ನರೇಂದ್ರ ಮೋದಿ @ 72: ವಿಶ್ವನಾಯಕನಿಗೆ ಶುಭಾಶಯಗಳ ಮಹಾಪೂರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು 72ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ವಿಶ್ವನಾಯಕನಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್​ ಷಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯದ ಗಣ್ಯರು ಪ್ರಧಾನಿಗೆ ಶುಭ ಹಾರೈಸಿದ್ದಾರೆ.

ರಾಷ್ಟ್ರ ನಿರ್ಮಾಣ ಅಭಿಯಾನ ಮುಂದುವರಿಯಲಿ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸೃಜನಶೀಲತೆಯಿಂದ ನಡೆಸುತ್ತಿರುವ ನಿಮ್ಮ ರಾಷ್ಟ್ರ ನಿರ್ಮಾಣ ಅಭಿಯಾನವು ನಿಮ್ಮ ನಾಯಕತ್ವದಲ್ಲಿ ಹೀಗೆ ಮುಂದುವರಿಯಲಿ ಎಂದು ನಾನು ಬಯಸುತ್ತೇನೆ. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ನಾನು ಬಯಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟ್ವೀಟ್​ ಮಾಡಿದ್ದಾರೆ.

ಮೋದಿಯವರ ಜೀವನ ಸೇವೆ ಮತ್ತು ಸಮರ್ಪಣೆಯ ಪ್ರತಿರೂಪ
ದೇಶದ ನೆಚ್ಚಿನ ಪ್ರಧಾನಿ ಮತ್ತು ನಮ್ಮೆಲ್ಲರಿಗೂ ಸ್ಫೂರ್ತಿಯಾದ ನರೇಂದ್ರ ಮೋದಿ ಅವರಿಗೆ ನಾನು ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ ಮತ್ತು ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಮೋದಿ ಅವರು ಬಡವರ ಕಲ್ಯಾಣಕ್ಕಾಗಿ ಭಾರತ ಮೊದಲ ಚಿಂತನೆ ಮತ್ತು ಸಂಕಲ್ಪದಿಂದ ಅಸಾಧ್ಯವಾದ ಕಾರ್ಯಗಳನ್ನು ಸಾಧ್ಯವಾಗಿಸಿದ್ದಾರೆ. ಭಾರತೀಯ ಸಂಸ್ಕೃತಿಯ ವಾಹಕರಾಗಿರುವ ನರೇಂದ್ರ ಮೋದಿಯವರು ದೇಶವನ್ನು ಅದರ ಮೂಲ ಬೇರುಗಳಿಗೆ ಜೋಡಿಸಿ, ಪ್ರತಿಯೊಂದು ಕ್ಷೇತ್ರದಲ್ಲೂ ಮುನ್ನಡೆಯುವ ಕೆಲಸ ಮಾಡಿದ್ದಾರೆ. ಮೋದಿಜಿಯವರ ದೂರದೃಷ್ಟಿ ಮತ್ತು ನಾಯಕತ್ವದಲ್ಲಿ ನವ ಭಾರತವು ವಿಶ್ವ ಶಕ್ತಿಯಾಗಿ ಹೊರಹೊಮ್ಮಿದೆ. ಮೋದಿ ಅವರು ಜಾಗತಿಕ ನಾಯಕರಾಗಿ ತಮ್ಮ ಛಾಪು ಮೂಡಿಸಿದ್ದಾರೆ, ಅವರು ಇಡೀ ವಿಶ್ವದಿಂದ ಗೌರವಿಸಲ್ಪಡುತ್ತಾರೆ. ಸುರಕ್ಷಿತ, ಬಲಿಷ್ಠ ಮತ್ತು ಸ್ವಾವಲಂಬಿ ನವ ಭಾರತದ ಸೃಷ್ಟಿಕರ್ತ ನರೇಂದ್ರ ಮೋದಿಯವರ ಜೀವನವು ಸೇವೆ ಮತ್ತು ಸಮರ್ಪಣೆಯ ಪ್ರತಿರೂಪವಾಗಿದೆ. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ಕೋಟಿಗಟ್ಟಲೆ ಬಡವರಿಗೆ, ಅವರ ಹಕ್ಕುಗಳನ್ನು ನೀಡುವ ಮೂಲಕ, ಮೋದಿಯವರು ಬಡವರಲ್ಲಿ ಭರವಸೆ ಮತ್ತು ನಂಬಿಕೆಯ ಭಾವನೆಯನ್ನು ತುಂಬಿದ್ದಾರೆ ಎಂದು ಸರಣಿ ಟ್ವೀಟ್​ ಮಾಡುವ ಮೂಲಕ ಗೃಹ ಸಚಿವ ಅಮಿತ್​ ಷಾ ಪ್ರಧಾನಿ ಮೋದಿಗೆ ಶುಭಕೋರಿದ್ದಾರೆ.

ಹೊಸ ಎತ್ತರ ನೀಡಿದ ಪ್ರಧಾನಿ
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಪ್ರಧಾನಿ ಮೋದಿಯವರು ತಮ್ಮ ನಾಯಕತ್ವದಲ್ಲಿ ದೇಶದಲ್ಲಿ ಪ್ರಗತಿ ಮತ್ತು ಉತ್ತಮ ಆಡಳಿತಕ್ಕೆ ಅಭೂತಪೂರ್ವ ಶಕ್ತಿಯನ್ನು ನೀಡಿದ್ದಾರೆ ಮತ್ತು ಪ್ರಪಂಚದಾದ್ಯಂತ ಭಾರತದ ಪ್ರತಿಷ್ಠೆ ಮತ್ತು ಸ್ವಾಭಿಮಾನಕ್ಕೆ ಹೊಸ ಎತ್ತರವನ್ನು ನೀಡಿದ್ದಾರೆ. ದೇವರು ಅವರನ್ನು ಆರೋಗ್ಯವಾಗಿಟ್ಟು ದೀರ್ಘಾಯುಷ್ಯವನ್ನು ಕಾಪಾಡಲಿ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಶುಭ ಹಾರೈಸಿದ್ದಾರೆ.

ಧೀಮಂತ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ನಾಡಿನ ಜನತೆಯ ಪರವಾಗಿ ಜನ್ಮದಿನದ ಶುಭಾಶಯಗಳು. ಆಯುಷ್ಯ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್​ ಮಾಡಿದ್ದಾರೆ.

ನಮ್ಮ ಪ್ರೀತಿಯ ನಾಯಕ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ನಾಯಕತ್ವ, ಬದ್ಧತೆ ಮತ್ತು ದೂರದೃಷ್ಟಿ ರಾಷ್ಟ್ರಕ್ಕೆ ಸ್ಫೂರ್ತಿ ನೀಡುತ್ತದೆ. ನಿಮ್ಮ ಉತ್ತಮ ಆರೋಗ್ಯ ಮತ್ತು ರಾಷ್ಟ್ರವನ್ನು ಮುನ್ನಡೆಸುವಲ್ಲಿ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಶುಭಕೋರಿದ್ದಾರೆ.

Share This Article

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