ಅಪಘಾತದಿಂದ ಕಾಲು ನೋವು: ಆಪರೇಷನ್​ಗೆ ಒಳಗಾದ ಎಂ.ಪಿ. ರೇಣುಕಾಚಾರ್ಯ

Renukacharya
Published on

ಬೆಂಗಳೂರು: ಅಪಘಾತದಿಂದ ಸಂಭವಿಸಿದ ಕಾಲು ನೋವಿನಿಂದ ಆಪರೇಷನ್​ಗೆ ಒಳಗಾಗಿರುವ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ವಿಶ್ರಾಂತಿಗಾಗಿ ದಾಖಲಾಗಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ರೇಣುಕಾಚಾರ್ಯ, ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್​ಗೆ ಒಳಗಾಗಿದ್ದೇನೆ. ಆತ್ಮೀಯ ಮಿತ್ರ ಮತ್ತು ಶಾಸಕರಾದ ಡಾ. ಶಿವರಾಜ್ ಪಾಟೀಲ್ ಅವರ ಮಾರ್ಗದರ್ಶನ ಹಾಗೂ ಡಾ. ವಿಜಯ್ ಶೆಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿ ಮೊಣಕಾಲೀನ ಸರ್ಜರಿ ನೆಡೆಸಿದೆ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಹಾರೈಕೆಯಿಂದ ಆದಷ್ಟು ಬೇಗ ಗುಣಮುಖನಾಗಿ ಜನಸೇವೆಗೆ ಮರುಳಲಿದ್ದೇನೆ.

ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದು ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗುತ್ತಿದ್ದು, ನಿಮ್ಮ ಅಹವಾಲುಗಳಿಗೆ ದೂರವಾಣಿ ಮೂಲಕ ನನ್ನ ಆಪ್ತ ಸಹಾಯಕರು ಸ್ಪಂದಿಸಲಿದ್ದು, ಸಹಕರಿಸಬೇಕಾಗಿ ವಿನಯಪೂರ್ವಕವಾಗಿ ವಿನಂತಿಸುತ್ತೇನೆ ಎಂದು ಎಂ.ಪಿ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net