More

    ಮಳವಳ್ಳಿಯಲ್ಲಿ ಅತ್ಯಾಚಾರ ಪ್ರಕರಣ: ಡಿಡಿಪಿಐಗೆ ಬಿಇಒ ಸಲ್ಲಿಸಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

    ಮಳವಳ್ಳಿ: ಟ್ಯೂಷನ್​ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್​ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ, ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ ಸೆಂಟರ್‌ ಅಧಿಕೃತವು ಅಲ್ಲ ಎಂಬ ಸಂಗತಿಯು ಬಯಲಾಗಿದೆ.

    ಟ್ಯೂಷನ್​​ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ‌ ಮೇಲ್ವಿಚಾರಕನಿಂದಲೇ ಅತ್ಯಾಚಾರ ನಡೆದಿತ್ತು. ಅಲ್ಲದೆ, ಆಕೆಯನ್ನು ಕೊಲೆ ಮಾಡಿ, ನೀರಿನ ಸಂಪ್​ ಒಳಗೆ ಹಾಕಿ, ಆರೋಪಿ ವಿಕೃತಿ ಮೆರದಿದ್ದ. ಈ ಘಟನೆಯನ್ನು ಇಡೀ ಕರ್ನಾಟಕದ ಜನತೆ ಖಂಡಿಸುವ ಮೂಲಕ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

    ಘಟನೆ ಬೆನ್ನಲ್ಲೇ ಡಿಡಿಪಿಐಗೆ ಬಿಇಒ ಸಲ್ಲಿಸಿದ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ ಸೆಂಟರ್‌ ಅಧಿಕೃತವು ಅಲ್ಲ ಎಂಬ ಸಂಗತಿಯು ಬಯಲಾಗಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಪ್ರಕರಣ ದಾಖಲಾಗುತ್ತದೆ ಎಂದು ಮಂಡ್ಯದಲ್ಲಿ ಡಿಡಿಪಿಐ ಜವರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಘಟನೆ ಬಳಿಕ ಶಿಕ್ಷಣ ಇಲಾಖೆ ಹೈ ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆಯಾದ್ಯಂತ ಇರುವ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿದ್ದಾರೆ. ಅನಧಿಕೃತ ಟ್ಯೂಷನ್ ಕಂಡು ಬಂದರೆ ಅಥವಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದ್ರೆ ಶಿಸ್ತುಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಎಚ್ಚರವಹಿಸಿದೆ.

    ಟ್ಯೂಷನ್​ಗೆ ತೆರಳಿದ್ದ ಬಾಲಕಿ ಮೇಲೆ ಎರಗಿದ್ದ ಕೀಚಕ ಕಾಂತರಾಜು, ಜ್ಞಾನ ಕುಟೀರ ಟ್ಯೂಷನ್ ಸೆಂಟರ್​ನಲ್ಲಿ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ. ಆದರೆ, ಆತ ಶಿಕ್ಷಕನೇ ಅಲ್ಲ ಎಂದು ವರದಿಯಲ್ಲಿ ಬಹಿರಂಗವಾಗಿದೆ. ಆತ ಓದಿದ್ದು ಕೇವಲ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ. ಇತ್ತ ಟ್ಯೂಷನ್ ಸೆಂಟರ್​ಗೂ ಯಾವುದೇ ಅನುಮತಿಯು ಇಲ್ಲ. ಇಂತಹ ಟ್ಯೂಷನ್​ಗಳ ಮೇಲೆ ಎಚ್ಚರ ವಹಿಸುವಂತೆ ಡಿಡಿಪಿಐ ಜವರೇಗೌಡ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ನಟ ಅರ್ನ​ವ್​ನ ಮತ್ತೊಂದು ಕರ್ಮಕಾಂಡ ಬಯಲು: ತೃತಿಯಲಿಂಗಿ ಜತೆ ಮದ್ವೆ, ದಿವ್ಯಾಳ ಆರೋಪಕ್ಕೆ ಮತ್ತಷ್ಟು ಬಲ

    VIDEO| ಲೋಕಲ್​ ಟ್ರೈನ್​ನಲ್ಲಿ ಜುಟ್ಟು ಹಿಡಿದು ಕಿತ್ತಾಡಿಕೊಂಡ ಮಹಿಳೆಯರು: ವಿಡಿಯೋ ನೋಡಿದ ನೆಟ್ಟಿಗರು ಹೇಳಿದ್ದಿಷ್ಟು…

    ಅಧಿಕಾರಿಗಳೇ ದಾರಿ ತೋರಲಿ: ಬಗರ್​ಹುಕುಂ ಮಂಜೂರಿಗೆ ಕಡ್ಡಾಯ ಕ್ರಮ, ಸಿಎಂ ಸ್ಪಷ್ಟ ನಿರ್ದೇಶನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts