ಕ್ರಿಪ್ಟೊ ಕರೆನ್ಸಿ ಒಂದು ತಪ್ಪಾದ ಕೈಯಲಿಲ್ಲ ಎಂಬುದನ್ನು ಎಲ್ಲ ರಾಷ್ಟ್ರಗಳು ಖಚಿತಪಡಿಸಬೇಕಿದೆ: ಪ್ರಧಾನಿ ಮೋದಿ

PM modi
Published on

ನವದೆಹಲಿ: ಕ್ರಿಪ್ಟೊ ಕರೆನ್ಸಿ ಮೇಲೆ ಎಲ್ಲ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಮತ್ತು ಯಾವುದೋ ಒಂದು ಕೆಟ್ಟ ಕೈಯಲ್ಲಿ ಅದು ಅಂತ್ಯವಾಗುತ್ತಿಲ್ಲ ಎಂಬುದನ್ನು ಖಚಿತಪಡಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಿಡ್ನಿ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲಾ ಪ್ರಜಾಸತ್ತಾತ್ಮಕ ರಾಷ್ಟ್ರಗಳು ಕ್ರಿಪ್ಟೊ ಕರೆನ್ಸಿ ಮೇಲೆ ಒಟ್ಟಾಗಿ ಕೆಲಸ ಮಾಡುವುದು ಇಂದು ತುಂಬಾ ಮುಖ್ಯವಾಗಿದೆ. ಯಾವುದೋ ಒಂದು ಕೆಟ್ಟ ಕೈಯಲ್ಲಿ ಅದು ಕೊನೆಗೊಳ್ಳುವುದಿಲ್ಲ ಎಂದು ಖಚಿತಪಡಿಸಬೇಕಿದೆ. ಏಕೆಂದರೆ, ಅದು ನಮ್ಮ ಯುವಕರನ್ನು ನಾಶ ಮಾಡುತ್ತದೆ ಎಂದು ತಿಳಿಸಿದರು. ಈ ಮೂಲಕ ಪರೋಕ್ಷವಾಗಿ ಚೀನಾ ವಿರುದ್ಧ ವಾಗ್ದಾಳಿ ನಡೆಸಿದರು.

"ಭಾರತದ ತಂತ್ರಜ್ಞಾನ: ವಿಕಾಸ ಮತ್ತು ಕ್ರಾಂತಿ" ವಿಷಯದ ಮೇಲೆ ಮಾತನಾಡಿದ ಪ್ರಧಾನಿ ಮೋದಿ, ತಂತ್ರಜ್ಞಾನ ಮತ್ತು ಡೇಟಾ ಹೊಸ ಅಸ್ತ್ರಗಳಾಗುತ್ತಿರುವ ಯುಗದಲ್ಲಿ ನಾವಿದ್ದೇವೆ ಎಂದರು. ಸಬಲೀಕರಣ, ಸಂಪರ್ಕ, ಪ್ರಯೋಜನಗಳ ವಿತರಣೆ ಮತ್ತು ಕಲ್ಯಾಣ ಸೇರಿದಂತೆ ಆಡಳಿತಕ್ಕಾಗಿ ಡಿಜಿಟಲ್ ತಂತ್ರಜ್ಞಾನವನ್ನು ಬಳಸುವ ಮೂಲಕ ಜನರ ಜೀವನವನ್ನು ಪರಿವರ್ತಿಸುವಲ್ಲಿ ಭಾರತದ ಪ್ರಯತ್ನಗಳನ್ನು ಇದೇ ವೇಳೆ ಶ್ಲಾಘಿಸಿದರು.

ತಂತ್ರಜ್ಞಾನವು ಜಾಗತಿಕ ಸ್ಪರ್ಧೆಯ ಪ್ರಮುಖ ಸಾಧನವಾಗಿದೆ ಮತ್ತು ಭವಿಷ್ಯದ ಅಂತರಾಷ್ಟ್ರೀಯ ಕ್ರಮವನ್ನು ರೂಪಿಸುವಲ್ಲಿ ಪ್ರಮುಖವಾಗಿದೆ. ತಂತ್ರಜ್ಞಾನ ಮತ್ತು ಡೇಟಾವು ಹೊಸ ಅಸ್ತ್ರಗಳಾಗುತ್ತಿವೆ. ಪ್ರಜಾಪ್ರಭುತ್ವದ ದೊಡ್ಡ ಶಕ್ತಿಯಾಗಿದೆ. ಅದೇ ಸಮಯದಲ್ಲಿ, ಈ ಶಕ್ತಿಯನ್ನು ದುರುಪಯೋಗಪಡಿಸಿಕೊಳ್ಳಲು ನಾವು ಪಟ್ಟಭದ್ರ ಹಿತಾಸಕ್ತಿಗಳಿಗೆ ಅವಕಾಶ ನೀಡಬಾರದು ಎಂದರು.

ಇನ್ನು ಭಾರತದಲ್ಲಿ ಕ್ರಿಪ್ಟೊ ಕರೆನ್ಸಿಯ ನಿಯಮಗಳ ಕುರಿತು ಚರ್ಚೆ ನಡೆಸಿದ ಕೆಲವು ದಿನಗಳ ಬಳಿಕ ಪಿಎಂ ಮೋದಿ ಸಿಡ್ನಿ ಸಂವಾದದಲ್ಲಿ ಈ ಎಚ್ಚರಿಕೆ ನೀಡಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net