More

    ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ: ಪಂಜಾಬ್​ ಸರ್ಕಾರದ ವಿರುದ್ಧ ಪಿಐಎಲ್​ ಸಲ್ಲಿಕೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭೇಟಿಯ ವೇಳೆ ಪಂಜಾಬ್​ ಸರ್ಕಾರ ಭದ್ರತಾ ಲೋಪ ಎಸಗಿರುವುದನ್ನು ಗಂಭೀರವಾಗಿ ಪರಿಗಣಿಸುವಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್​ ಗುರುವಾರ ಒಪ್ಪಿಗೆ ನೀಡಿದೆ.

    ನಿನ್ನೆ ಪಂಜಾಬ್​ಗೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿತ್ತು. ಪರಿಣಾಮ ಫಿರೋಜ್​ಪುರ ಫ್ಲೈಓವರ್​ನಲ್ಲಿ 20 ನಿಮಿಷ ಟ್ರಾಫಿಕ್​ನಲ್ಲಿ ಸಿಲುಕಿದ್ದ ಪ್ರಧಾನಿ, ಅಲ್ಲಿಂದ ವಾಪಸ್​ ಆಗಿದ್ದು, ಫಿರೋಜ್​ಪುರದಲ್ಲಿ ನಡೆಯಬೇಕಿದ್ದ ಬಿಜೆಪಿ ರ‍್ಯಾಲಿ ರದ್ದಾಗಿದೆ. ಈ ಭದ್ರತಾ ವೈಫಲ್ಯ ಕುರಿತು ಭಟಿಂಡಾ ಏರ್​ಪೋರ್ಟ್​ನ ಅಧಿಕಾರಿಗಳಿಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಪ್ರಧಾನಿ, ನನ್ನನ್ನು ಜೀವಂತವಾಗಿ ಕಳಿಸಿದ್ದಕ್ಕೆ ಪಂಜಾಬ್​ ಸಿಎಂಗೆ ಧನ್ಯವಾದ ತಿಳಿಸಿ ಎಂದಿದ್ದರು.

    ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ ನೇತೃತ್ವದ ಸಾಂವಿಧಾನಿಕ ಪೀಠವು ಸಂಪೂರ್ಣ ವಿಚಾರಣೆಯನ್ನು ಶುಕ್ರವಾರ ನಡೆಸುವುದಾಗಿ ಹೇಳಿದೆ. ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ತುರ್ತು ವಿಚಾರಣೆಯನ್ನು ಕೋರಿ ನ್ಯಾಯಮೂರ್ತಿ ರಮಣ ಅವರ ಮುಂದೆ ವಿಷಯ ಪ್ರಸ್ತಾಪಿಸಿದ ನಂತರ ಸಿಜೆಐ ಈ ನಿರ್ದೇಶನ ನೀಡಿದೆ.

    ಮೋದಿ ಅವರು ಫಿರೋಜ್‌ಪುರಕ್ಕೆ ಭೇಟಿ ನೀಡುತ್ತಿದ್ದರು. ನಿನ್ನೆ ನಡೆದ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳುವುದು ಅತ್ಯಂತ ಪ್ರಸ್ತುತವಾಗಿದೆ ಮತ್ತು ಈ ಲೋಪದ ಜವಾಬ್ದಾರಿಯನ್ನು ಸರಿಪಡಿಸಬೇಕಿದೆ. ಇದಕ್ಕಾಗಿ ರಕ್ಷಣಾ ವ್ಯವಸ್ಥೆಯ ಕುರಿತಾಗಿ ವೃತ್ತಿಪರ ಮತ್ತು ಪರಿಣಾಮಕಾರಿ ತನಿಖೆಯ ಅವಶ್ಯಕತೆ ಇದೆ. ಹೀಗಾಗಿ ಮೋದಿ ಭೇಟಿಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರ ಚಲನವಲನ ಮತ್ತು ನಿಯೋಜನೆಯ ಸಂಪೂರ್ಣ ದಾಖಲೆಗಳನ್ನು ಬಟಿಂಡಾದ ಜಿಲ್ಲಾ ನ್ಯಾಯಾಧೀಶರು ತಮ್ಮ ಕಸ್ಟಡಿಗೆ ತೆಗೆದುಕೊಂಡು ಉನ್ನತ ನ್ಯಾಯಾಲಯದ ಮುಂದೆ ಹಾಜರುಪಡಿಸುವುದು ನಿಮ್ಮ ಮೇಲ್ವಿಚಾರಣೆಯಲ್ಲಿ ಸೂಕ್ತವಾಗಿರುತ್ತದೆ ಎಂದು ಮಣಿಂದರ್ ಸಿಂಗ್ ನ್ಯಾಯಪೀಠವನ್ನು ಆಗ್ರಹಿಸಿದ್ದಾರೆ.

