More

    ನಡೆದಾಡುವ ದೇವರೆಂದೇ ಹೆಸರಾಗಿದ್ದ ಚನ್ನಪಟ್ಟಣದ ಗೌಡಗೆರೆ ಗ್ರಾಮದ ಪವಾಡ ಬಸವಪ್ಪ ಇನ್ನಿಲ್ಲ

    ರಾಮನಗರ: ನಡೆದಾಡುವ ದೇವರು ಎಂದೇ ಹೆಸರುವಾಸಿಯಾಗಿದ್ದ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ಪುಣ್ಯಕ್ಷೇತ್ರದ ಪವಾಡ ಪ್ರಸಿದ್ಧ ಬಸವಪ್ಪ ಭಾನುವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದೆ.

    20ರ ವಯೋಮಾನದ ಈ ಪವಾಡ ಬಸವಪ್ಪ ಕೆಲದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತಿತ್ತು. ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಪುಣ್ಯಕ್ಷೇತ್ರದಲ್ಲಿ ನೆಲೆಸಿದ್ದ ಬಸವಪ್ಪ ಸುಮಾರು ಇಪ್ಪತ್ತು ವರ್ಷಗಳಿಂದ ಭಕ್ತರ ಕೋರಿಕೆ, ಕಷ್ಟಗಳನ್ನು ನಿವಾರಣೆ ಮಾಡುತ್ತಿತ್ತು. ತನ್ನ ಪವಾಡಗಳಿಂದ ರಾಜ್ಯದೆಲ್ಲೆಡೆ ಸಾಕಷ್ಟು ಪ್ರಸಿದ್ಧಿ ಪಡೆದಿತ್ತು. ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬಸವಪ್ಪನ ಆಶೀರ್ವಾದ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಬರುತ್ತಿದ್ದರು.

    ಊರಿನ ವ್ಯಾಜ್ಯಗಳನ್ನು ಪರಿಹರಿಸುವಲ್ಲಿ ಬಸವಪ್ಪ ಮೊದಲಿಗನಾಗಿದ್ದ. ನಡೆದಾಡುವ ದೇವರೆಂದೇ ಹೆಸರುವಾಸಿಯಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಸವಪ್ಪ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಇಹಲೋಹ ತ್ಯಜಿಸಿದೆ. ಇಡೀ ವಿಶ್ವದಲ್ಲೇ ಅತೀ ಎತ್ತರದ ಚಾಮುಂಡೇಶ್ವರಿ ವಿಗ್ರಹ ಪ್ರತಿಷ್ಠಾಪಿಸಿರುವ ಸ್ಥಳ ಎಂದು ಗೌಡಗೆರೆ ಕ್ಷೇತ್ರ ಹೆಸರುವಾಸಿಯಾಗಿದೆ

    ಬಸವಪ್ಪ ಗೌಡಗೆರೆ ಕ್ಷೇತ್ರದ ಮುಕುಟಮಣಿಯಂತಿದ್ದ. ದೇವಾಲಯದ ಧರ್ಮದರ್ಶಿ ಡಾ. ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಂತಿಮ ದರ್ಶನ ಪಡೆಯಲು ಕ್ಷೇತ್ರಕ್ಕೆ ಭಕ್ತರು ದೌಡಾಯಿಸುತ್ತಿದ್ದಾರೆ. ದೇವಾಲಯದ ಆವರಣದಲ್ಲೇ ಸೋಮವಾರ ಬೆಳಗ್ಗೆ 12 ಗಂಟೆಗೆ ಪವಾಡ ಪುರುಷ ಬಸವಪ್ಪನ ಅಂತ್ಯ ಸಂಸ್ಕಾರ ನಡೆಯಲಿದೆ.

    ಯೂಕ್ರೇನ್​ನಿಂದ ಸುರಕ್ಷಿತವಾಗಿ ಆಗಮಿಸಿದ ಕುಂದಗೋಳದ ಯುವತಿಗೆ ಸಿಹಿ ತಿನಿಸಿ ಶುಭ ಕೋರಿದ ಸಿಎಂ ಬೊಮ್ಮಾಯಿ

    ತನ್ನ ಕಾರು ಅಪಘಾತಕ್ಕೀಡಾದ ಬಗ್ಗೆಯೇ ಹೊಸ ಹಾಡು ರಚಿಸಿ ಧ್ವನಿ ನೀಡಿದ ಕಚ್ಚಾ ಬಾದಾಮ್​ ಗಾಯಕ!

    ಈ ಎರಡು ಪೀಸ್​ ಬಟ್ಟೆಗೆ ಇಷ್ಟೊಂದು ಹಣ ಕೊಡ್ಬೇಕಿತ್ತಾ? ಸಿಕ್ಕಾಪಟ್ಟೆ ಟ್ರೋಲ್​ ಆಗುತ್ತಿರುವ ಕರೀನಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts