More

    ನಿಮ್ಮ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಇದ್ದರೆ ಇಲ್ಲಿಗೆ ಕರೆ ಮಾಡಿ ಶೀಘ್ರವೇ ಸಮಸ್ಯೆಗೆ ಪರಿಹಾರ ಸಿಗಲಿದೆ

    ಬೆಂಗಳೂರು: ನಗರದ ಜನರು ತಮ್ಮ ವ್ಯಾಪ್ತಿಯಲ್ಲಿ ಬಿದ್ದಿರುವ ರಸ್ತೆ ಗುಂಡಿಗಳ ಬಗ್ಗೆ ಪಾಲಿಕೆಯ ಕಂಟ್ರೋಲ್ ರೂಂಗೆ ದೂರು ನೀಡಿದರೆ ಅವುಗಳನ್ನು ಮುಚ್ಚಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

    ಪಾಲಿಕೆಯ ಮುಖ್ಯ ಇಂಜಿನಿಯರ್ ಕಚೇರಿಯಿಂದ ಪ್ರತಿ ನಿತ್ಯ ಎಷ್ಟು ರಸ್ತೆಗುಂಡಿಗಳನ್ನು ಮುಚ್ಚಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಈ ಮಾಹಿತಿಯನ್ನು ಸಂಬಂಧಪಟ್ಟವರಿಗೆ ರವಾನಿಸಲಾಗುತ್ತಿದೆ. ನಗರದ ಹಲವು ಕಡೆಗಳಲ್ಲಿ ಈಗಾಗಲೇ ರಸ್ತೆಗುಂಡಿಗಳನ್ನು ಮುಚ್ಚಲಾಗಿದೆ. ಸಾರ್ವಜನಿಕರು ತಮ್ಮ ಪ್ರದೇಶಗಳ ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.

    ನಗರದಲ್ಲಿ ನಿಷೇಧವಿದ್ದರೂ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಹಾಕಲಾಗುತ್ತಿರುವ ಬಗ್ಗೆ ದೂರುಗಳಿವೆ. ಸಾರ್ವಜನಿಕರು ಇದರ ಬಗ್ಗೆಯೂ ಮಾಹಿತಿ ನೀಡಿದರೆ ತೆರವುಗೊಳಿಸಲಾಗುವುದು. ಜತೆಗೆ ಫ್ಲೆಕ್ಸ್ ಮತ್ತು ಬ್ಯಾನರ್ ಹಾಕುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಇವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ನಿರ್ಲಕ್ಷ್ಯವಹಿಸಿದರೆ ಅಂಥವರ ವಿರದ್ಧವೂ ಕ್ರಮಕೈಗೊಳ್ಳುತ್ತೇನೆ ಎಂದರು.

    ಬೆಂಗಳೂರಿನಲ್ಲಿ ಪಾದಚಾರಿ ಬಲಿ ಪಡೆದ ಟಿಪ್ಪರ್ ಲಾರಿ ಚಾಲಕನಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಹೀಗಿದೆ…

    ರಷ್ಯಾ ಹಿಡಿತ, ಕದನವಿರಾಮ ಸನ್ನಿಹಿತ: ಹತಾಶ ಯೂಕ್ರೇನ್​ನಿಂದ ಸಂಧಾನ ಸೂತ್ರ  

    ಮಕ್ಕಳ ಕಾಳಜಿ ಮುಖ್ಯ; ಕರೊನಾದಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಸಂಕಷ್ಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts