More

    ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಕೊಲೆ ಹಿಂದೆ PFI ಇರುವ ಶಂಕೆ

    ಮಂಗಳೂರು: ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

    ಬಂಧಿತರನ್ನು ಝಾಕೀರ್ ಮೊಹಮ್ಮದ್​ ಸವನೂರು ಮತ್ತು ಶಾಫೀಕ್ ಬೆಳ್ಳಾರೆ ಎಂದು ಗುರುತಿಸಲಾಗಿದೆ. ಪ್ರವೀಣ್​ ನೆಟ್ಟಾರ್ ಬಗ್ಗೆ ಬೆಳ್ಳಾರೆ ಪರಿಸರದ ಶಾಫಿಕ್ ಮಾಹಿತಿ ನೀಡಿದ್ದ. ಬಳಿಕ ಸವಣೂರು ಪರಿಸರದ ಜಾಕಿರ್ ಮತ್ತು ಆತನ ತಂಡ ಹತ್ಯೆ ಮಾಡಿರುವುದಾಗಿ ಎಸ್​ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

    ಆರೋಪಿ ಜಾಕಿರ್ ಮೇಲೆ ಕೋಮು ಸಂಬಂಧಿತ ದೂರುಗಳ ಅಡಿಯಲ್ಲಿ ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು. ಇನ್ನಷ್ಟು ಆರೋಪಿಗನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆ.

    ಈ ಬಗ್ಗೆ ಮಾತನಾಡಿರುವ ಎಡಿಜಿಪಿ ಅಲೋಕ್​ ಕುಮಾರ್​, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ನಮ್ಮ ಕಸ್ಟಡಿಗೆ ಕೇಳಿದ್ದೇವೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ? ಮತ್ತು ಕೊಲೆಯ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ನಡೆಸುತ್ತೇವೆ. ಕೊಲೆಯ ಹಿಂದೆ ಪಿಎಫ್​ಐ ಸಂಘಟನೆ ಇರುವ ಶಂಕೆ ಇದೆ ಎಂದಿದ್ದಾರೆ.

    ಘಟನೆ ಹಿನ್ನೆಲೆ ಏನು?
    ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್​ ನೆಟ್ಟಾರ್​ರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. (ದಿಗ್ವಿಜಯ ನ್ಯೂಸ್​)

    VIDEO: ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ: ಸಾಧನೆಯ ಹಾದಿ ವಿವರಿಸಿದ ಸಿಎಂ ಬೊಮ್ಮಾಯಿ…

    ಬೆತ್ತಲೆಯಾಗಿ ಕಾಣಿಸಿಕೊಂಡಿದ್ದಕ್ಕೆ ತೀವ್ರ ಅಸಮಾಧಾನ: ಪವಿ ಟೀಚರ್​ ಕೊಟ್ಟ ಸ್ಪಷ್ಟನೆ ಹೀಗಿದೆ…

    ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ, ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ: ಮಾಜಿ ಸಿಎಂ ಎಚ್​ಡಿಕೆ ಟೀಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts