ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕಳುಹಿಸಿದ್ರೂ ಪಾಲಕರ ಪ್ಲಾನ್​ ಠುಸ್​!

Child Marriage
Published on

ಮಂಡ್ಯ: ಬಾಲ್ಯ ವಿವಾಹ ಮಾಡಿದ ಬಳಿಕ ತಾಳಿ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರೀಕ್ಷೆಗೆ ಕಳುಹಿಸಿದ ಘಟನೆ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ SSLC ವಿದ್ಯಾರ್ಥಿನಿಗೆ ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ನಡೆದಿದೆ. 28ರಂದು ತಾಳಿ, ಕಾಲುಂಗುರ ಬಿಚ್ಚಿಸಿಕೊಂಡು ಪಾಲಕರು ಪರೀಕ್ಷೆ ಬರೆಯಲು ಕಳುಹಿಸಿದ್ದರು.

ಪರೀಕ್ಷೆ ಬರೆಯಲು ಹೋದಾಗ ವಿದ್ಯಾರ್ಥಿನಿ ಸ್ನೇಹಿತೆ ಬಳಿ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಮಾಹಿತಿ ಬಹಿರಂಗಗೊಂಡ ಬೆನ್ನಲ್ಲೇ ಅಧಿಕಾರಿಗಳು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಬಾಲಕಿ ಮಂಡ್ಯದ ಬಾಲ ಮಂದಿರದಲ್ಲಿದ್ದಾಳೆ.

ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ದೂರು ನೀಡಲಾಗಿದೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಂಡ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರಂತೆ. ಬಾಲ್ಯ ವಿಹಾಹ ಮಾಡುತ್ತಿರುವ ಬಗ್ಗೆ ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಮನೆಗೆ ಭೇಟಿ ನೀಡಿ ಅಧಿಕಾರಿಳು ವಾರ್ನಿಂಗ್ ನೀಡಿದ್ದರು.

ಮಾರ್ಚ್ 18 ಮತ್ತು 25 ರಂದು ಅಧಿಕಾರಿಗಳು ಬಾಲಕಿಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಕದ್ದು ವಿವಾಹ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net