More

    ಪ್ರವೀಣ್ ನೆಟ್ಟಾರ್​ ಹತ್ಯೆ: ಮೂವರು ಪ್ರಮುಖ ಆರೋಪಿಗಳ ಬಂಧನ, ಮಧ್ಯಾಹ್ನ ಸುದ್ದಿಗೋಷ್ಠಿ ಕರೆದ ದಕ್ಷಿಣ ಕನ್ನಡ ಎಸ್ಪಿ

    ಮಂಗಳೂರು: ಬೆಳ್ಳಾರೆ ಮೂಲದ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದು, ಈ ಸಂಬಂಧ ಮಾಹಿತಿ ನೀಡಲು ದಕ್ಷಿಣ ಕನ್ನಡ ಪೊಲೀಸ್​ ವರಿಷ್ಠಾಧಿಕಾರಿ ಇಂದು ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ.

    ಬಂಧಿತ ಪ್ರಮುಖ ಮೂವರು ಆರೋಪಿಗಳು ಕೂಡ ಸ್ಥಳಿಯರೇ ಎಂದು ತಿಳಿದುಬಂದಿದೆ. ಹಂತಕರು ವ್ಯವಸ್ಥಿತ ಸಂಚು ರೂಪಿಸಿ ಪ್ರವೀಣ್​​ ಹತ್ಯೆ ನಡೆಸಿದ್ದಾರೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್​ನನ್ನು ಆಗಸ್ಟ್​ 9ರಂದು ಬಂಧಿಸಲಾಗಿದೆ. ತನ್ನ‌ ಪರಿಚಯಸ್ಥನ ಬೈಕ್ ಪಡೆದಿದ್ದ ಕಬೀರ್​, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.

    ಸದ್ಯ ಪ್ರಕರಣ ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ಈ ಕುರಿತ ಇನ್ನುಷ್ಟು ಮಾಹಿತಿ ಮಧ್ಯಾಹ್ನ ದಕ್ಷಿಣ ಕನ್ನಡ ಎಸ್​ಪಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಸಿಗಲಿದೆ. ಎ.ಡಿ.ಜಿ.ಪಿ ಅಲೋಕ್ ಕುಮಾರ್ ಸಹ ಜಿಲ್ಲೆಯಲ್ಲೇ ಮೊಕ್ಕಾಂ ಹೂಡಿದ್ದು, ಸುದ್ದಿಗೋಷ್ಠಿಯಲ್ಲಿ ಅವರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

    ಘಟನೆ ಹಿನ್ನೆಲೆ ಏನು?
    ಜುಲೈ 26ರಂದು ರಾತ್ರಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್​ ನೆಟ್ಟಾರ್​ರನ್ನು ಬರ್ಬರವಾಗಿ ಕೊಲೆ ಮಾಡಲಾಯಿತು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದೆ. ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. (ದಿಗ್ವಿಜಯ ನ್ಯೂಸ್​)

    ಹುಡುಗಿಯರು ಲೈಂಗಿಕ ಸುಖ ಬಯಸಿದರೆ… ಶಕ್ತಿಮಾನ್​ ಖ್ಯಾತಿಯ ಮುಕೇಶ್​ ಖನ್ನಾ ಹೇಳಿಕೆಗೆ ಭಾರಿ ಆಕ್ರೋಶ!

    VIDEO| ಟಾಲಿವುಡ್​ ಐಟಂ ಸಾಂಗ್​​ಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ ಚಾಹಲ್​ ಪತ್ನಿ ಧನಶ್ರೀ: ವಿಡಿಯೋ ವೈರಲ್​

    ಶೋಕಿಗಾಗಿ ಬೈಕ್​ಗಳನ್ನು ಕದಿಯುತ್ತಿದ್ದ ಇಬ್ಬರು ಬಿ.ಟೆಕ್ ಸ್ಟೂಡೆಂಟ್ಸ್ ಅಂದರ್: 12 ಬುಲೆಟ್, 2 ಡ್ಯೂಕ್ ವಶಕ್ಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts