More

    ಮುಂಜಾನೆವರೆಗೂ ಚುರುಕಾಗಿದ್ದ 9ರ ಪ್ರಾಯದ ಹುಲಿ ದಿಢೀರ್​ ಕುಸಿದು ಬಿದ್ದು ಸಾವು

    ಮಂಗಳೂರು: ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ 9 ವರ್ಷ ಪ್ರಾಯದ ಹುಲಿಯೊಂದು ಮಂಗಳವಾರ ಮುಂಜಾನೆ ಮೃತಪಟ್ಟಿದೆ.

    ಆರೋಗ್ಯವಂತ ಹಾಗೂ ಸದೃಢವಾಗಿದ್ದ ಹುಲಿ ಮುಂಜಾನೆವರೆಗೂ ಚುರುಕಾಗಿಯೇ ಇದ್ದು ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದೆ. ಜೀವ ಉಳಿಸಲು ಮೃಗಾಲಯದ ವೈದ್ಯಾಧಿಕಾರಿಗಳು ಮಾಡಿದ ಪ್ರಯತ್ನ ಫಲಪ್ರದವಾಗಲಿಲ್ಲ.

    ಈ ಹುಲಿಯ ಹೆಸರು ಒಲಿವರ್‌. ಇದು ವಿಕ್ರಂ ಹಾಗೂ ಶಾಂಭವಿ ಹುಲಿ ಜೋಡಿಗೆ ಜನಿಸಿದ್ದ ಎರಡು ಮರಿಗಳಲ್ಲೊಂದು. ಇದರ ಪ್ರಾಯ 9 ವರ್ಷ ಆಗಿತ್ತು. ಮೃತಪಟ್ಟ ಹುಲಿಯ ಅಂಗಾಂಗಗಳ ಮಾದರಿಯನ್ನು ಬೆಂಗಳೂರಿನ ಪ್ರಾಣಿ ಆರೋಗ್ಯ ಹಾಗೂ ಪಶು ಜೈವಿಕ ಶಾಸ್ತ್ರ ಸಂಸ್ಥೆ ಹಾಗೂ ಉತ್ತರ ಪ್ರದೇಶದ ಭಾರತೀಯ ಪಶು ಸಂಶೋಧನಾ ಸಂಸ್ಥೆಗೆ ಕಳುಹಿಸಿ ಕೊಡಲಾಗಿದೆ.

    ಕೋವಿಡ್‌ ಪರೀಕ್ಷೆಗಾಗಿ ಮಾದರಿಯನ್ನು ಭೋಪಾಲದ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಹೈ ಸೆಕ್ಯರಿಟಿ ಎನಿಮಲ್‌ ಡಿಸೀಸಸ್‌ಗೆ ಕೂಡಾ ಕಳುಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ರೋಗ ಹರಡದಂತೆ ರೋಗ ನಿರೋಧಕ ದ್ರಾವಣವನ್ನು ಪ್ರಾಣಿಗಳ ಆವರಣದ ಸುತ್ತಮುತ್ತ ಸಿಂಪಡಿಸಲಾಗುತ್ತಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನ ನಿರ್ದೇಶಕ ಎಚ್‌.ಜೆ.ಭಂಡಾರಿ ತಿಳಿಸಿದ್ದಾರೆ.

    ಗ್ರಾಮೀಣ ಭಾಗದ ಪತ್ರಕರ್ತರಿಗೆ ಹೆಲ್ತ್​ ಕಾರ್ಡ್​, ಬಸ್ ಪಾಸ್ ಸೌಲಭ್ಯ: ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಭರವಸೆ

    ನೀನೇನ್​ ದೊಡ್ಡ ಡಾನಾ​? ನಾನಾ-ನೀನಾ ನೋಡೇ ಬಿಡೋಣ್ವಾ? ರಾಜ್ ಬಿ ಶೆಟ್ಟಿಗೆ ಚಮಕ್ ಕೊಟ್ಟ ಶಿವಣ್ಣ

    ರಾಜ್ಯದಲ್ಲಿ ಮತ್ತೊಮ್ಮೆ ಶಾಲೆ ಬಂದ್, ಲಾಕ್​ಡೌನ್​ ಜಾರಿ ಆಗುತ್ತಾ? ಸಭೆಗೂ ಮುನ್ನ ಸಿಎಂ ಕೊಟ್ಟ ಮಹತ್ತರ ಸುಳಿವು ಇಲ್ಲಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts