ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ: ಹಂತಕರ ಕೃತ್ಯಕ್ಕೆ ಬೆಚ್ಚಿಬಿದ್ದ ಮಂಡ್ಯ ಜನತೆ

Mandya Family
Published on

ಮಂಡ್ಯ: ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್​ನಲ್ಲಿ ನಡೆದಿದೆ.

ಕೆ.ಆರ್.ಎಸ್ ಗ್ರಾಮದ ಬಜಾರ್ ಲೈನ್ ನಿವಾಸಿ ಗಂಗರಾಮ್ ಪತ್ನಿ ಲಕ್ಷ್ಮೀ(30), ಮಕ್ಕಳಾದ ರಾಜ್ (12) ಕೋಮಲ್ (7), ಕುನಾಲ್(5) ಹಾಗೂ ಅಣ್ಣನ ಮಗ ಗೋವಿಂದ್(12) ಕೊಲೆಯಾದ ದುರ್ದೈವಿಗಳು.

ಗಂಗರಾಮ್ ಹಾಗೂ ಆತನ ಅಣ ಗಣೇಶ್ ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಿಗೂ ಹೋಗಿ ವ್ಯಾಪಾರ ಮಾಡುತ್ತಾರಂತೆ. ಒಮ್ಮೆ ವ್ಯಾಪಾರಕ್ಕೆಂದು ಮನೆಯಿಂದ ಹೋದ್ರೆ ಹದಿನೈದರಿಂದ ಒಂದು ತಿಂಗಳು ವಾಪಸ್ ಬರುವುದಿಲ್ಲ.

ಇನ್ನು ಗಂಗರಾಜ್ ಎರಡು ದಿನದ ಹಿಂದೆ ವ್ಯಾಪಾಕ್ಕೆಂದು ಮನೆಯಿಂದ ಹೋಗಿದ್ರು. ಹೀಗಾಗಿ ಲಕ್ಷ್ಮೀ ಮಕ್ಕಳನ್ನು ನೋಡಿಕೊಂಡು ಮನೆಯಲ್ಲೇ ಇದ್ರು. ರಾತ್ರಿ ಎಲ್ಲರೂ ಮಲಗಿದ ಬಳಿಕ ಮನೆಗೆ ನುಗ್ಗಿರುವ ಹಂತಕರು ಹರಿತವಾದ ಮಾರಕಾಸ್ತ್ರಗಳಿಂದ ಐವರನ್ನು ಹತ್ಯೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ದಕ್ಷಿಣ ವಲಯದ ಐಜಿ ಪ್ರವೀಣ್ ಮದುಕರ್ ಪವರ್, ಮಂಡ್ಯ ಎಸ್ಪಿ ಎನ್.ಯತೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಳನೆ ನಡೆಸಿದ್ರು. ಅಲ್ಲದೆ ಶ್ವಾನದಳ ಹಾಗೂ ಬೆರಳಚ್ಚು ತಜ್ಱರು ಪರಿಶೀಲನೆ ನಡೆಸಿದ್ದಾರೆ. ಸಧ್ಯ ಹಂತಕರ ಪತ್ತೆಗಾಗಿ ತಂಡ ರಚನೆ ಮಾಡಲಾಗುತ್ತಿದೆ.

ವಿಶೇಷ ತಂಡ ರಚನೆ

ಮಕ್ಕಳು ಸೇರಿದಂತೆ ಐವರ ಕೊಲೆ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆಯಾಗಿದೆ ಎಂದು ದಕ್ಷಿಣ ವಲಯ ಐಜಿ ಪ್ರವೀಣ್ ಮಧುಕರ್ ಪವರ್ ಹೇಳಿಕೆ ನೀಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹರಿತವಾದ ಆಯುಧ ಬಳಿಸಿ ಕೃತ್ಯ ಮಾಡಿದ್ದಾರೆ. ಸದ್ಯ ಯಾರ ಮೇಲಿಯು ಅನುಮಾನವಿಲ್ಲ. ತನಿಖೆ ಪ್ರಾರಂಭ ಮಾಡಿದ್ದೇವೆ. ಮುಂದಿನ ತನಿಖೆ ಬಗ್ಗೆ ತೀರ್ಮಾನ ಮಾಡ್ತೇವೆ ಎಂದರು. (ದಿಗ್ವಿಜಯ ನ್ಯೂಸ್, ಮಂಡ್ಯ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net