More

    ನಟ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆ ನಾಳಿನ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ರದ್ದು

    ಬೆಂಗಳೂರು: ನಟ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ನಾಳಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮ ರದ್ದಾಗಿದೆ.

    ಬಸವರಾಜ ಬೊಮ್ಮಾಯಿ ಅವರು ನಾಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಬೇಕಿತ್ತು. ಅಲ್ಲದೆ, ತರೀಕೆರೆಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಪುನೀತ್​ ನಿಧನ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಡಿದೆ.

    ಇಂದು ಬೆಳಗ್ಗೆ ಮನೆಯಲ್ಲಿ ಜಿಮ್​ ಮಾಡುವಾಗ ಹೃದಯಾಘಾತ ಆಯಿತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ದಾಖಲಿಸಲಾಯಿತು. ಪರಿಸ್ಥಿತಿ ಗಂಭೀರವಾದ ಬಳಿಕ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಸಂಖ್ಯಾತ ಅಭಿಮಾನಿಗಳ ಕೋರಿಕೆ ಕೊನೆಗೂ ಫಲಿಸಲಿಲ್ಲ. ಆಸ್ಪತ್ರೆಯಲ್ಲಿ ಪುನೀತ್​ ಕೊನೆಯುಸಿರೆಳೆದಿದ್ದಾರೆ. (ದಿಗ್ವಿಜಯ ನ್ಯೂಸ್​)

    ನಟ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆ ನಾಳಿನ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ರದ್ದು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts