

ಬೆಂಗಳೂರು: ನಟ ನಿಖಿಲ್ ಕುಮಾರಸ್ವಾಮಿ-ರೇವತಿ ದಂಪತಿಗೆ ಗಂಡು ಮಗು ಜನಿಸಿದ್ದು, ಮೊಮ್ಮಗನ ಆಗಮನ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿರುವುದು ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆಯಾಗಿದೆ. ನಾನು ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ನಮ್ಮ ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗು ಜನನವಾಗಿದೆ. ಸೆಪ್ಟೆಂಬರ್ 13ರಂದು ರೇವತಿ ಅವರಿಗೆ ಅದ್ದೂರಿಯಾಗಿ ಸೀಮಂತ ಕಾರ್ಯಕ್ರಮ ನಡೆದಿತ್ತು. ಶುಭ ಶುಕ್ರವಾರದಂದೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕುಟುಂಬಕ್ಕೆ ವಾರಸ್ದಾರನ ಆಗಮನವಾಗಿರುವುದು ಸಂತಸ ಇಮ್ಮಡಿಗೊಂಡಿದೆ.