More

    ಮಾವಿನ ಹಣ್ಣುಗಳನ್ನು ಕದ್ದ ಪೊಲೀಸ್​ ಅಧಿಕಾರಿಯ ಸುಳಿವೇ ಇಲ್ಲ: ಕೋರ್ಟ್​ ಮೆಟ್ಟಿಲೇರಿದ ಹಣ್ಣು ಮಾರಾಟಗಾರ

    ಕೊಟ್ಟಾಯಂ: ಕೇರಳದ ಕಂಜಿರಪಲ್ಲಿಯ ಅಂಗಡಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಪೊಲೀಸ್​ ಅಧಿಕಾರಿಯನ್ನು ಆರೋಪಿ ಎಂದು ಹೆಸರಿಸಲಾಗಿದ್ದು, ಈ ಪ್ರಕರಣ ಕೋರ್ಟ್​ನಲ್ಲಿ ಇತ್ಯರ್ಥವಾಗುವ ಸಾಧ್ಯತೆ ಇದೆ.

    ಕಂಜಿರಪಲ್ಲಿಯ ಹಣ್ಣು ಮಾರಾಟಗಾರ ಕಂಜಿರಪಲ್ಲಿ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಕ್ಕೆ ಅರ್ಜಿ ಸಲ್ಲಿಸಿದ್ದು, ಈ ಪ್ರಕರಣವನ್ನು ಮುಂದುವರಿಸಲು ಅವರು ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ. ಈ ಸಂಬಂಧ ನಾಳೆ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಲಿದೆ.

    ಇಡುಕ್ಕಿ ಎಆರ್ ಕ್ಯಾಂಪ್​ನ ಪೊಲೀಸ್ ಪೇದೆ ಪಿ.ವಿ.ಶಿಹಾಬ್ ಸೆ.30ರಂದು ಕಂಜಿರಪಲ್ಲಿಯ ಹಣ್ಣಿನ ಅಂಗಡಿಗೆ ನುಗ್ಗಿ ಮಾವಿನ ಹಣ್ಣುಗಳನ್ನು ಕಳವು ಮಾಡಿದ್ದರು. ಈ ಘಟನೆ ಹೊರಬಿದ್ದ ಬಳಿಕ ತಲೆಮರೆಸಿಕೊಂಡಿರುವ ಶಿಹಾಬ್​ನನ್ನು ಪೊಲೀಸರು ಈವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.

    ಕೆಜಿಗೆ 600 ರೂ.ಮೌಲ್ಯದ ಸುಮಾರು 10 ಕೆಜಿ ಮಾವಿನ ಹಣ್ಣನ್ನು ಶಿಹಾಬ್ ಕದ್ದಿದ್ದಾರೆ. ಘಟನೆ ನಡೆದ ಸ್ಥಳದ ಸಿಸಿಟಿವಿ ದೃಶ್ಯಾವಳಿಯಿಂದ ಈ ಪ್ರಕರಣ ಬೆಳಕಿಗೆ ಬಂದಿತು. ಇದಾದ ಬಳಿಕ ಅಕ್ಟೋಬರ್ 3 ರಂದು ಕೇರಳ ಡಿಜಿಪಿ, ಆರೋಪಿ ಶಿಹಾಬ್​ನನ್ನು ಅಮಾನತುಗೊಳಿಸಿದ್ದಾರೆ.

    ಶಿಹಾಬ್​ ಅಪರಾಧ ಹಿನ್ನೆಲೆಯನ್ನು ಸಹ ಹೊಂದಿದ್ದಾರೆ. 2019ರಲ್ಲಿ ಕಂಜಿರಪಲ್ಲಿಯ ಜನರಲ್ ಹಾಸ್ಪಿಟಲ್​ನ ಮಹಿಳಾ ಉದ್ಯೋಗಿಯೊಬ್ಬರಿಗೆ ಮದುವೆ ಆಗುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವಿದೆ. ಅಲ್ಲದೆ, ಜೈಲಿನಿಂದ ಹೊರಬಂದ ನಂತರ ಮಹಿಳೆಗೆ ಬೆದರಿಕೆ ಮತ್ತು ಹಲ್ಲೆಗೆ ಯತ್ನಿಸಿದ ಶಿಹಾಬ್ ವಿರುದ್ಧ ಮುಂಡಕ್ಕಯಂ ಪೊಲೀಸರು ದಾಖಲಿಸಿರುವ ಮತ್ತೊಂದು ಪ್ರಕರಣದ ವಿಚಾರಣೆ ನಡೆಯುತ್ತಿದೆ.

    ಪೊಲೀಸ್​ ಕೆಲಸಕ್ಕೆ ಸೇರುವ ಮುನ್ನ ಅಂದರೆ, 2007ರಲ್ಲಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದ ಆರೋಪದ ಮೇಲೆಯೂ ಶಿಹಾಬ್​ ವಿರುದ್ಧ ಕೇಸು ದಾಖಲಾಗಿತ್ತು. ಇದಿಷ್ಟೇ ಅಲ್ಲದೇ ಗಣಿಗಾರಿಕೆ ಮಾಫಿಯಾಗಳ ಸಂಪರ್ಕ, ಶಬರಿಮಲೆಯಲ್ಲಿ ವಿಐಪಿ ದರ್ಶನ ಆಮಿಷವೊಡ್ಡಿ ಭಕ್ತರಿಂದ ಹಣ ವಸೂಲಿ, ಕರ್ತವ್ಯವಿಲ್ಲದ ವೇಳೆ ಸಮವಸ್ತ್ರ ಧರಿಸಿ ಸ್ಥಳೀಯರಿಂದ ಹಣ ವಸೂಲಿ ಮುಂತಾದ ಪ್ರಕರಣಗಳ ಕುರಿತು ಈತನ ವಿರುದ್ಧ ಹಲವು ದೂರುಗಳು ಬಂದಿದ್ದರೂ ಉನ್ನತ ಮಟ್ಟದ ಪ್ರಭಾವದಿಂದ ಯಾವುದೇ ಕ್ರಮ ಕೈಗೊಂಡಿಲ್ಲ. ಇದರೊಂದಿಗೆ ಅಪರಾಧದ ಹಿನ್ನೆಲೆ ಇದ್ದರೂ ಈತನಿಗೆ ಅದು ಹೇಗೆ ಕೆಲಸ ಸಿಕ್ಕಿತು ಎಂಬುದೇ ಇಲ್ಲಿ ಯಕ್ಷ ಪ್ರಶ್ನೆಯಾಗಿದೆ. (ಏಜೆನ್ಸೀಸ್​)

    ಮಾವಿನ ಹಣ್ಣುಗಳನ್ನು ಕದ್ದು ಸಸ್ಪೆಂಡ್​ ಆದ ಪೊಲೀಸ್​ ಅಧಿಕಾರಿಯ ಹಿನ್ನೆಲೆ ತಿಳಿದು ಅಧಿಕಾರಿಗಳೇ ಶಾಕ್​!

    ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ ಚಿತ್ರೀಕರಿಸಿದ್ದಕ್ಕೆ ಯುವಕರಿಬ್ಬರನ್ನು ಕೂಡಿಹಾಕಿ ನರ್ಸ್​ಗಳಿಂದ ಥಳಿತ!

    ನನ್ನ ಬಟ್ಟೆ ಹರಿಯಿತು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ಕಹಿ ಘಟನೆ ವಿರುದ್ಧ ನಟಿ ಅನಸೂಯ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts