ಅನೈತಿಕ ಸಂಬಂಧಕ್ಕೆ ಶಿಕ್ಷಕಿ ಬಲಿ: 6 ತಿಂಗಳ ಬಳಿಕ ಆರೋಪಿಗಳ ಹೆಡೆಮುರಿ ಕಟ್ಟಿದ ನಂಜನಗೂಡು ಪೊಲೀಸರು

Techer Death Case
Published on

ಮೈಸೂರು: ಆರು ತಿಂಗಳ ಹಿಂದೆ ನಡೆದಿದ್ದ ಶಿಕ್ಷಕಿ ನಿಗೂಢ ಸಾವಿನ ಪ್ರಕರಣವನ್ನು ನಂಜನಗೂಡು ಪೊಲೀಸರು ಕೊನೆಗೂ ಭೇದಿಸಿದ್ದು, ನಗರಸಭಾ ಸದಸ್ಯೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ನಂಜನಗೂಡು 5ನೇ ವಾರ್ಡ್ ನಗರಸಭಾ ಸದಸ್ಯೆ ಗಾಯತ್ರಿ, ಭಾಗ್ಯ, ನಾಗಮ್ಮ ಮತ್ತು ಕುಮಾರ್ ಬಂಧಿತರು. ಕಳೆದ ಮಾರ್ಚ್ 9 ರಂದು ಶಿಕ್ಷಕಿ ಸುಲೋಚನಾ ಅನುಮಾನಸ್ಪಾದವಾಗಿ ಮನೆಯಲ್ಲಿ ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ನಿಗೂಢ ಸಾವಿನ ಪ್ರಕರಣ ಬೆನ್ನತ್ತಿದ್ದ ನಂಜನಗೂಡು ಪೊಲೀಸರಿಗೆ ಒಂದು ಮಹತ್ವದ ಸುಳಿವು ದೊರೆಯಿತು.

ಯಾವುದು ಆ ಸುಳಿವು ಅಂದರೆ, ಶಿಕ್ಷಕಿ ಸುಲೋಚನಾ ಹಾಗೂ ಗಾಯತ್ರಿ ಪತಿ ಮುರುಗೇಶ್ ನಡುವೆ ಅಕ್ರಮ ಸಂಬಂಧ ಇದ್ದಿದ್ದು. ಮರುಗೇಶ್​ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಡಿ ಗ್ರೂಪ್ ನೌಕರನಾಗಿದ್ದಾರೆ. ಅಕ್ರಮ ಸಂಬಂಧ ವಿಚಾರವಾಗಿ ಗಾಯತ್ರಿ ಮತ್ತು ಮುರುಗೇಶ್​ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿತ್ತು. ಎಷ್ಟೇ ಗಲಾಟೆ ಮಾಡಿ, ಬುದ್ಧಿಮಾತು ಹೇಳಿದರು ಮುರುಗೇಶ್​ ಮಾತ್ರ ಸುಲೋಚನಾ ಸಹವಾಸವನ್ನು ಬಿಟ್ಟಿರಲಿಲ್ಲ.

ಕೊನೆಗೆ ಶಿಕ್ಷಕಿ ಸುಲೋಚನಾ ಕೊಲೆಗೆ ಸಂಚು ರೂಪಿಸಿದ ಗಾಯತ್ರಿ ತನ್ನ ಸಂಬಂಧಿಕರ ಸಹಾಯದೊಂದಿಗೆ ಕೊಲೆ ಮಾಡಿಸಿದ್ದಾಳೆ ಎನ್ನಲಾಗಿದೆ. ಘಟನೆ ನಡೆದು ಆರು ತಿಂಗಳ ಬಳಿಕ‌ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net