ಕಾಂಗ್ರೆಸ್​ಗೆ ತಟ್ಟಿದ ಅಸಮಾಧಾನದ ಬಿಸಿ: ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಬ್ರಿಜೇಶ್ ಕಾಳಪ್ಪ ರಾಜೀನಾಮೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಟಿಕೆಟ್​ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್​​ಗೆ ಅಸಮಾಧಾನದ ಬಿಸಿ ತಟ್ಟಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಬ್ರಿಜೇಶ್ ಕಾಳಪ್ಪ ರಾಜೀನಾಮೆ ನೀಡಿದ್ದಾರೆ. ಬ್ರಿಜೇಶ್ ಕಾಳಪ್ಪ ಅವರು ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ವಕ್ತಾರ. ಪರಿಷತ್ ಮತ್ತು ರಾಜ್ಯಸಭಾ ಸ್ಥಾನಕ್ಕೆ ಪರಿಗಣಿಸದ ಹಿನ್ನೆಲೆಯಲ್ಲಿ 2014ರಿಂದ ಪಕ್ಷಕ್ಕೆ ತಮ್ಮ ಕೊಡುಗೆ ಬಗ್ಗೆ ಸುಧೀರ್ಘ ಪತ್ರ ಬರೆದು ಅಸಮಾಧಾನ ಹೊರಹಾಕಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬ್ರಿಜೇಶ್ ಕಾಳಪ್ಪ ರಾಜೀನಾಮೆ ಪತ್ರ ರವಾನಿಸಿದ್ದಾರೆ. … Continue reading ಕಾಂಗ್ರೆಸ್​ಗೆ ತಟ್ಟಿದ ಅಸಮಾಧಾನದ ಬಿಸಿ: ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಬ್ರಿಜೇಶ್ ಕಾಳಪ್ಪ ರಾಜೀನಾಮೆ