More

    ಸತತ ನಾಲ್ಕನೇ ಬಾರಿ ರೆಪೋ ದರ ಏರಿಸಿದ RBI: ಬ್ಯಾಂಕ್​ ಸಾಲಗಾರರಿಗೆ ಇಎಂಐ ಮತ್ತಷ್ಟು ದುಬಾರಿ

    ನವದೆಹಲಿ: ಸತತ ನಾಲ್ಕನೇ ಬಾರಿಗೆ ಭಾರತೀಯ ರಿಸರ್ವ್​ ಬ್ಯಾಂಕ್​ (ಆರ್​ಬಿಐ) ತನ್ನ ರೆಪೋ ದರವನ್ನು ಏರಿಕೆ ಮಾಡಿದೆ. ಶುಕ್ರವಾರ (ಸೆ.30) 50 ಮೂಲ ಅಂಶಗಳ ಏರಿಕೆಯೊಂದಿಗೆ ಶೇ. 5.90ಕ್ಕೆ ರೆಪೋ ದರವನ್ನು ಆರ್​ಬಿಐ ಹೆಚ್ಚಳ ಮಾಡಿದೆ.

    ರೆಪೋ ದರ ಏರಿಕೆಯಿಂದ ಗೃಹ, ವಾಹನ ಸಾಲಗಳ ಬ್ಯಾಂಕ್​ಗಳ ಇಎಂಐ ಮೊತ್ತ ಮತ್ತಷ್ಟು ದುಬಾರಿಯಾಗಲಿದ್ದು, ಜನ ಸಾಮಾನ್ಯರ ಜೇಬಿಗೆ ಹೊರೆಯಾಗಲಿದೆ. ಆದರೆ, ನಿಶ್ಚಿತ ಠೇವಣಿ ಇರಿಸುವವರಿಗೆ ಕೊಂಚ ಪ್ರಯೋಜನವಾಗಲಿದೆ.

    ಪ್ರಸ್ತುತ ಹಣಕಾಸು ವರ್ಷದಲ್ಲಿ ನಾಲ್ಕನೇ ಬಾರಿಗೆ ರೆಪೋ ದರ ಏರಿಕೆಯಾಗಿದೆ. ಆರ್​ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ)ಯ ಮೂರು ದಿನಗಳ ಸಭೆಯ ಬಳಿಕ ರೆಪೋ ದರ ಏರಿಕೆ ನಿರ್ಧಾರವನ್ನು ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾಸ್ ಶುಕ್ರವಾರ ಪ್ರಕಟಿಸಿದ್ದಾರೆ. ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಹಣದುಬ್ಬರವನ್ನು ಗುರಿಯೊಳಗೆ ಇರಿಸಿಕೊಳ್ಳುವತ್ತ ಗಮನಹರಿಸಲು ಎಂಪಿಸಿ ನಿರ್ಧರಿಸಿದೆ ಎಂದು ಶಕ್ತಿಕಾಂತ್ ದಾಸ್​ ಹೇಳಿದ್ದಾರೆ.

    ಕಳೆದ ಆಗಸ್ಟ್​ನಲ್ಲಿ 50 ಮೂಲ ಅಂಶಗಳ ಏರಿಕೆಯೊಂದಿಗೆ ಶೇ. 5.40ಕ್ಕೆ ಆರ್​ಬಿಐ ರೆಪೋ ದರ ಹೆಚ್ಚಳ ಮಾಡಲಾಗಿತ್ತು. ಮೇ ತಿಂಗಳಲ್ಲಿ 40 ಮೂಲ ಅಂಶದೊಂದಿಗೆ ಶೇ 4.40 ರಷ್ಟು ಹೆಚ್ಚಿಸಿತ್ತು. ನಂತರ ಜೂನ್‌ನಲ್ಲಿ 50 ಮೂಲ ಅಂಶಗಳೊಂದಿಗೆ ಶೇ. 4.90 ಕ್ಕೆ ಏರಿಸಿತ್ತು.

    ತಪ್ಪು ಆಹಾರ ಸೇವಿಸಿದ್ರೆ… ಮಾಂಸಾಹಾರಿಗಳಿಗೆ ಸಲಹೆ ನೀಡಿದ ಆರ್​​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​

    ಡಿ.ಕೆ.ಶಿವಕುಮಾರ್​ಗೆ ಯಾಮಾರಿಸಿ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಸಿದ್ದು!?

    ಚರ್ಮಗಂಟು ರೋಗದಿಂದ ಜಾನುವಾರು ಸತ್ತರೆ ಸಿಗಲಿದೆ ಪರಿಹಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts