More

    ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸು: ಮುಂದಿನ ನಾಲ್ಕು ದಿನ ಭಾರಿ ಮಳೆ ಬೀಳುವ ಸಾಧ್ಯತೆ

    ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಬಿರುಸುಗೊಳ್ಳಲಿದೆ.

    ಶನಿವಾರವೂ ವಿವಿಧ ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಿದ್ದು, ಮಾನ್ವಿ 19, ಮದ್ದೂರು 10, ಶಿರಾ 9, ರಾಮನಗರ 9, ರಾಯಚೂರು, ಬಳ್ಳಾರಿಯ ಕೊಟ್ಟೂರು, ಶ್ರೀರಂಗಪಟ್ಟಣ ಮತ್ತು ಬೆಂಗಳೂರು ತಲಾ 7 ಸೆಂಮೀ ಬಿದ್ದಿದೆ.

    ಚಿಕ್ಕಮಗಳೂರು, ಚಾಮರಾಜನಗರ, ಕೋಲಾರದಲ್ಲಿ ಮುಂದಿನ 4 ದಿನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರಿನಲ್ಲಿ ಆ.29ರಿಂದ ಆ.31ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಧಾರವಾಡ, ಬಳ್ಳಾರಿ, ಗದಗ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನದಲ್ಲಿ ಆ.30 ಮತ್ತು ಆ.31 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ವಾರದಲ್ಲಿ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದರೆ ಉತ್ತರ ಒಳನಾಡಿನಲ್ಲಿ ನಾಲ್ಕೈದು ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ವಾಡಿಕೆಯಷ್ಟೇ ಸುರಿದಿದೆ.

    ಸಾರ್ವಜನಿಕ ಗಣೇಶೋತ್ಸವ: ಪೊಲೀಸ್​ ಇಲಾಖೆ ಪ್ರಕಟಿಸಿರುವ ಮಾರ್ಗಸೂಚಿ ಹೀಗಿದೆ ನೋಡಿ…

    ಬಾಯ್​ಫ್ರೆಂಡ್​ಗಾಗಿ ಬಸ್​ ನಿಲ್ದಾಣದಲ್ಲೇ ಬಡಿದಾಡಿಕೊಂಡ ಅಪ್ರಾಪ್ತೆಯರು: ಹುಡುಗನ ನಡೆಯಿಂದ ಇಬ್ಬರಿಗೂ ಮುಖಭಂಗ

    ಲೈಗರ್​ ಸಿನಿಮಾ ಸೋಲು: ನಟಿ ಅನಸೂಯ ವಿರುದ್ಧ ಮುಗಿಬಿದ್ದ ವಿಜಯ್​ ದೇವರಕೊಂಡ ಫ್ಯಾನ್ಸ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts