ಆನ್​ಲೈನ್​ನಲ್ಲಿ 1.45 ಕೋಟಿ ರೂ. ವ್ಯವಹಾರ ನಡೆಸಿದ್ದ ಸಾಮಾನ್ಯ ಮಹಿಳೆಯ ಸಾವಿನ ರಹಸ್ಯ ಕೊನೆಗೂ ಬಯಲು

ಕೊಯಿಕ್ಕೋಡ್​: ಕೇರಳದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಬಿಜಿಶಾ ಎಂಬಾಕೆಯ ಸಾವಿನ ಪ್ರಕರಣದ ತನಿಖೆ ನಡೆಸುತ್ತಿದ್ದ ಕೇರಳದ ಸಿಸಿಬಿ ತಂಡ ಕೊನೆಗೂ ಸಾವಿಗೆ ಕಾರಣವನ್ನು ಕೊಂಡುಕೊಂಡಿದೆ. ಬಿಜಿಶಾ ಸಾವು ಆತ್ಮಹತ್ಯೆಯಾಗಿದ್ದು, ಆನ್​ಲೈನ್​ ರಮ್ಮಿ ಗೇಮ್​ ಆಕೆಯ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಚೆಲಾಯಿಲ್​ ಮೂಲದ ಬಿಜಿಶಾ ಖಾಸಗಿ ಟೆಲಿಕಾಂ ಸ್ಟೋರ್​ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. 2021ರ ಡಿಸೆಂಬರ್​ 12ರಂದು ಜೊಯಿಲ್ಯಾಂಡಿಯಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆರಂಭದಲ್ಲಿ ಆತ್ಮಹತ್ಯೆ ಹಿಂದಿನ ಪ್ರೇರಣೆಯನ್ನು ಕಂಡುಹಿಡಿಯುವಲ್ಲಿ ಪೊಲೀಸರು ವಿಫಲವಾಗಿದ್ದರು. ಪ್ರಕರಣ … Continue reading ಆನ್​ಲೈನ್​ನಲ್ಲಿ 1.45 ಕೋಟಿ ರೂ. ವ್ಯವಹಾರ ನಡೆಸಿದ್ದ ಸಾಮಾನ್ಯ ಮಹಿಳೆಯ ಸಾವಿನ ರಹಸ್ಯ ಕೊನೆಗೂ ಬಯಲು