ದೇಶದಲ್ಲಿ PFI ಬ್ಯಾನ್: ಮುಂದಿನ ಕ್ರಮಗಳೇನು? ಕಾರ್ಯಕರ್ತರು, ಮುಖಂಡರ ಕತೆ ಏನು? ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್​

PFI
Published on

ಬೆಂಗಳೂರು: ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ಪಾಫುಲ್ಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಮತ್ತು ಅದರ ಅಂಗಸಂಸ್ಥೆಗಳು ಸೇರಿದಂತೆ ಒಟ್ಟು 8 ಸಂಘಟನೆಗಳನ್ನು ಕೇಂದ್ರ ಸರ್ಕಾರ ಇಂದು ಬ್ಯಾನ್​ ಮಾಡಿ ಆದೇಶ ಹೊರಡಿಸಿದೆ. ಹಾಗಾದರೆ, ಪಿಎಫ್​ಐಯ ಸಂಘಟನೆ ಬಗೆಗಿನ ಮುಂದಿನ ಕ್ರಮಗಳೇನು? ಉಳಿದ ಕಾರ್ಯಕರ್ತರು, ಮುಖಂಡರ ಕತೆ ಏನು? ಹೊಸಬರು ಈ ಸಂಘಟನೆಗೆ ಸೇರೋಕೆ ಅವಕಾಶ ಇದೆಯಾ? ಇಲ್ವಾ? ಸೇರಿದ್ರೆ ಅಂಥವರ ವಿರುದ್ಧ ಆಗುವ ಕ್ರಮಗಳೇನು? ಎಂಬಿತ್ಯಾದಿ ಪ್ರಶ್ನೆಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಇನ್ನು ಮುಂದೆ ದೇಶದಲ್ಲಿ ಪಿಎಫ್ಐ ಸಂಘಟನೆ ಹೆಸರೂ ಹೇಳುವಾಗಿಲ್ಲ. ಪಿಎಫ್ಐ ಹೆಸರ ಹೇಳಿದ್ರೇನೆ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ) ಅಡಿಯಲ್ಲಿ ಪ್ರಕರಣ ದಾಖಲಾಗಲಿದೆ. ಹೀಗಾಗಿ ಈಗಿನಿಂದಲೇ ಯಾರೂ ಪಿಎಫ್ಐ ಹೆಸರು ಬಳಸುವಂತಿಲ್ಲ.

ಯಾವ ಹೊಸ ಕಾರ್ಯಕರ್ತರೂ ಈ ಸಂಘಟನೆಗೆ ಸೇರುವಂತಿಲ್ಲ. ಹಾಗೇನಾದ್ರು ಸಂಘಟನೆಗೆ ಸೇರುವ ಪ್ರಯತ್ನ ಮಾಡಿದ್ರೆ ಅವರ ವಿರುದ್ಧ ಯುಎಪಿಎ ಕೇಸ್ ಹಾಕಿ ತಕ್ಷನ ಬಂಧನ ಮಾಡಲಾಗುತ್ತದೆ. ಸಂಘಟನೆಯ ಉಳಿದ ಮುಖಂಡರು ಪಿಎಫ್ಐ ಹೆಸರಲ್ಲಿ ಯಾವುದೇ ಕಾರ್ಯಕ್ರಮ, ಪ್ರತಿಭಟನೆ ಹಾಗೂ ಹಣ ಸಂಗ್ರಹಣೆ ಸೇರಿದಂತೆ ಯಾವುದೇ ಚಟುವಟಿಕೆಯನ್ನೂ ಮಾಡುವಂತಿಲ್ಲ. ಪಿಎಫ್ಐ ಹೆಸರಲ್ಲಿ ಮನೆಯಲ್ಲಿ ನಾಲ್ಕು ಜನ ಸೇರಿ ಸಭೆ ಮಾಡಿದರೂ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಲಾಗುತ್ತದೆ.

ಪಿಎಫ್​ಐ ಬ್ಯಾನ್ ಮಾಡಿದ್ದೇಕೆ?​ ಭಯೋತ್ಪಾದಕ ಕೃತ್ಯಗಳಿಗೆ ನಿಧಿ ಸಂಗ್ರಹ, ತರಬೇತಿ ಶಿಬಿರಗಳ ಆಯೋಜನೆ, ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರ ಮನವೊಲಿಸುವುದು ಮತ್ತು ಉಗ್ರರೊಂದಿಗೆ ಸಂಪರ್ಕ ಸೇರಿದಂತೆ ಇನ್ನಿತರ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಕಾರಣ ನೀಡಿ ಪಿಎಫ್​ಐ ಮತ್ತು ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ (ಸೆ. 28) ಆದೇಶ ಹೊರಡಿಸಿದೆ. ಯುಪಿಪಿಎ (ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ) ಅಡಿಯಲ್ಲಿ ಸಂಘಟನೆಗಳನ್ನು ಸರ್ಕಾರ ಬ್ಯಾನ್​ ಮಾಡಿದೆ. ಪಿಎಫ್​ಐ ಬ್ಯಾನ್​ ಮಾಡುವಂತೆ ಹಲವು ರಾಜ್ಯಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು. ಕಳೆದ ಸೆ.22ರಂದು ಪಿಎಫ್​ಐ ಮೇಲೆ ತನಿಖಾ ಸಂಸ್ಥೆಗಳು ನಡೆಸಿದ ದಾಳಿಯ ಬಳಿಕ ಬಂದ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರ ಬ್ಯಾನ್​ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದೆ. (ದಿಗ್ವಿಜಯ ನ್ಯೂಸ್​)

Koo App
ಮಾನ್ಯ ಪ್ರಧಾನಿ ಶ್ರೀ @narendramodi ಅವರ ನೇತೃತ್ವದ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡು, ಪಿಎಫ್‌ಐ ಹಾಗೂ ಇತರ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳವರೆಗೆ UAPA ಕಾಯಿದೆ ಅಡಿ ನಿಷೇಧಿಸಿರುವುದನ್ನು ಸ್ವಾಗತಿಸುತ್ತೇನೆ. ದೇಶದಲ್ಲಿ ಕೋಮು ಸೌಹಾರ್ದವನ್ನು ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಸಂಸ್ಥೆಗಳ ವಿರುದ್ಧ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಷೇಧ ಕ್ರಮ ವಹಿಸಲಾಗಿದೆ. @AmitShah @bsbommai @blsanthosh @nalinkumarkateel @BJP4Karnataka
View attached media content
-Araga Jnanendra (@aragajnanendra)28 Sep 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net