More

    ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ರೊಮಾನ್ಸ್​ ಪ್ರಕರಣ: ಸೇವೆಯಿಂದ ಮುಖ್ಯಶಿಕ್ಷಕ ಖಾಯಂ ವಜಾ

    ಮೈಸೂರು: ಇತ್ತೀಚೆಗಷ್ಟೇ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ವೈರಲ್​ ಆಗಿತ್ತು. ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತುಂಬಾ ಆಗ್ರಹಗಳು ಕೇಳಿಬಂದ ಬೆನ್ನಲ್ಲೇ ಮುಖ್ಯಶಿಕ್ಷಕನನ್ನು ಸೇವೆಯಿಂದಲೇ ವಜಾಗೊಳಿಸಲಾಗಿದೆ.

    ಮುಖ್ಯಶಿಕ್ಷಕ ಆರ್.ಎಂ.ಅನಿಲ್ ಕುಮಾರ್ ಎಂಬುವರನ್ನು ಸೇವೆಯಿಂದಲೇ ಖಾಯಂ ವಜಾಗೊಳಿಸಲು ಖಾಸಗಿ ಶಾಲಾ ಆಡಳಿತ ಮಂಡಳಿಯ ತುರ್ತು ಸಭೆಯಲ್ಲಿ ತೀರ್ಮಾನ‌ ತೆಗೆದುಕೊಳ್ಳಲಾಗಿದೆ.

    ಈಗಾಗಲೇ ಮುಖ್ಯಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ಸಹ ದಾಖಲಾಗಿದೆ. ಎಚ್.ಡಿ.ಕೋಟೆ ತಾಲೂಕಿನ ಶಾಲೆಯೊಂದರ ಕೊಠಡಿಯೊಳಗೆ ವಿದ್ಯಾರ್ಥಿನಿಯನ್ನ ತಬ್ಬಿಕೊಂಡು ಮುದ್ದಾಡುತ್ತಿದ್ದ ದೃಶ್ಯವನ್ನು ಹೊರಗಿನಿಂದ ಕಿಟಕಿ ಬಳಿ ನಿಂತು ಕೆಲ ವಿದ್ಯಾರ್ಥಿಗಳು ವಿಡಿಯೋ ಮಾಡಿದ್ದರು.

    ಕಿಟಕಿ ಬಳಿ ವಿಡಿಯೋ ಮಾಡುತ್ತಿರುವುದನ್ನ ನೋಡಿದ ಕೂಡಲೇ ವಿದ್ಯಾರ್ಥಿನಿಯನ್ನ ಬಿಟ್ಟು ಮುಖ್ಯಶಿಕ್ಷಕ ಸುಮ್ಮನೆ ನಿಲ್ಲುವುದು ಮತ್ತು ವಿದ್ಯಾರ್ಥಿನಿ ಕೊಠಡಿಯಿಂದ ಹೊರ ಹೋಗುವ ದೃಶ್ಯ ವೈರಲ್​ ವಿಡಿಯೋದಲ್ಲಿ ಸೆರೆಯಾಗಿತ್ತು.

    ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಬಿಇಒ ಚಂದ್ರಕಾಂತ್ ಮತ್ತು ಡಿಡಿಪಿಐ ರಾಮಚಂದ್ರರಾಜೇ ಅರಸ್ ಈಗಾಗಲೇ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ರೊಮಾನ್ಸ್​ ಪ್ರಕರಣ: ಸೇವೆಯಿಂದ ಮುಖ್ಯಶಿಕ್ಷಕ ಖಾಯಂ ವಜಾ

    ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

    ಸುತ್ತಿಗೆಯಿಂದ ಹೊಡೆದು ಗಂಡನನ್ನು ಕೊಲೆಗೈದ ಮಹಿಳೆಯನ್ನು ಬಂಧಿಸದೇ ಬಿಟ್ಟು ಕಳುಹಿಸಿದ ಪೊಲೀಸರು!

    ಐಪಿಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ತಡೆಹಿಡಿದ ಸರ್ಕಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts