕಾರಿ ಬಿಜೆಪಿಯ ಪ್ರಫುಲ್ ಪಟೇಲ್ ಅವರ “ಪ್ರಜಾಪ್ರಭುತ್ವ ವಿರೋಧಿ ಕ್ರಮಗಳ” ವಿರುದ್ಧ ಲಕ್ಷದ್ವೀಪದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಸಮಯದಲ್ಲಿ ಪಕ್ಷದ ನಾಯಕರು ಬಿಜೆಪಿಯ ಲಕ್ಷದ್ವೀಪ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಅವರಿಗೆ ಬರೆದ ಪತ್ರದಲ್ಲಿ ನೀವು ಸುಲ್ತಾನಾ ವಿರುದ್ಧ ಸುಳ್ಳು ಮತ್ತು ಅನ್ಯಾಯದ ದೂರು ದಾಖಲಿಸಿದ್ದೀರಿ ಹಾಗೂ ಅವಳ ಕುಟುಂಬ ಮತ್ತು ಅವಳ ಭವಿಷ್ಯವನ್ನು ಹಾಳುಮಾಡಲು ಪ್ರಯತ್ನಿಸುತ್ತೀದ್ದೀರಿ ಎಂದು ಸ್ವಪಕ್ಷದ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ.

    ಲಕ್ಷದ್ವೀಪದಲ್ಲಿ ಪಟೇಲ್ ಕೈಗೊಂಡ ಕ್ರಮಗಳು “ಜನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಮತ್ತು ಜನರಲ್ಲಿ ತೀವ್ರ ಯಾತನೆ ಉಂಟುಮಾಡುತ್ತವೆ” ಎಂದು ಆರೋಪಿಸಿದ್ದಾರೆ.

    ನಿನ್ನೆ ದೂರಿನ ಬೆನ್ನಲ್ಲೇ ಫೇಸ್​ಬುಕ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಆಯಿಷಾ, ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದಾಗ್ಯೂ, ಸತ್ಯ ಮಾತ್ರ ಮೇಲುಗೈ ಸಾಧಿಸುತ್ತದೆ. ದೂರು ದಾಖಲಿಸಿದ ಬಿಜೆಪಿ ನಾಯಕರು ಸಹ ಲಕ್ಷದ್ವೀಪದವರು. ತನ್ನ ನೆಲಕ್ಕೆ ದ್ರೋಹ ಮಾಡುವುದನ್ನು ಅವರು ಮುಂದುವರಿಸುತ್ತಿದ್ದಂತೆ, ನಾನು ಅದಕ್ಕಾಗಿ ಹೋರಾಡುತ್ತೇನೆ. ದ್ರೋಹ ಮಾಡಿದವರು ನಾಳೆ ಪ್ರತ್ಯೇಕವಾಗುತ್ತಾರೆ ಎಂದು ಆಯಿಷಾ ಸುಲ್ತಾನ ಹೇಳಿದ್ದಾರೆ. (ಏಜೆನ್ಸೀಸ್​)

    ಮದ್ವೆಯಾದ ಎರಡೇ ದಿನದಲ್ಲಿ ಗಂಡನಿಗೆ ಶಾಕ್​ ಕೊಟ್ಟ ಪತ್ನಿ: ಮಲಗಿದ್ದಾಗ ಹಗ್ಗದಿಂದ ಕಟ್ಟಿಹಾಕಿ ಪರಾರಿ!

    719 ವೈದ್ಯರನ್ನು ಬಲಿ ತೆಗೆದುಕೊಂಡ ಎರಡನೇ ಅಲೆ! ನಮ್ಮ ರಾಜ್ಯದಲ್ಲಿ ಎಷ್ಟು?

    2022ರ ಪಂಜಾಬ್ ಚುನಾವಣೆಗೆ ಅಕಾಲಿ ದಳ ಮತ್ತು ಬಿಎಸ್​ಪಿ ಜೋಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts