More

    ಯೇಸು ಕ್ರಿಸ್ತನ ಉದಾತ್ತ ಬೋಧನೆಗಳನ್ನು ನೆನಪಿಸಿಕೊಳ್ಳೋಣ: ಕ್ರಿಸ್​ಮಸ್​ಗೆ ಶುಭಕೋರಿದ ಪ್ರಧಾನಿ ಮೋದಿ

    ನವದೆಹಲಿ: ಮಹಾಮಾರಿ ಕರೊನಾ ಸಾಂಕ್ರಮಿಕ ನಡುವೆಯೂ ಇಂದು ಸರಳವಾಗಿ ಕ್ರಿಸ್​​ಮಸ್​ ಆಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್​ ಮೂಲಕ ಶುಭ ಹಾರೈಸಿದ್ದಾರೆ.

    ಎಲ್ಲರಿಗೂ ಕ್ರಿಸ್​ಮಸ್​ ಶುಭಾಶಯಗಳು. ಸೇವೆ, ದಯೆ ಮತ್ತು ನಮ್ರತೆಗೆ ಹೆಚ್ಚಿನ ಒತ್ತು ನೀಡಿದ ಯೇಸು ಕ್ರಿಸ್ತನ ಜೀವನ ಮತ್ತು ಉದಾತ್ತ ಬೋಧನೆಗಳನ್ನು ನಾವು ನೆನಪಿಸಿಕೊಳ್ಳೋಣ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧಿಯಾಗಿರಲಿ. ನಮ್ಮ ಸುತ್ತಲೂ ಸಾಮರಸ್ಯವಿರಲಿ ಎಂದು ಟ್ವೀಟ್​ ಮೂಲಕ ಪ್ರಧಾನಿ ಶುಭಕೋರಿದ್ದಾರೆ.

    ಕರೊನಾ ರೂಪಾಂತರಿ ಒಮಿಕ್ರಾನ್​ ಹೆಚ್ಚಳದಿಂದ ಅದ್ಧೂರಿ ಕ್ರಿಸ್​ಮಸ್​ ಆಚರಣೆಯ ಮೇಲೆ ಕರಿನೆರಳು ಬಿದ್ದಿದೆ. ಈಗಾಗಲೇ ಚೀನಾ, ಬ್ರಿಟನ್​ ಸೇರಿದಂತೆ ಹಲವು ದೇಶಗಳು ಕಠಿಣ ಕ್ರಮಗಳ ಮೊರೆ ಹೋಗಿವೆ. ಭಾರತದಲ್ಲೂ ಕೂಡ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಕೆಲವು ರಾಜ್ಯಗಳು ಈಗಾಗಲೇ ಕಠಿಣ ನಿರ್ಬಂಧಗಳನ್ನು ಹೇರಿವೆ.

    ಮಹಾರಾಷ್ಟ್ರದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್​ ಕರ್ಫ್ಯೂ ವಿಧಿಸಿದೆ. ದೆಹಲಿ ಮತ್ತು ಹರಿಯಾಣ ಸರ್ಕಾರವೂ ಕೂಡ ಕ್ರಿಸ್​ಮಸ್​ ಆಚರಣೆಯ ಮೇಲೆ ನಿರ್ಬಂಧ ಹೇರಿದೆ. ದೆಹಲಿಯಲ್ಲಿ ಪೂಜಾ ಸ್ಥಳಗಳನ್ನು ತೆರೆಯಲು ಮಾತ್ರ ಅವಕಾಶ ಮಾಡಿಕೊಟ್ಟಿದೆ.

    ಕರ್ನಾಕದಲ್ಲೂ ಕೂಡ ಕ್ರಿಸ್​ಮಸ್​ ಆಚರಣೆಗೆ ಸರ್ಕಾರ ಪ್ರತ್ಯೇಕ ಗೈಡ್​ಲೈನ್ ಜಾರಿ ಮಾಡಿದೆ. ಚರ್ಚ್‌ಗಳಲ್ಲಿ ಕೋವಿಡ್‌ ಮಾರ್ಗಸೂಚಿ ಕಡ್ಡಾಯವಾಗಿದೆ. ಆದಾಗ್ಯೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಯಾವುದೇ ನಿರ್ಬಂಧ ಇಲ್ಲ, ಪ್ರಾರ್ಥನೆ ಸಲ್ಲಿಸುವ ವೇಳೆ ಎಚ್ಚರಿಕೆ ವಹಿಸುವುದು ಕಡ್ಡಾಯವಾಗಿದ್ದು, ಪ್ರಾರ್ಥನಾ ಸ್ಥಳಗಳಲ್ಲಿ ಕೊರೋನಾ ಎಚ್ಚರಿಕೆ ಕ್ರಮ ವಹಿಸಬೇಕು ಎಂದು ಹೇಳಿದೆ. (ಏಜೆನ್ಸೀಸ್​)

    ರಾಜಸ್ಥಾನದಲ್ಲಿ ಮಿಗ್​-21 ಫೈಟರ್​ ಜೆಟ್​ ಪತನ: ಪೈಲಟ್​ ವಿಂಗ್​ ಕಮಾಂಡರ್ ಹುತಾತ್ಮ​

    ದುಡ್ಡು ಇಲ್ಲ, ಮನೆಯೂ ಸಿಗಲಿಲ್ಲ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ನಟ, ನಿರ್ದೇಶಕ ನಾಗಶೇಖರ್​

    ಸಾರ್ವಜನಿಕರ ಕ್ಷಮೆಯಾಚಿಸದಿದ್ರೆ ಭಾರತದಲ್ಲಿ ಉಳಿಯಲು ಬಿಡುವುದಿಲ್ಲ: ಸನ್ನಿ ಲಿಯೋನ್​ಗೆ ಅರ್ಚಕರ ಎಚ್ಚರಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts