More

    ಪ್ರವಾದಿ ಕುರಿತು ನೂಪುರ್ ಶರ್ಮಾ ಹೇಳಿಕೆ: ಜಾರ್ಖಂಡ್​ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಇಬ್ಬರು ಬಲಿ

    ರಾಂಚಿ: ಪ್ರವಾದಿ ಮುಹಮ್ಮದ್​ ಕುರಿತ ಬಿಜೆಪಿ ನಾಯಕಿ ನೂಪುರ್​ ಶರ್ಮಾ ಹೇಳಿಕೆ ವಿರೋಧಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಜಾರ್ಖಂಡ್​ನ ರಾಂಚಿಯಲ್ಲಿ ಪ್ರತಿಭಟನೆ ಹಿಂಸಾತ್ಮಕ್ಕೆ ತಿರುಗಿದೆ. ಹಿಂಸೆಯಲ್ಲಿ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನಡೆದ ಘರ್ಷಣೆಯ ಬಳಿಕ ಆಸ್ಪತ್ರೆಗೆ ಕರೆತರಲಾದ ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಿಸದೇ ಮೃತಪಟ್ಟರು ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೂ ಹತ್ತು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ನಿನ್ನೆ (ಜೂ.10) ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆಗೆ ಇಳಿದ ಬಳಿಕ ಜಾರ್ಖಂಡ್ ರಾಜಧಾನಿಯ ಹಲವಾರು ಭಾಗಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ಅವರನ್ನು ನಿಯಂತ್ರಿಸಲು ಲಾಠಿ ಚಾರ್ಜ್​ ಸಹ ಮಾಡಲಾಯಿತು.

    ರಾಂಚಿಯ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಜನಸಮೂಹವು ನೂಪುರ್ ಶರ್ಮಾ ಮತ್ತು ದೆಹಲಿ ಬಿಜೆಪಿಯ ಮಾಧ್ಯಮ ಘಟಕದ ಮಾಜಿ ಮುಖ್ಯಸ್ಥ ನವೀನ್ ಜಿಂದಾಲ್ ವಿರುದ್ಧ ಘೋಷಣೆಗಳನ್ನು ಕೂಗಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಂಚಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. (ಏಜೆನ್ಸೀಸ್​)

    ನಾನು ಲೈಂಗಿಕ ವ್ಯಸನಿಯಂತೆ! ಧನುಷ್​, ಬೈಲ್ವಾನ್​ ರಂಗನಾಥನ್​ ವಿರುದ್ಧ ದೂರು ದಾಖಲಿಸಿದ ಗಾಯಕಿ ಸುಚಿತ್ರಾ

    ಸೈಕಲ್​ ತುಳಿಯುತ್ತಲೇ ಕೆಳಗೆ ಬಿದ್ದ ಗೋರಿಲ್ಲಾಗೆ ಬಂತು ಎಲ್ಲಿಲ್ಲದ ಕೋಪ: ಮುಂದೇನಾಯ್ತು ನೀವೇ ನೋಡಿ…

    ಎನ್​ಪಿಎಸ್ ಪಿಂಚಣಿ ಸಮಸ್ಯೆ ಇತ್ಯರ್ಥ; ಮೃತ ನೌಕರರ ನಾಮನಿರ್ದೇಶಿತರಿಗೆ ಪೂರ್ಣ ಮೊತ್ತ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts