'ಯಾರೋ ಏನೋ ಅಂದ್ಬಿಟ್ರು ಅಂತಾ ಅನುಕಂಪ ಗಿಟ್ಟಿಸಿಕೊಳ್ಳಲು ಹೋದ್ರೆ ಯಾವಾಗಲೂ ನಡೆಯಲ್ಲ'

Sumalatha
Published on

ಮಂಡ್ಯ: ಯಾರೋ ಏನೋ ಅಂದ್ಬಿಟ್ರು ಅಂತಾ ಅನುಕಂಪ ಗಿಟ್ಟಿಸಿಕೊಳ್ಳಲು ಹೋದ್ರೆ ಯಾವಾಗಲೂ ನಡೆಯಲ್ಲ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಷ್​ಗೆ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೇರೆಯವರನ್ನು ದೂರುವ ಬದಲು ಸಂಸದರು ಆತ್ಮವಲೋಕನ ಮಾಡಿಕೊಳ್ಳಲಿ. ಸಂಸದರಾಗಿ ಜಿಲ್ಲೆಗೆ ಅವರ ಕೊಡುಗೆ ಏನು‌ ಎಂದು ಪ್ರಶ್ನೆ ಮಾಡಿಕೊಳ್ಳಲಿ ಎಂದು ಹೇಳಿದರು.

ಮಂಡ್ಯದ ಶಾಸಕರು ಎರಡ್ಮೂರು ಬಾರಿ ಆಯ್ಕೆ ಆಗಿದ್ದಾರೆ. ಅಭಿವೃದ್ಧಿ ಆಗಿಲ್ಲ ಅಂದ್ರೆ, ಶಾಸಕರನ್ನು ಜನರು ಪ್ರಶ್ನೆ ಮಾಡ್ತಾರೆ. ಇವರನ್ನ ಪ್ರಶ್ನೆ ಮಾಡೋರು ಯಾರು? ಪ್ರತಿ ಬಾರಿ ಕಾಲು ಕೆರೆದುಕೊಂಡು ಜಗಳ ಹುಟ್ಟುಹಾಕಿ, ಯಾರೋ ಏನೋ ಅಂದ್ಬಿಟ್ರು ಅಂತಾ ಅನುಕಂಪ ಗಿಟ್ಟಿಸಲು ಆಗಲ್ಲ. 2024ರ ವರೆಗೂ ಅವರ ಅಧಿಕಾರ ಇದೆ. ಜನಗಳ ಜತೆ ನಿಂತು ಕೆಲಸ ಮಾಡಲಿ ಎಂದು ಸಲಹೆ ನೀಡಿದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net