    ಜಿಲ್ಲಾ ನ್ಯಾಯಾಧೀಶರು ದಾಖಲೆಗಳನ್ನು ಸಲ್ಲಿಸಿದ ಬಳಿಕ ನೀವು ಅದನ್ನು ಪರಿಶೀಲಿಸಿ ಮುಂದೇನು ಮಾಡಬೇಕೆಂಬುದನ್ನು ನೀವು ನಿರ್ಧರಿಸಿ. ಸದ್ಯಕ್ಕೆ ನನ್ನ ಮಾತನ್ನು ಪರಿಗಣಿಸಿ ಇಂದೇ ಆದೇಶವನ್ನು ಹೊರಡಿಸಿ ಎಂದು ಹಿರಿಯ ವಕೀಲರಾದ ಮಣಿಂದರ್ ಸಿಂಗ್ ಹೇಳಿದ್ದಾರೆ.

    ಸಿಂಗ್​ ಅರ್ಜಿಗೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ರಮಣ ಅವರು ಪಂಜಾಬ್​ ಸರ್ಕಾರಕ್ಕೆ ಅರ್ಜಿಯ ಒಂದು ಪ್ರತಿಯನ್ನು ಕಳುಹಿಸುವಂತೆ ನಿರ್ದೇಶನ ನೀಡಿದ್ದಾರೆ. ಈ ಪಿಐಎಲ್, ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಕೇಂದ್ರ ಸರ್ಕಾರದ ಕಕ್ಷಿದಾರರನ್ನು ಪ್ರಕರಣಕ್ಕೆ ಒಳಪಡಿಸಿದೆ.

    42,750 ಕೋಟಿಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು(ಬುಧವಾರ) ಪಂಜಾಬ್‌ಗೆ ಆಗಮಿಸಿದ್ದರು. ಫಿರೋಜ್‌ಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಆದರೆ, ಮಾರ್ಗದಲ್ಲೇ ಟ್ರಾಫಿಕ್​ ಉಂಟಾಗಿತ್ತು. ಅಷ್ಟೇ ಅಲ್ಲ ಪೊಲೀಸ್​ ಭದ್ರತಾ ವೈಫಲ್ಯ ಎದ್ದು ಕಾಣುತ್ತಿತ್ತು. ರ‍್ಯಾಲಿ ತಡೆಯಲು ಉದ್ದೇಶಪೂರ್ವಕವಾಗಿಯೇ ಪಂಜಾಬ್​ ಸರ್ಕಾರ ಪೊಲೀಸರಿಗೆ ಸೂಚನೆ ಕೊಟ್ಟಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ. (ಏಜೆನ್ಸೀಸ್​)

    ನಾನು ಜೀವಂತವಾಗಿ ವಾಪಸ್​ ಬರಲು ಸಹಕರಿಸಿದ್ದಕ್ಕೆ ಥ್ಯಾಂಕ್ಸ್​: ಪಂಜಾಬ್​ ಸಿಎಂಗೆ ಪ್ರಧಾನಿ ಟಾಂಗ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts