More

    ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಕಾಂಗ್ರೆಸ್​ ಪ್ರತಿಭಟನೆ: ರಾಹುಲ್​ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರ ಬಂಧನ

    ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಮತ್ತು ಜಿಎಸ್‌ಟಿ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರವ್ಯಾಪಿ ನಡೆಸುತ್ತಿರುವ ಬೃಹತ್​​ ಪ್ರತಿಭಟನೆಯ ನಡುವೆ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಕ್ಷೇತ್ರದ ಸಂಸದ ರಾಹುಲ್​ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

    ಕಾಂಗ್ರೆಸ್​ ಮುಖ್ಯ ಕಚೇರಿ ಹೊರ ಭಾಗದಲ್ಲಿ ಪ್ರತಿಭಟನೆ ನಡೆಸುವ ವೇಳೆ ರಾಹುಲ್​ ಗಾಂಧಿ ಹಾಗೂ ಶಶಿ ತರೂರ್​ ಸೇರಿದಂತೆ ಅನೇಕ ಕಾಂಗ್ರೆಸ್​ ಸಂಸದರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್​ ಮುಖ್ಯಕಚೇರಿಯ ಹೊರಗೆ ಕಾಂಗ್ರೆಸ್​ ನಾಯಕರು ಹಾಗೂ ಕಾರ್ಯಕರ್ತರ ನಡೆಸುತ್ತಿದ್ದ ಪ್ರತಿಭಟನೆಯನ್ನು ದೆಹಲಿ ಪೊಲೀಸರು ತಡೆದಿದ್ದಾರೆ.

    ಕಾಂಗ್ರೆಸ್​ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಇಂದು ಸಂಸತ್ತಿನಲ್ಲಿ ಕಪ್ಪು ಬಟ್ಟೆ ಧರಿಸಿ ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸಿದರು. ಅಲ್ಲದೆ, ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಕೋಲಾಹಲ ಸೃಷ್ಟಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಮುಂದೂಡಲಾಯಿತು.

    ಸಮಸ್ಯೆಗಳ ಕುರಿತು ಬೆಳಕು ಚೆಲ್ಲಲು ಪ್ರತಿಭಟನೆ ಮೂಲಕ ಪ್ರಧಾನಿ ಹೌಸ್ ಘೇರಾವ್ ಹಾಕಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಹಿರಿಯ ನಾಯಕರು ಯೋಜಿಸಿದ್ದರು. ಆದರೆ, ಅನೇಕ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಮುಂಚಿತವಾಗಿಯೇ ತಿಳಿದಿದ್ದ ಕೇಂದ್ರ ಸರ್ಕಾರ, ದೆಹಲಿಯ ಕೆಲವು ಭಾಗಗಳಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸುವ ನಿಷೇಧಾಜ್ಞೆಗಳನ್ನು ವಿಧಿಸಿತು. ಅಲ್ಲದೆ, ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ಕೋರಿದ್ದ ಕಾಂಗ್ರೆಸ್‌ ಅನುಮತಿಯನ್ನು ದೆಹಲಿ ಪೊಲೀಸರು ನಿರಾಕರಿಸಿದ್ದರು. ಆದರೂ, ಪ್ರತಿಭಟನೆ ನಡೆಸಿದ್ದಕ್ಕೆ ಕಾಂಗ್ರೆಸ್​ ನಾಯಕರನ್ನು ಬಂಧಿಸಲಾಗಿದೆ.

    ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಾವು ಪ್ರಜಾಪ್ರಭುತ್ವದ ಸಾವಿಗೆ ಸಾಕ್ಷಿಯಾಗಿದ್ದೇವೆ. ಸುಮಾರು ಒಂದು ಶತಮಾನದ ಹಿಂದೆ ಭಾರತವನ್ನು ಒಂದೊಂದು ಇಟ್ಟಿಗೆಯಿಂದ ನಿರ್ಮಿಸಲಾಗಿದೆ. ಆದರೆ, ಇಂದು ನಮ್ಮ ಕಣ್ಣುಗಳ ಮುಂದೆಯೇ ನಾಶವಾಗುತ್ತಿದೆ. ಇದರ ವಿರುದ್ಧ ಯಾರಾದರೂ ನಿಂತರೆ, ಸರ್ವಾಧಿಕಾರದ ಮೂಲಕ ಕ್ರೂರವಾಗಿ ದಾಳಿ ಮಾಡಿ, ಜೈಲಿಗೆ ಹಾಕಲಾಗಗುತ್ತಿದೆ ಮತ್ತು ಥಳಿಸಲಾಗುತ್ತಿದೆ ಎಂದು ಕಾಂಗ್ರೆಸ್​ ಆರೋಪ ಮಾಡಿದೆ.

    ಕಾಂಗ್ರೆಸ್​ ಪ್ರತಿಭಟನೆಗೆ ತಿರುಗೇಟು ನೀಡಿರುವ ಬಿಜೆಪಿ, ವಂಶಾಡಳಿತ ಪಕ್ಷ ಎಂಬ ಹಣೆಪಟ್ಟಿ ಹೊತ್ತಿರುವ ಕಾಂಗ್ರೆಸ್‌ನಲ್ಲಿ ಪ್ರಜಾಪ್ರಭುತ್ವ ಇದೆಯೇ ಎಂದು ಪ್ರಶ್ನೆ ಮಾಡಿದೆ. (ಏಜೆನ್ಸೀಸ್​)

    ನಕಲಿ ಮದ್ಯ ಸೇವಿಸಿ ಏಳು ಮಂದಿ ಸಾವು: ಕಣ್ಣು ಕಳೆದುಕೊಂಡ 25ಕ್ಕೂ ಅಧಿಕ ಜನ

    ಪ್ರವಾಸಿಗರ ಸ್ವರ್ಗ ಮಾಲ್ಡೀವ್ಸ್​ನಲ್ಲಿ ನಟಿಮಣಿಯರ ಬಿಕಿನಿ ಅವತಾರ ಹಿಂದಿರುವ ರಹಸ್ಯ ಬಯಲು!

    ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಸೋರುತಿದೆ ವಿಜಯ ಮಲ್ಯ ನೀಡಿದ್ದ ಚಿನ್ನದ ಲೇಪಿತ ಚಾವಣಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts