

ಮೈಸೂರು: ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್ನಲ್ಲಿ ನಿನ್ನೆ (ಮೇ.27) ನಡೆದಿದೆ.
ಪರಸಪ್ಪ ಕೊನ್ನೂರು (27) ನೇಣಿಗೆ ಶರಣಾದ ಪೇದೆ. ಉತ್ತರ ಕರ್ನಾಟಕ ಮೂಲದ ಪರಸಪ್ಪ, 2016ನೇ ಬ್ಯಾಚ್ನಲ್ಲಿ ಪೊಲೀಸ್ ಹುದ್ದೆಗೆ ಆಯ್ಕೆಯಾಗಿದ್ದ. ಮೈಸೂರಿನ ದೇವರಾಜ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿನ್ನೆ ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕ್ವಾಟ್ರಸ್ನಲ್ಲೇ ನೇಣುಬಿಗಿದುಕೊಂಡು ಪರಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದುವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. (ದಿಗ್ವಿಜಯ ನ್ಯೂಸ್)