ನಿಂತಿದ್ದ ಲಾರಿಗೆ ಸ್ಕೂಟರ್​ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಮೂವರ ದುರಂತ ಸಾವು

blank
blank

ಮಂಡ್ಯ: ನಿಂತಿದ್ದ ಲಾರಿಗೆ ಸ್ಕೂಟರ್​ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ದುರಂತ ಸಾವಿಗೀಡಾಗಿರುವ ಘಟನೆ ನಾಗಮಂಗಲ ತಾಲೂಕಿನ ಗುಡ್ಡೇನಹಳ್ಳಿ ಕ್ರಾಸ್​ ಬಳಿ ಶನಿವಾರ (ಸೆ.4) ರಾತ್ರಿ ನಡೆದಿದೆ.

ಆನಂದ್ (62), ಆರಾಧ್ಯ (10) ಹಾಗೂ ಗೌರವ್ (5) ಮೃತ ದುರ್ದೈವಿಗಳು. ಅಪಘಾತದಲ್ಲಿ ಗಾಯಗೊಂಡಿರುವ ಮೋನಿಕಾ ಸ್ಥಿತಿ ತುಂಬಾ ಗಂಭೀರವಾಗಿದೆ. ಸ್ಕೂಟರ್‌ನಲ್ಲಿ ಸೊಸೆ ಮತ್ತು ಮೊಮ್ಮಕ್ಕಳನ್ನು ಮಾವ ಆನಂದ್​ ಮನೆಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.

ಗುಡ್ಡೇನಹಳ್ಳಿಯಿಂದ ಹೊಣಕೆರೆಗೆ ಬರುವ ವೇಳೆ ಅಪಘಾತವಾಗಿದೆ. ಈ ವೇಳೆ ಆನಂದ್​ ಮತ್ತು ಆರಾಧ್ಯ ಸ್ಥಳದಲ್ಲೇ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಗೌರವ್‌ ಕೊನೆಯುಸಿರೆಳೆದಿದ್ದಾನೆ. ಗಂಭೀರಗೊಂಡಿರುವ ಮೋನಿಕಾಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ಕೌನ್ ಬನೇಗಾ ಕರೋಡ್‌ಪತಿಯಲ್ಲಿ 25 ಲಕ್ಷ ರೂಪಾಯಿ ಗೆದ್ದ ಗಂಗೂಲಿ-ಸೆಹ್ವಾಗ್

ಓವಲ್ ಟೆಸ್ಟ್‌ನಲ್ಲಿ ಹಲವು ದಾಖಲೆಗಳ ಒಡೆಯರಾದ ಹಿಟ್‌ಮ್ಯಾನ್ ರೋಹಿತ್ ಶರ್ಮ

ಭೂಮಿಯಲ್ಲಿ ಭಾರಿ ಸದ್ದು, ಅಲುಗಾಡಿದ ಬೃಹತ್ ಕಟ್ಟಡಗಳು, ಭಯದಿಂದ ಮನೆಯಿಂದ ಹೊರ ಬಂದ ಜನ, ಗುಮ್ಮಟನಗರಿಯಲ್ಲಿ ಭೂಕಂಪನ !

Share This Article

ಮೀನಿನ ಕಣ್ಣು ಆರೋಗ್ಯಕ್ಕೆ ಉತ್ತಮ! ಸೇವನೆಯಿಂದ ಏನ್ನೆಲ್ಲ ಪ್ರಯೋಜನ? ಇಲ್ಲಿದೆ ಉಪಯುಕ್ತ ಮಾಹಿತಿ | Fish Eye

Fish Eye: ಮೀನಿನ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮವೋ, ಅದಕ್ಕಿಂತ ಹೆಚ್ಚಿನ ಆರೋಗ್ಯಕಾರಿ ಅಂಶಗಳು ಮೀನಿನ…

ಪಾರ್ಲಿಮೆಂಟ್​ ಮೆನುವಿನಲ್ಲಿ ರಾಗಿ ಇಡ್ಲಿ ದರ್ಬಾರ್​! ಮಾಡೊದೇಗೆ? ಇಲ್ಲಿದೆ ಸಿಂಪಲ್ಸ್​ ಟಿಪ್ಸ್​​.. | Ragi Idli

Ragi Idli : ಇತ್ತೀಚಿನ ವೇಗದ ಆಧುನಿಕ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳೋದೆ ಕಷ್ಟವಾಗಿದೆ. ಆದರಲ್ಲೂ ಪಟ್ಟಣ…