More

    ದ್ವಿತೀಯ ಪಿಯು ಫಲಿತಾಂಶ: ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಹೀಗಿದೆ..

    ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ರಷ್ಟು ಹೆಚ್ಚಾಗಿದೆ.

    ಶನಿವಾರ ಬೆಳಗ್ಗೆ 11.30ಕ್ಕೆ ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮೂರು ವಿಭಾಗದಲ್ಲಿ ಒಟ್ಟಾರೆ ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್​ ಆಗಿ ಹೊರ ಹೊಮ್ಮಿದೆ. ಕೊನೇ ಸ್ಥಾನದಲ್ಲಿರುವ ಚಿತ್ರದುರ್ಗ ಜಿಲ್ಲೆಗೆ ಶೇ.49.31 ಫಲಿತಾಂಶ ಬಂದಿದೆ.

    ಹಲವು ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ. ಅದರಲ್ಲಿ ಗಣಿತ ಶಾಸ್ತ್ರದಲ್ಲಿ 14,210 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದರೆ, ಇಂಗ್ಲಿಷ್​ನಲ್ಲಿ ಕೇವಲ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳಿಸಿದ್ದಾರೆ. ಕನ್ನಡದಲ್ಲಿ 563 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳಿಸಿದ್ದಾರೆ.

    ವಿಷಯವಾರು ನೂರಕ್ಕೆ ನೂರರಷ್ಟು ಅಂಕಗಳಿಸಿರುವ ಸಂಪೂರ್ಣ ವಿವರ ಈ ಕೆಳಕಂಡಂತಿದೆ…ದ್ವಿತೀಯ ಪಿಯು ಫಲಿತಾಂಶ: ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಹೀಗಿದೆ..

    ಈ ಬಾರಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಏ.22ರಿಂದ ಮೇ 18ರ ವರೆಗೆ ಪರೀಕ್ಷೆ ನಡೆದಿತ್ತು. ಮಧ್ಯಾಹ್ನ 12 ಗಂಟೆ ನಂತರ https://pue.karnataka.gov.in/ ವೆಬ್​ಸೈಟ್​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುವ ಮೊಬೈಲ್​ ಸಂಖ್ಯೆಗೂ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.

    ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೇಲುಗೈ, ಚಿತ್ರದುರ್ಗಕ್ಕೆ ಕೊನೇ ಸ್ಥಾನ

    ದ್ವಿತೀಯ ಪಿಯು ಫಲಿತಾಂಶ: ಶಿಕ್ಷಣ ಸಚಿವರ ತವರು ಜಿಲ್ಲೆ ತುಮಕೂರಿಗೆ 28ನೇ ಸ್ಥಾನ!

    ಎರಡು ಸರ್ಕಾರಿ ಇಲಾಖೆಗಳ ನಡುವಿನ ಕಿತ್ತಾಟ: ಅಧಿಕಾರಿಗಳ ಉದ್ಧಟತನದಿಂದ ಸಾರ್ವಜನಿಕರು ಹೈರಾಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts