More

    ಕಲಬುರಗಿ: 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ​ ಬಲೆಗೆ ಬಿದ್ದ ಇಬ್ಬರು ಕಾನ್ಸ್​ಟೇಬಲ್​​ಗಳು

    ಕಲಬುರಗಿ: ಭ್ರಷ್ಟರ ಪಾಲಿಗೆ ದುಸ್ವಪ್ನವಾಗಿ ಕಾಡುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ಮುಂದುವರಿಸಿದ್ದಾರೆ. ಕಲಬುರಗಿಯಲ್ಲಿ 30 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪೊಲೀಸ್​ ಕಾನ್ಸ್​ಟೇಬಲ್​ ಮತ್ತು ಚಾಲಕನನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.

    ಜೇವರ್ಗಿ ಠಾಣೆಯ ಕಾನ್ಸ್​ಟೇಬಲ್ ಶಿವರಾಯ್ ಮತ್ತು ಕಾರು ಚಾಲಕ ಅವ್ವಣ್ಣ, ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಮರಳು ಸಾಗಾಣಿಕೆ ಸಂಬಂಧ ಅಖಿಲ್ ಎಂಬುವರಿಂದ 30 ಸಾವಿರ ರೂಪಾಯಿ ಲಂಚ‌ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಶಿವರಾಯ್ ಮತ್ತು ಅವ್ವಣ್ಣ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

    ಲೋಕಾಯುಕ್ತ ಎಸ್​ಪಿ ಅಬ್ದುಲ್ ರೌಫ್ ಕರ್ನೂಲ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಪೇದೆಗಳಿಬ್ಬರನ್ನು ಲೋಕಾಯುಕ್ತ ಪೊಲೀಸರು ಸ್ಥಳದಲ್ಲೇ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ ಕರೆದೊಯ್ದಿದ್ದಾರೆ.

    ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯಿಂದ ಖದರ್ ಕಳೆದುಕೊಂಡು ಕಳಾಹೀನವಾಗಿದ್ದ ಲೋಕಾಯುಕ್ತಕ್ಕೆ ಹೈಕೋರ್ಟ್​ ಮರುಜೀವ ನೀಡಿದ ಬಳಿಕ, ಸಕ್ರೀಯವಾಗಿರುವ ಲೋಕಾಯುಕ್ತವು, ಸರ್ಕಾರದ ವ್ಯವಸ್ಥೆಯಲ್ಲಿ ಅಡಗಿರುವ ಭ್ರಷ್ಟರ ಮುಖವಾಡಗಳನ್ನು ಕಳಚುತ್ತಿದೆ. (ದಿಗ್ವಿಜಯ ನ್ಯೂಸ್​)

    ಔಷಧ ಚೀಟಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುತ್ತಿರುವ ಡಾಕ್ಟರ್​ ಇವರು! ಅಂಥದ್ದೇನಿದೆ ಈ ಚೀಟಿಯಲ್ಲಿ?

    ಈವರೆಗೂ ನೋಡಿರದ ಮೀರಾ ಜಾಸ್ಮಿನ್ ಹಾಟ್​ ಅವತಾರ! ಮಲಯಾಳಿ ಬ್ಯೂಟಿಯ ಮೈಮಾಟಕ್ಕೆ ಫ್ಯಾನ್ಸ್​ ಫಿದಾ

    ನಿಂತ ವಾಹನದಲ್ಲಿ ಸಾವಾದ್ರೂ ಪರಿಹಾರ ಕೊಡ್ಬೇಕು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts