ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ದಿಢೀರ್​ ಶಾಕ್​ ಕೊಟ್ಟ ಸರ್ಕಾರ

Rohini Sindhuri
Published on

ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ರೋಹಿಣಿ ಸಿಂಧೂರಿ ವಿರುದ್ಧ ಸರ್ಕಾರ ತನಿಖೆಗೆ ಆದೇಶಿದೆ.

ತನಿಖೆ ನಡೆಸಲು ಅಧೀನ ಕಾರ್ಯದರ್ಶಿ ಜಯರಾಂ ಅವರನ್ನು ಸರ್ಕಾರ ನೇಮಕ ಮಾಡಿದೆ. ನಾಲ್ಕು ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿ 30 ದಿನಗಳಲ್ಲಿ ವರದಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಶಾಸಕ ಸಾರಾ.ಮಹೇಶ್, ರೋಹಿಣಿ ಸಿಂಧೂರಿ ವಿರುದ್ಧ ಆರೋಪಗಳನ್ನು ಹೊರಿಸಿದ್ದರು. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪ, ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ 50 ಲಕ್ಷ ವೆಚ್ಚದಲ್ಲಿ ಅನಧಿಕೃತವಾಗಿ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ ನಿರ್ಮಾಣ ಮಾಡಿ ಪಾರಂಪರಿಕ ಕಟ್ಟಡಕ್ಕೆ ಹಾನಿ ಮಾಡಿರುವುದು, ಕರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿರುವುದು ಹಾಗೂ ಚಾಮರಾಜನಗರ ಆಕ್ಸಿಜನ ದುರಂತ ಪ್ರಕರಣಕ್ಕೆ ನಿರ್ಲಕ್ಷ್ಯವೇ ಕಾರಣ ಎಂಬ ಆರೋಗಳನ್ನು ಸಿಂಧೂರಿ ವಿರುದ್ಧ ಮಾಡಲಾಗಿತ್ತು.

ಈ ನಾಲ್ಕು ಪ್ರಕರಣಗಳ ಸತ್ಯಾಸತ್ಯತೆ ತಿಳಿಯಲು ತನಿಖೆ ನಡೆಸುವಂತೆ ಸರ್ಕಾರ ಆದೇಶ ಹೊರಡಿಸಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net