More

    ಅಪಘಾತದಲ್ಲಿ ಶಿವಾಜಿ ನಗರ ಪೊಲೀಸ್ ಸಿಬ್ಬಂದಿ ಸಾವು: ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ

    ಬೆಂಗಳೂರು: ಇಂದು ಮುಂಜಾನೆ ಚಿತ್ತೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಮರಣ ಹೊಂದಿ, ಇತರ ಐದು ಸಿಬ್ಬಂದಿ ಗಾಯಗೊಂಡ ಘಟನೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

    ಅಪಘಾತದ ಸುದ್ದಿ ತಿಳಿದ ತಕ್ಷಣ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಸೂಕ್ತ ಕ್ರಕೈಗೊಳ್ಳುವಂತೆ ಸೂಚಿಸಿದ್ದಾರೆ.

    ಮೃತರು ಹಾಗೂ ಗಾಯಗೊಂಡವರು ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ಗಾಂಜಾ ಗ್ಯಾಂಗ್​ ಬಂಧನಕ್ಕೆಂದು ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದರು. ಈ ವೇಳೆ ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ ಅಪಘಾತ ನಡೆದಿದೆ. ಚಿತ್ತೂರಿನಿಂದ ತಿರುಮಲಕ್ಕೆ ಹೋಗುವ ರಸ್ತೆಯ ನಡುವೆ ಈ ಸೇತುವೆ ಬರುತ್ತದೆ. ಪೊಲೀಸ್​ ಸಿಬ್ಬಂದಿ ಇದ್ದ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಸುಮಾರು 30 ಅಡಿ ದೂರದ ಮತ್ತೊಂದು ರಸ್ತೆಗೆ ಹಾರಿಹೋಗಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಪೊಲೀಸ್​ ಸಿಬ್ಬಂದಿ ಹಾಗೂ ಓರ್ವ ಖಾಸಗಿ ಚಾಲಕ ಸಾವಿಗೀಡಾಗಿದ್ದಾರೆ. ಉಳಿದವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಮುಖ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

    ಗಾಯಗೊಂಡ ಸಿಬ್ಬಂದಿ ನೆರವಿಗೆ ಧಾವಿಸಿ, ಅತ್ಯುತ್ತಮ ಚಿಕಿತ್ಸೆ ದೊರಕಿಸಲು ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವರು ಸೂಚಿಸಿದ್ದಾರೆ. ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ, ಪೊಲೀಸ್ ಸಿಬ್ಬಂದಿ ಮೃತ ಪಟ್ಟಿರುವುದು ಅತ್ಯಂತ ನೋವು ತಂದಿದೆ ಎಂದು ಸಚಿವರು ಹೇಳಿದ್ದಾರೆ.

    ಕೊಪ್ಪಳ ಜಿಲ್ಲೆಯ ಕುಕನೂರಿನ ಬಳಿ ಸಂಭವಿಸಿದ ಇನ್ನೊಂದು ಭೀಕರ ಅಪಘಾತದಲ್ಲಿ ಐದು ಮಂದಿ ಮೃತ ಪಟ್ಟ ಘಟನೆಯ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿ, ದುಃಖ ತಂದಿದೆ ಎಂದರು. ಸ್ಥಳೀಯ ಪೊಲೀಸರು, ಘಟನೆಯ ಸಂಬಂಧ ತನಿಖೆಯನ್ನು ನಡೆಸಿದ್ದಾರೆ ಎಂದು ಹೇಳಿದರು.

    ಗಾಂಜಾಗ್ಯಾಂಗ್ ಹಿಡಿಯಲು ಹೊರಟಿದ್ದ ಶಿವಾಜಿನಗರ ಪೊಲೀಸರ ವಾಹನ ಆಂಧ್ರದಲ್ಲಿ ಅಪಘಾತ: PSI ಸೇರಿ ಮೂವರ ಸಾವು

    ರಣವೀರ್​ ಬೆತ್ತಲೆ ಫೋಟೋ ಬಗ್ಗೆ ಬಾಲಿವುಡ್​ ಬಿಚ್ಚಮ್ಮ ಪೂನಂ ಪಾಂಡೆ ಮಾಡಿರೋ ಕಾಮೆಂಟ್​ ವೈರಲ್!​

    ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್ಸ್​​: ಜಾವಲಿನ್​ ಥ್ರೋ ಫೈನಲ್​ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ಬರೆದ ನೀರಜ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts