More

    ಅ.30ರೊಳಗೆ ಮೀಸಲಾತಿ ವರದಿ ಪಡೆಯಿರಿ: ಪಂಚಮಸಾಲಿ ಪೀಠದಿಂದ ಸರ್ಕಾರಕ್ಕೆ ಆಗ್ರಹ

    ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕುರಿತು ರಾಜ್ಯ ಹಿಂದುಳಿದ ಆಯೋಗ ಸಿದ್ಧಪಡಿಸುತ್ತಿರುವ ವರದಿಯನ್ನು ಉಪಚುನಾವಣೆ ಮತದಾನ ದಿನಕ್ಕಿಂತ (ಅ.30) ಮೊದಲು ಸರ್ಕಾರ ಪಡೆದುಕೊಳ್ಳಬೇಕು ಎಂದು ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕುರಿತ ಹೋರಾಟ ದೊಡ್ಡ ಮಟ್ಟದಲ್ಲಿ ಸಾಗಿ ಬಂದಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುವ ಕುರಿತು ರಾಜ್ಯ ಹಿಂದುಳಿದ ವರ್ಗದ ಆಯೋಗದಿಂದ ವರದಿ ಸಿದ್ಧಪಡಿಸಲಾಗುತ್ತಿದೆ. ವರದಿ ಬಂದ 3 ತಿಂಗಳಲ್ಲಿ ಮೀಸಲಾತಿ ಕಲ್ಪಿಸುವುದಾಗಿ ಹಾಗೂ ಕೇಂದ್ರಕ್ಕೆ ಶಿಾರಸು ಮಾಡುವುದಾಗಿ ತಿಳಿಸಿದ್ದಾರೆ. ಆದರೆ ರಾಜ್ಯದ 2 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಮೀಸಲಾತಿ ವರದಿ ತರಿಸಿಕೊಂಡ ಆಡಳಿತಾರೂಢ ಪಕ್ಷಕ್ಕೆ ಅನುಕೂಲವಾಗಲಿದೆ. ಹಾನಗಲ್‌ನಲ್ಲಿ 60 ಸಾವಿರ ಮತ್ತು ಸಿಂಧಗಿಯಲ್ಲಿ 35 ಸಾವಿರ ಪಂಚಮಸಾಲಿ ಮತಗಳಿದ್ದು, ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಲಿವೆ ಎಂದರು.

    ಮೀಸಲಾತಿ ಹೋರಾಟ ಮುಂದಿವರಿಕೆ: ಪಂಚಮಸಾಲಿ ಮೀಸಲಾತಿ ಹೋರಾಟದ ಅಂಗವಾಗಿ ಪಾದಯಾತ್ರೆ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಜ್ಞಾ ಅಭಿಯಾನ ಪೂರ್ಣಗೊಳಿಸಲಾಗಿದೆ. ಪುನಃ ಮೀಸಲಾತಿ ಹೋರಾಟ ಸ್ಥಗಿತಗೊಳ್ಳಬಾರದು ಎಂಬ ಉದ್ದೇಶದಿಂದ ಎರಡನೇ ಹಂತದಲ್ಲಿ ಅ.13 ರಿಂದ 2022ರ ಜ.14ರವರೆಗೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಅವರ ಜನ್ಮಸ್ಥಳ ಉಡುತಡಿ, ಮೈಸೂರು ನಗರದ ವಾರ್ಡ್‌ಗಳು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಭಿಯಾನ ಮುಗಿಸಿದ್ದು, ಬೆಂಗಳೂರು ನಗರ ಮತ್ತು ಜಿಲ್ಲೆಗಳಲ್ಲಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿಜ್ಞಾ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು.

    ರಾಜ್ಯದಲ್ಲಿ ಅ.23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆಯನ್ನು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹಕ್ಕೊತ್ತಾಯದ ಆಶಯ ಇಟ್ಟುಕೊಂಡು ಆಚರಿಸಬೇಕು. ಇನ್ನು ಬಸನಗೌಡ ಪಾಟೀಲ್ ಯತ್ನಾಲ್ ಕುರಿತಂತೆ ಪ್ರತಿಕ್ರಿಯೆ ನೀಡುವುದಿಲ್ಲ.
    | ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠ

    ಕೇಂದ್ರ ನೌಕರರ ಡಿಎ ಹೆಚ್ಚಳ; ಶೇ.3 ಏರಿಕೆಗೆ ಸಂಪುಟ ಅಸ್ತು, ದೀಪಾವಳಿ ಕೊಡುಗೆ..

    ಸಹಾಯ ಪ್ರಾಧ್ಯಾಪಕ ಹುದ್ದೆ ಅರ್ಜಿ ಸಲ್ಲಿಕೆ ನಿಯಮ ಸಡಿಲ

    ಇಲ್ಲಿ ಎಲ್ಲರೂ ಒಂದೇ… ಯೂಟ್ಯೂಬರ್ಸ್​ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಸಮಂತಾಗೆ ಬಿಗ್​ ಶಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts