More

    ರಾಜ್ಯಸಭಾ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

    ನವದೆಹಲಿ: ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಶನಿವಾರ (ಅ.1) ರಾಜೀನಾಮೆ ಸಲ್ಲಿಸಿರುವುದಾಗಿ ಕಾಂಗ್ರೆಸ್​ ಮೂಲಗಳು ತಿಳಿಸಿವೆ.

    ಇದೀಗ ಖರ್ಗೆ ಅವರ ರಾಜೀನಾಮೆಯಿಂದ ತೆರವಾಗಿರುವ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಿ.ಚಿದಂಬರಂ ಮತ್ತು ದಿಗ್ವಿಜಯ ಸಿಂಗ್ ನಡುವೆ ಪೈಪೋಟಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

    ಒಂದು ಸ್ಥಾನ ಒಬ್ಬ ನಾಯಕ ಎಂಬ ನಿಮಯ ಹಿನ್ನೆಲೆಯಲ್ಲಿ ಖರ್ಗೆ ಅವರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

    ನಿನ್ನೆ(ಸೆ.30)ಯಷ್ಟೇ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸಂಸದ ಶಶಿ ತರೂರ್​, ಮಾಜಿ ಸಚಿವ ಕೆ.ಎನ್​. ತ್ರಿಪಾಠಿ ಹಾಗೂ ಮಲ್ಲಿಕಾರ್ಜುನ್​ ಖರ್ಗೆ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ. ಪೃಥ್ವಿರಾಜ್​ ಚೌಹಾಣ್​, ಮನೀಶ್​ ತಿವಾರಿ ಮತ್ತು ಭೂಪಿಂದರ್​ ಹೂಡ ಸೇರಿದಂತೆ ಜಿ-23 ನಾಯಕರು ಖರ್ಗೆ ಅವರನ್ನು ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

    ಇದೇ ಸಂದರ್ಭದಲ್ಲಿ ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದ ದಿಗ್ವಿಜಯ ಸಿಂಗ್ ಅವರು ಪಕ್ಷದ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ಬದಲಿಗೆ ತಮ್ಮ ಹಿರಿಯ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಯನ್ನು ಬೆಂಬಲಿಸುವುದಾಗಿ ಘೋಷಿಸಿದರು.

    ಅಕ್ಟೋಬರ್​ 17ರಂದು ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅ. 19ರಂದು ಕಾಂಗ್ರೆಸ್​ನ ಮುಂದಿನ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬೀಳಲಿದೆ.

    ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಖರ್ಗೆ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ!

    ಪಕ್ಷನಿಷ್ಠೆಗೆ ಉನ್ನತ ಹುದ್ದೆಯ ಅವಕಾಶ: ಖರ್ಗೆ ನಾಮಪತ್ರ ಸಲ್ಲಿಕೆ, ಗೆಲುವು ಬಹುತೇಕ ಖಚಿತ

    ಕಾಂಗ್ರೆಸ್ ಜೋಡೋ ಶುರು, ಉತ್ಸಾಹ ಜೋರು: ರಾಜ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಪಾದಯಾತ್ರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts