More

    ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣ: ಸುಳ್ಯ, ಪುತ್ತೂರಿನ ವಿವಿಧ ಕಡೆಗಳಲ್ಲಿ ಎನ್​ಐಎ ದಾಳಿ

    ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಆಯೋಗ(ಎನ್​ಐಎ) ಇಂದು ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

    ಪ್ರವೀಣ್​ ಹತ್ಯೆ ಮಾಡಿದ ಆರೋಪಿಗಳು ಮತ್ತು ಅವರಿಗೆ ಸಹಕಾರ ನೀಡಿದವರನ್ನು ಎನ್​ಐಎ ವಿಚಾರಣೆ ಮಾಡುತ್ತಿದೆ. ಅಲ್ಲದೆ, ಕೆಲ ಮನೆಗಳು ಹಾಗೂ ಕಟ್ಟಡಗಳ ಮೇಲೆಯೂ ದಾಳಿ ಮಾಡಿದ್ದು, ಎನ್​ಐಎ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಒಟ್ಟು 32 ಕಡೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿರುವುದಾಗಿ ಮಾಹಿತಿ ತಿಳಿದುಬಂದಿದೆ.

    ಅಂದಹಾಗೆ ಪ್ರವೀಣ್​ ನೆಟ್ಟಾರ್ ಕೊಲೆ ಪ್ರಕರಣದ ತನಿಖೆಯನ್ನು ಸುಳ್ಯ ಕಿರಿಯ ಸಿವಿಲ್ ನ್ಯಾಯಾಲಯದ ಮೂಲಕ ಕರ್ನಾಟಕ ಪೊಲೀಸರು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಈಗಾಗಲೇ ನಾಲ್ವರ ಮೇಲೆ ಪ್ರಕರಣ ದಾಖಲಿಸಿಕೊಂಡಿದೆ.

    ಸವಣೂರು ನಿವಾಸಿ ಝಾಕೀರ್, ಬೆಳ್ಳಾರೆ ನಿವಾಸಿ ಮಹಮ್ಮದ್ ಶಾಫೀಕ್, ಶೇಖ್ ಸದ್ದಾಂ ಹುಸೇನ್, ಅಬ್ದುಲ್ ಹ್ಯಾರಿಸ್ ಮೇಲೆ ಆಗಸ್ಟ್ 4ರಂದೇ ಎನ್​ಐಎ ಪ್ರಕರಣ ದಾಖಲಿಸಿಕೊಂಡಿದ್ದು, ಹತ್ಯೆಯ ಕುರಿತು ಹೆಚ್ಚಿನ ತನಿಖೆಯನ್ನು ನಡೆಸುತ್ತಿದೆ.

    ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ಪ್ರವೀಣ್ ನೆಟ್ಟಾರ್ ಕೊಲೆಯಾಗಿತ್ತು. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. (ದಿಗ್ವಿಜಯ ನ್ಯೂಸ್​)

    ಮಳೆ ನೀರು ಸೋರದಂತೆ ತಗಡಿನ ಶೀಟ್ ಅಳವಡಿಸುವಾಗ ವಿದ್ಯುತ್​ ತಂತಿ ತಗುಲಿ ಸ್ಥಳದಲ್ಲೇ ಇಬ್ಬರ ಸಾವು

    ಶಾಲೆಯ ಟಾಯ್ಲೆಟ್​ನಲ್ಲಿ ಮಗುವಿಗೆ ಜನ್ಮ ನೀಡಿ 11ನೇ ತರಗತಿ ವಿದ್ಯಾರ್ಥಿನಿ! SSLC ವಿದ್ಯಾರ್ಥಿ ವಿರುದ್ಧ ದೂರು ದಾಖಲು

    ಸ್ಕೂಟರ್​ ಬೀಳುವಾಗ ಸಹಾಯಕ್ಕೆಂದು ವಿದ್ಯುತ್​ ಕಂಬ ಹಿಡಿದ ಯುವತಿ ಸಾವು: ಬೆಸ್ಕಾಂ, ಬಿಬಿಎಂಪಿ ವಿರುದ್ಧ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts