More

    ಪಿಎಸ್​ಐ ನೇಮಕಾತಿ ಹಗರಣ: ಹಣ ಪಡೆದಿದ್ದನ್ನು ಒಪ್ಪಿಕೊಂಡ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು?

    ಕೊಪ್ಪಳ: ಪಿಎಸ್​ಐ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿಗಳಿಂದ ಹಣ ಪಡೆದಿದ್ದನ್ನು ಆಡಳಿತ ಪಕ್ಷದ ಶಾಸಕ ಒಪ್ಪಿಕೊಂಡಿರುವ ಆಡಿಯೋ ವೈರಲ್ ಆಗಿದ್ದು, ಅಕ್ರಮದ ಕಬಂಧಬಾಹು ಜಿಲ್ಲೆಯಲ್ಲೂ ಹರಡಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಪಿಎಸ್ಐ ನೇಮಕಾತಿ ಹಗರಣ ಮತ್ತೊಂದು ತಿರುವು ಪಡೆದಿದೆ.

    ನೇಮಕಾತಿಗಾಗಿ ಹಣ ಪಡೆದಿದ್ದನ್ನು ಜಿಲ್ಲೆಯ ಕ‌ನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು ಮಾತನಾಡಿದ್ದಾರೆನ್ನಲಾದ ಆಡಿಯೋದಲ್ಲಿ ಒಪ್ಪಿಕೊಂಡಿದ್ದಾರೆ. ಪರಸಪ್ಪ ಎಂಬುವರ ಮಗನ ನೇಮಕಾತಿಗೆ ಹಣ ಪಡೆದಿರುವ ಶಾಸಕರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸೋಮವಾರ ವೈರಲ್ ಆಗಿದೆ.

    ಬಳ್ಳಾರಿ ಜಿಲ್ಲೆ ಸಿರುಗುಪ್ಪ ಮೂಲದ ಪರಸಪ್ಪ ಎಂಬುವವರಿಂದ ಹಣ ಪಡೆದು, ಸರಕಾರಕ್ಕೆ ಹಣ ಮುಟ್ಟಿಸಿರುವುದಾಗಿ ಶಾಸಕ ಆಡಿಯೋದಲ್ಲಿ ಬಹಿರಂಗಪಡಿಸಿದ್ದಾರೆ‌. ಹಣ ವಾಪಾಸ್ ಕೇಳಿದ್ದಕ್ಕೆ ಪರಸಪ್ಪನನ್ನು ತರಾಟೆಗೆ ತೆಗೆದುಕೊಂಡಿರುವ ಶಾಸಕನ ನಡೆ ಆಕ್ರೋಶಕ್ಕೀಡಾಗಿದ್ದು, ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ.

    ಶಾಸಕನನ್ನು ಬಂಧಿಸಲು ಎಂಬಿಪಿ ಆಗ್ರಹ
    ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸರ್ಕಾರಕ್ಕೆ ಹಣ ನೀಡಿರುವುದಾಗಿ ಶಾಸಕ ಬಸವರಾಜ ದಢೇಸುಗೂರು ಹೇಳಿದ್ದಾರೆ. ಸರ್ಕಾರ ಈ ಬಗ್ಗೆ ಉತ್ತರಿಸಬೇಕೆಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಒತ್ತಾಯಿಸಿದರು.

    ನಗರದಲ್ಲಿ ಸೋಮವಾರ ಗವಿಮಠಕ್ಕೆ ಭೇಟಿ ನೀಡಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿ, ಈ ಪ್ರಕರಣದಲ್ಲಿ ಸರ್ಕಾರ ಉತ್ತರಿಸಬೇಕು. ಅಕ್ರಮವಾಗಿ ಪಡೆದ ಹಣವನ್ನು ಸರ್ಕಾರಕ್ಕೆ ಕೊಟ್ಟಿದ್ದಾಗಿ ಹೇಳಿದ್ದಾರೆ. ತಕ್ಷಣ ಶಾಸಕನನ್ನು ಬಂಧಿಸಬೇಕು. ಪ್ರಕರಣದಲ್ಲಿ ಯಾರಾರು ಇದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರ ಕೆಂಪಣ್ಣ 40 ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ದಾರೆ. ಈ ಕುರಿತ ತನಿಖೆಯಾಗಬೇಕೆಂದು ಒತ್ತಾಯಿಸಿದರು. ಗವಿಮಠಕ್ಕೆ ಭೇಟಿ ನೀಡಿದ ಎಂಬಿಪಿ ಗವಿಶ್ರೀಗಳ ಆಶೀರ್ವಾದ ಪಡೆದರು. ಕೆಲ ಹೊತ್ತು ಕುಶಲೋಪರಿ ವಿಚಾರಿಸಿದರು. ಬಳಿಕ ಗದ್ದುಗೆ ದರ್ಶನ ಪಡೆದರು.

    ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿದ್ದನ್ನು ಸಹಿಸಲಾರದೇ ಮಗನ ಸಹಪಾಠಿಯನ್ನೇ ಕೊಂದ ಮಹಿಳೆ!

    ಮಠಗಳಲ್ಲಿ ಲೈಂಗಿಕ ಹಗರಣ: ಮಹಿಳೆಯರ ಆಡಿಯೋ ವೈರಲ್​- ಮನನೊಂದು ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ

    ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರ: ವರುಣನ ಅಬ್ಬರ ಮುಂದುವರಿದರೆ ಸಿಲಿಕಾನ್​ ಸಿಟಿಗೆ ಆಪತ್ತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts