ನ್ಯೂಯಾರ್ಕ್​ನಿಂದ ದೆಹಲಿಗೆ ಬಂದಿಳಿದ ನಟ ಪುನೀತ್​ ಪುತ್ರಿ ದೃತಿ: ಸಂಜೆ 4.15 ಕ್ಕೆ‌ ಬೆಂಗಳೂರಿಗೆ ಆಗಮನ

Puneeth daughter
Published on

ಬೆಂಗಳೂರು: ಪುನೀತ್ ರಾಜ್​ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಈಗಾಗಲೇ ತಿಳಿಸಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ ಪುನೀತ್​ ಪುತ್ರಿ ದೃತಿ ಈಗಾಗಲೇ ನ್ಯೂಯಾರ್ಕ್​ನಿಂದ ದೆಹಲಿಗೆ ಆಗಮಿಸಿದ್ದಾರೆ. ಏರ್ ಇಂಡಿಯಾ 102 ವಿಮಾನದಲ್ಲಿ ದೃತಿ ದೆಹಲಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ಮಧ್ಯಾಹ್ನ 1.30ಕ್ಕೆ ದೃತಿ ಏರ್ ಇಂಡಿಯಾ ವಿಮಾನ ಹತ್ತಲಿದ್ದಾರೆ.

ಏರ್ ಇಂಡಿಯಾ​ 502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.15 ಕ್ಕೆ‌ ಬಂದಿಳಿಯಲಿದ್ದಾರೆ. ಬಳಿಕ ವಿಮಾನ ನಿಲ್ದಾಣದಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳಲಿದ್ದಾರೆ ಎಂಬ ಮಾಹಿತಿ ಇದೆ.

ಪ್ರಸ್ತುತ ಪುನೀತ್ ರಾಜ್​ಕುಮಾರ್ ಅವರ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ ಮೂರ ಗಂಟೆಗೆ ಪುನೀತ್​ ಅವರ ಪಾರ್ಥೀವ ಶರೀರವನ್ನು ಕಂಠೀರವ ಸ್ಟುಡಿಯೋಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತದೆ. ಮೆರವಣಿಗಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.

ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರ ಕಾರ್ಯಕ್ಕೆ ಸಂಬಂಧಿಸಿದಂತೆ ಸಂಚಾರ ಮಾರ್ಗದಲ್ಲಿ ಈ ರೀತಿ ಬದಲಾವಣೆ ಮಾಡಿಕೊಳ್ಳಲಾಗಿದೆ.

1. ಮೈಸೂರು ರಸ್ತೆಯಿಂದ ತುಮಕೂರು ರಸ್ತೆ ಕಡೆಗೆ ಹೋಗುವ ವಾಹನಗಳನ್ನು ನೈಸ್ ರಸ್ತೆ, ನಾಯಂಡಹಳ್ಳಿ, ನಾಗರಬಾವಿ ಮತ್ತು ಸುಮನಹಳ್ಳಿ ಜಂಕ್ಷನ್​ನಲ್ಲಿ ಬದಲಾಯಿಸಲಾಗಿದೆ.

2. ತುಮಕೂರು ರಸ್ತೆಯಿಂದ ಬೆಂಗಳೂರು ನಗರಕ್ಕೆ ಮೇಲುಸೇತುವೆ ಮೇಲೆ ಹೋಗುವ ವಾಹನಗಳು ಮತ್ತು ತುಮಕೂರು ರಸ್ತೆಯಿಂದ ಮೈಸೂರು ರಸ್ತೆ ಕಡೆಗೆ ಸಿಎಂಟಿಐ ಜಂಕ್ಷನ್​ನಲ್ಲಿ ಮಾರ್ಗ ಬದಲಾಯಿಸಲಾಗಿದೆ.

3. ಜಾಲಹಳ್ಳಿ ಕ್ರಾಸ್ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಟಿವಿಎಸ್​ ಕ್ರಾಸ್​ ಮತ್ತು ಸೋನಾಲ್ ಗಾರ್ಮೆಂಟ್ಸ್ ಬಳಿ ಬದಲಾಯಿಸಲಾಗಿದೆ.

4. ಮಹಾಲಕ್ಷ್ಮಿ ಬಡಾವಣೆ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಕೃಷ್ಣಾನಂದ ನಗರ ಜಂಕ್ಷನ್ ಬಳಿ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net